Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 13:1 - ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನೀನು ಇನ್ನೆಷ್ಟರವರೆಗೆ ನನ್ನನ್ನು ಸಂಪೂರ್ಣವಾಗಿ ಮರೆತಿರುವಿ? ಇನ್ನೆಲ್ಲಿಯ ತನಕ ನನಗೆ ವಿಮುಖನಾಗಿರುವಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನೀನು ಇನ್ನೆಷ್ಟರವರೆಗೆ ನನ್ನನ್ನು ಸಂಪೂರ್ಣವಾಗಿ ಮರೆತಿರುವಿ? ಇನ್ನೆಲ್ಲಿಯ ತನಕ ನನಗೆ ವಿಮುಖನಾಗಿರುವಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಎಷ್ಟುಕಾಲ ಪ್ರಭು, ನೀ ಎನ್ನ ಪೂರ್ತಿ ಮರೆತಿರುವೆ? I ಇನ್ನೆಷ್ಟರ ತನಕ ನೀನೆನಗೆ ವಿಮುಖನಾಗಿರುವೆ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ನನ್ನನ್ನು ಇನ್ನೆಷ್ಟುಕಾಲ ಮರೆತಿರುವೆ? ನನ್ನನ್ನು ಶಾಶ್ವತವಾಗಿ ಮರೆತುಬಿಡುವೆಯಾ? ಇನ್ನೆಷ್ಟುಕಾಲ ನನಗೆ ಮರೆಯಾಗಿರುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ಎಷ್ಟರವರೆಗೆ ನನ್ನನ್ನು ಮರೆಯುವಿರಿ? ಎಂದೆಂದಿಗೂ ನನ್ನನ್ನು ಮರೆಯುವಿರೋ? ಎಷ್ಟರವರೆಗೆ ನಿಮ್ಮ ಮುಖವನ್ನು ನನ್ನಿಂದ ಮರೆಮಾಡುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 13:1
15 ತಿಳಿವುಗಳ ಹೋಲಿಕೆ  

ನೀನು ವಿಮುಖನಾಗಿ ನನ್ನನ್ನು ಶತ್ರುವೆಂದೆಣಿಸಿರುವದೇಕೆ?


ಯೆಹೋವನೇ, ಇನ್ನೆಷ್ಟರವರೆಗೆ ಮರೆಯಾಗಿರುವಿ? ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಸದಾ ಉರಿಯುತ್ತಿರಬೇಕೋ?


ನೀನು ನಮ್ಮನ್ನು ಸಂಪೂರ್ಣವಾಗಿ ಮರೆತಿರುವದೇಕೆ? ಏಕೆ ನಮ್ಮನ್ನು ಇಷ್ಟು ಕಾಲ ಕೈಬಿಟ್ಟಿದ್ದೀ.


ಸೇನಾಧೀಶ್ವರನಾದ ಯೆಹೋವದೇವರೇ, ನಿನಗೆ ಮೊರೆಯಿಡುವ ನಿನ್ನ ಪ್ರಜೆಗೆ ಇನ್ನೆಷ್ಟರವರೆಗೆ ಮುನಿದಿರುವಿ?


ನನ್ನ ಪ್ರಾಣವು ಸಹ ಬಹಳವಾಗಿ ತತ್ತರಿಸುತ್ತದೆ; ಯೆಹೋವನೇ, ಎಷ್ಟರವರೆಗೂ [ನನ್ನ ಕೈ ಬಿಟ್ಟಿರುವಿ]?


ಯಾಕೆ ವಿಮುಖನಾಗಿದ್ದೀ? ನಮಗಿರುವ ಬಾಧೆಯನ್ನೂ ಹಿಂಸೆಯನ್ನೂ ಯಾಕೆ ಲಕ್ಷಿಸುವದಿಲ್ಲ?


ಕರ್ತನೇ, ಇನ್ನೆಷ್ಟರವರೆಗೆ ಸುಮ್ಮನೆ ನೋಡುತ್ತಾ ಇರುವಿ? ಅವರ ಅಪಾಯದಿಂದ ನನ್ನ ಪ್ರಾಣವನ್ನು ಬಿಡಿಸು; ನನ್ನ ಪರಮಪ್ರಿಯಪ್ರಾಣವನ್ನು ಆ ಸಿಂಹಗಳ ಬಾಯಿಗೆ ಸಿಕ್ಕದಂತೆ ತಪ್ಪಿಸು.


ಯೆಹೋವನೇ, ಏಳು; ದೇವರೇ, ಕುಗ್ಗಿದವನನ್ನು ಮರೆಯಬೇಡ; ಅವನನ್ನು ರಕ್ಷಿಸುವದಕ್ಕೆ ಕೈಚಾಚು.


ಸದಾಕಾಲವೂ ನಮ್ಮ ಮೇಲೆ ಸಿಟ್ಟುಮಾಡುವಿಯಾ? ತಲತಲಾಂತರಗಳಿಗೂ ಕೋಪವನ್ನು ಬೆಳೆಸುವಿಯೋ?


ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟದ್ದೇಕೆ? ನೀನು ಪಾಲಿಸುವ ಹಿಂಡಿನ ಮೇಲೆ ನಿನ್ನ ಕೋಪಾಗ್ನಿಯು ಹೊಗೆ ಆಡುವದೇನು?


ಆದರೆ ನಿಮ್ಮ ಅಪರಾಧಗಳೇ ನಿಮ್ಮ ದೇವರಿಂದ ನಿಮ್ಮನ್ನು ಅಗಲಿಸುತ್ತಾ ಬಂದಿವೆ; ನಿಮ್ಮ ಪಾಪಗಳೇ ಆತನು ಕೇಳಲಾರದಂತೆ ಆತನ ಮುಖಕ್ಕೆ ಅಡ್ಡವಾಗಿವೆ.


ಉದಯದಲ್ಲಿ ನಿನ್ನ ಕೃಪೆಯಿಂದ ನಮ್ಮನ್ನು ಸಂತೃಪ್ತಿಪಡಿಸು; ಆಗ ಜೀವಮಾನದಲ್ಲೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು.


ಆಗ ನಾನು ಅವರ ಮೇಲೆ ಬಲುಸಿಟ್ಟಾಗಿ ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು; ಆದದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು - ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆಹೋದದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿದವಲ್ಲಾ ಅಂದುಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು