Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 126:3 - ಕನ್ನಡ ಸತ್ಯವೇದವು J.V. (BSI)

3 ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದು ನಿಜ; ಆದದರಿಂದ ನಾವು ಸಂತೋಷವುಳ್ಳವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದು ನಿಜ; ಆದುದರಿಂದ ನಾವು ಸಂತೋಷವುಳ್ಳವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪ್ರಭು ನಮಗೆ ಮಹತ್ಕಾರ್ಯ ಮಾಡಿದುದು ಖಚಿತ I ಎಂತಲೆ ನಾವಾನಂದಭರಿತರಾಗುವುದು ಉಚಿತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಹೌದು, ನಾವು ಸಂತೋಷದಿಂದ್ದೇವೆ ಯಾಕೆಂದರೆ ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರು ನಮಗೆ ಮಹತ್ಕಾರ್ಯಗಳನ್ನು ಮಾಡಿದ್ದಾರೆ; ಆದಕಾರಣ ಸಂತೋಷಿಸುತ್ತಾ ಇದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 126:3
19 ತಿಳಿವುಗಳ ಹೋಲಿಕೆ  

ಶಕ್ತನಾಗಿರುವಾತನು ನನಗೆ ದೊಡ್ಡ ಉಪಕಾರಗಳನ್ನು ಮಾಡಿದ್ದಾನೆ; ಆತನ ನಾಮವು ಪರಿಶುದ್ಧವಾದದ್ದು.


ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವದು, ನಿಮ್ಮ ಎಲುಬುಗಳು ಹಸಿಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು.


ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು. ಆಗ ಪರಲೋಕದಲ್ಲಿ ಮಹಾ ಶಬ್ದವನ್ನು ಕೇಳಿದೆನು, ಅದು - ಈಗ ಜಯವೂ ಶಕ್ತಿಯೂ ರಾಜ್ಯವೂ ನಮ್ಮ ದೇವರಿಗೆ ಉಂಟಾಯಿತು; ಆತನು ಅಭಿಷೇಕಿಸಿದವನ ಅಧಿಕಾರವು ಈಗ ಸ್ಥಾಪಿತವಾಯಿತು; ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ.


ಸದ್ಭಕ್ತರಿಗೋಸ್ಕರ ನೀನು ಇಟ್ಟುಕೊಂಡಿರುವ ಮೇಲೂ ಆಶ್ರಿತರಿಗೋಸ್ಕರ ನೀನು ಎಲ್ಲರ ಮುಂದೆ ಮಾಡಿದ ಉಪಕಾರಗಳೂ ಎಷ್ಟೋ ವಿಶೇಷವಾಗಿವೆ.


ಆತನು ತಾನು ನೇವಿುಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ; ತಾನು ಅಭಿಷೇಕಿಸಿದ ದಾವೀದನಿಗೂ ಅವನ ಸಂತತಿಯವರಿಗೂ ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.


ಆಗ ಮರಿಯಳು ಹೇಳಿದ್ದೇನಂದರೆ - ನನ್ನ ಪ್ರಾಣವು ಕರ್ತನನ್ನು ಕೊಂಡಾಡುತ್ತದೆ,


ಆ ದಿನದಲ್ಲಿ ಜನರು - ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನೇ ಯೆಹೋವನು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ, ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು ಎಂದು ಹೇಳಿಕೊಳ್ಳುವರು.


ಕರ್ತನು - ನಾನು ಅವರನ್ನು ಬಾಷಾನಿನಿಂದಲೂ ಸಮುದ್ರತಲದಿಂದಲೂ ಹಿಡಿದುತರುವೆನು.


ನಾನು ಬಡಗಣ ದಂಡನ್ನು ನಿಮ್ಮ ಕಡೆಯಿಂದ ದೂರ ತೊಲಗಿಸಿ ಹಾಳು ಬೆಗ್ಗಾಡಿಗೆ ಓಡಿಸಿ ಅದರ ಮುಂಭಾಗವನ್ನು ಮೂಡಣ ಸಮುದ್ರಕ್ಕೂ ಹಿಂಭಾಗವನ್ನು ಪಡುವಣ ಸಮುದ್ರಕ್ಕೂ ತಳ್ಳಿಬಿಡುವೆನು; ಆಹಾ, ಮಹತ್ಕಾರ್ಯಗಳನ್ನು ಮಾಡಿತು, ಅದರ [ಹೆಣಗಳ] ದುರ್ವಾಸನೆಯು ಏರುವದು, ಗಬ್ಬು ನಾರುವದು.


ಭೂವಿುಯೇ, ಹೆದರಬೇಡ, ಹರ್ಷಿಸು, ಉಲ್ಲಾಸಿಸು; ಯೆಹೋವನು ಮಹತ್ಕಾರ್ಯಗಳನ್ನು ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು