Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 128:5 - ಕನ್ನಡ ಸತ್ಯವೇದವು J.V. (BSI)

5 ಚೀಯೋನಿನಲ್ಲಿರುವ ಯೆಹೋವನು ನಿನ್ನನ್ನು ಆಶೀರ್ವದಿಸಲಿ; ಜೀವಮಾನವೆಲ್ಲಾ ಯೆರೂಸಲೇವಿುನ ಸೌಭಾಗ್ಯವನ್ನು ನೋಡುವವನಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಚೀಯೋನಿನಲ್ಲಿರುವ ಯೆಹೋವನು ನಿನ್ನನ್ನು ಆಶೀರ್ವದಿಸಲಿ; ಜೀವಮಾನವೆಲ್ಲಾ ಯೆರೂಸಲೇಮಿನ ಸೌಭಾಗ್ಯವನ್ನು ನೋಡುವವನಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸಿಯೋನಿನಲ್ಲಿರುವ ಪ್ರಭು ನಿನ್ನನು ಆಶೀರ್ವದಿಸಲಿ I ಜೆರುಸಲೇಮಿನ ಏಳ್ಗೆಯನು ಕಾಣು ಇಡೀ ಜೀವಮಾನದಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನು ನಿನ್ನನ್ನು ಚೀಯೋನಿನಿಂದ ಆಶೀರ್ವದಿಸಲಿ. ನಿನ್ನ ಜೀವಮಾನವೆಲ್ಲಾ ನೀನು ಜೆರುಸಲೇಮಿನಲ್ಲಿ ಆಶೀರ್ವಾದಗಳನ್ನು ಅನುಭವಿಸುವಂತಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರು ನಿನ್ನನ್ನು ಚೀಯೋನಿನೊಳಗಿಂದ ನಿನ್ನ ಜೀವಮಾನವೆಲ್ಲಾ ಆಶೀರ್ವದಿಸಲಿ; ನೀನು ಯೆರೂಸಲೇಮಿನ ಸಮೃದ್ಧಿಯನ್ನು ಕಾಣುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 128:5
9 ತಿಳಿವುಗಳ ಹೋಲಿಕೆ  

ಭೂಮ್ಯಾಕಾಶಗಳನ್ನು ಉಂಟುಮಾಡಿದ ಯೆಹೋವನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.


ತನ್ನ ಪರಿಶುದ್ಧ ನಿವಾಸದಿಂದ ನಿನಗೆ ಸಹಾಯಮಾಡಲಿ; ಚೀಯೋನಿನಿಂದ ನಿನಗೆ ಆಧಾರ ದಯಪಾಲಿಸಲಿ.


ಯೆಹೋವನ ಹೆಸರಿನಲ್ಲಿ ಒಳಗೆ ಬರುವವನಿಗೆ ಆಶೀರ್ವಾದ; ಯೆಹೋವನ ಮಂದಿರದಲ್ಲಿರುವ ನಾವು ನಿಮ್ಮನ್ನು ಆಶೀರ್ವದಿಸುತ್ತೇವೆ.


ನಮ್ಮ ಉತ್ಸವಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ; ಯೆರೂಸಲೇಮು ನೆಮ್ಮದಿಯ ನಿವಾಸವಾಗಿಯೂ ಗೂಟಕೀಳದ, ಹಗ್ಗಹರಿಯದ, ಒಂದೇ ಕಡೆ ಇರುವ ಗುಡಾರವಾಗಿಯೂ ಇರುವದನ್ನು ನೀವು ಕಣ್ಣಾರೆ ಕಾಣುವಿರಿ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯವರಗಳನ್ನು ನಮಗೆ ಕ್ರಿಸ್ತ ಯೇಸುವಿನಲ್ಲಿ ಅನುಗ್ರಹಿಸಿದ್ದಾನೆ.


ಹೊರಟುಬಂದ ಬಹು ಜನಾಂಗದವರು - ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ, ಹೋಗೋಣ! ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು. ಏಕಂದರೆ ಚೀಯೋನಿನಿಂದ ಧರ್ಮೋಪದೇಶವೂ ಯೆರೂಸಲೇವಿುನಿಂದ ಯೆಹೋವನ ವಾಕ್ಯವೂ ಹೊರಡುವವು.


ಯೆರೂಸಲೇವಿುನ ಶುಭಕ್ಕೋಸ್ಕರ ಪ್ರಾರ್ಥಿಸಿರಿ. [ಯೆರೂಸಲೇಮೇ,] ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ.


ಯೆರೂಸಲೇವಿುನಲ್ಲಿ ವಾಸಿಸುವ ಯೆಹೋವನ ಕೀರ್ತಿಯು ಚೀಯೋನಿನಿಂದ ಹೊರಗೂ ಹಬ್ಬಲಿ. ಯಾಹುವಿಗೆ ಸ್ತೋತ್ರ!


ನೀನು ಸಮರ್ಪಿಸಿದ ನೈವೇದ್ಯಗಳು ಆತನ ನೆನಪಿಗೆ ಬರಲಿ; ನೀನು ಮಾಡಿದ ಸರ್ವಾಂಗಹೋಮಗಳು ಆತನಿಗೆ ಮೆಚ್ಚಿಕೆಯಾಗಲಿ. ಸೆಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು