Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 130:3 - ಕನ್ನಡ ಸತ್ಯವೇದವು J.V. (BSI)

3 ಕರ್ತನೇ, ಯಾಹುವೇ, ನೀನು ಪಾಪಗಳನ್ನು ಎಣಿಸುವದಾದರೆ ನಿನ್ನ ಮುಂದೆ ಯಾರು ನಿಂತಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪಾಪಗಳ ನೀ ಪಟ್ಟಿಮಾಡಿದೆಯಾದರೆ ಪ್ರಭು I ನಿನ್ನ ಮುಂದೆ ಯಾರುತಾನೆ ನಿಲ್ಲಬಲ್ಲರು ವಿಭು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನೇ, ನೀನು ಮನುಷ್ಯರನ್ನು ಅವರೆಲ್ಲರ ಪಾಪಗಳಿಗೆ ತಕ್ಕಂತೆ ದಂಡಿಸಿದರೆ ಒಬ್ಬನೂ ಜೀವಂತವಾಗಿ ಉಳಿಯಲಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರೇ, ನೀವು ಪಾಪಗಳನ್ನು ಎಣಿಸಿದರೆ, ನಿಮ್ಮ ಮುಂದೆ ಯಾರು ನಿಲ್ಲುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 130:3
14 ತಿಳಿವುಗಳ ಹೋಲಿಕೆ  

ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.


ನೀನು ಮಹಾಭಯಂಕರನು; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?


ಅವರ ಕೋಪವು ಕಾಣಿಸುವ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.


ಅದೇನಂದರೆ - ನಾನು ತಪ್ಪುಮಾಡಿದರೆ ನೀನು ಗಮನಿಸುತ್ತೀ; ನನ್ನ ದೋಷವನ್ನು ಕ್ಷವಿುಸುವದಿಲ್ಲ.


ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ ಅಗಸನ ಚೌಳಿಗೂ ಸಮಾನನಾಗಿದ್ದಾನೆ;


ಆತನ ಸಿಟ್ಟಿಗೆ ಯಾರು ತಡೆದಾರು? ಆತನ ರೋಷಾಗ್ನಿಗೆ ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ, ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲುತ್ತಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.


ನರನು ಎಷ್ಟರವನು! ಅವನು ಪರಿಶುದ್ಧನಾಗಿರುವದು ಸಾಧ್ಯವೋ? ಸ್ತ್ರೀಯಲ್ಲಿ ಹುಟ್ಟಿದವನು ನೀತಿವಂತನಾಗಿರಬಹುದೇ?


ನಾನು ನೀತಿವಂತನಾಗಿದ್ದರೂ ನನ್ನ ಬಾಯೇ ನನ್ನನ್ನು ಅಪರಾಧಿಯೆಂದು ತೋರ್ಪಡಿಸುವದು. ನಾನು ನಿರ್ದೋಷಿಯಾಗಿದ್ದರೂ ಆತನು ನನ್ನನ್ನು ದುರ್ಮಾರ್ಗಿಯೆಂದು ನಿರೂಪಿಸುವನು.


ಇವರ ಮೊಂಡತನ, ದುಷ್ಟತ್ವ, ಪಾಪ ಇವುಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿನ್ನ ಸೇವಕರಾದ ಅಬ್ರಾಹಾಮ್ ಇಸಾಕ್ ಯಾಕೋಬರನ್ನು ನೆನಪಿಗೆ ತಂದುಕೋ.


ಯೆಹೋವನೇ, ಇಸ್ರಾಯೇಲ್‍ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀನು ಧರ್ಮಸ್ವರೂಪನೆಂದು ಪ್ರಕಟವಾಯಿತು. ನಾವಾದರೋ ನಿನ್ನ ದೃಷ್ಟಿಯಲ್ಲಿ ಅಪರಾಧಿಗಳು. ಈ ನಮ್ಮ ದುಷ್ಕೃತ್ಯದ ನಿವಿುತ್ತವಾಗಿ ನಿನ್ನೆದುರಿನಲ್ಲಿ ನಿಲ್ಲಲಾರೆವು ಎಂಬದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು