ಕೀರ್ತನೆಗಳು 127:5 - ಕನ್ನಡ ಸತ್ಯವೇದವು J.V. (BSI)5 ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು. ಊರುಬಾಗಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ ಅಂಥವರು ಅಪಮಾನಹೊಂದುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು. ಊರ ಬಾಗಿಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ ಅಂಥವರು ಅವಮಾನ ಹೊಂದುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಭಾಗ್ಯವಂತನು ಅಂಥ ಬಾಣಗಳಿಂದ ಬತ್ತಳಿಕೆ ತುಂಬಿದವನು I ಸೋತುಹೋಗದೆ ನ್ಯಾಯಲಾಯದೊಳೂ ವೈರಿಯೊಡನೆ ವಾದಿಸುವನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ತನ್ನ ಬತ್ತಳಿಕೆಯಲ್ಲಿ ಗಂಡುಮಕ್ಕಳನ್ನು ತುಂಬುವವನು ಭಾಗ್ಯವಂತನಾಗಿದ್ದಾನೆ. ಅವನಿಗೆ ಸೋಲೇ ಇಲ್ಲ. ಅವನ ಗಂಡುಮಕ್ಕಳು ಅವನ ಪರವಾಗಿಯೂ ಅವನ ಶತ್ರುಗಳ ವಿರೋಧವಾಗಿಯೂ ನ್ಯಾಯಸ್ಥ್ಥಾನಗಳಲ್ಲಿ ವಾದಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಬಾಣಗಳನ್ನು ಬತ್ತಳಿಕೆಯಿಂದ ತುಂಬಿಸಿಕೊಂಡಿರುವವರು ಧನ್ಯರು, ಶತ್ರುಗಳ ಸಂಗಡ ನ್ಯಾಯಾಲಯದಲ್ಲಿ ವಾದಿಸುವಾಗ ಅವರು ನಾಚಿಕೆಪಡರು. ಅಧ್ಯಾಯವನ್ನು ನೋಡಿ |