Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 134:1 - ಕನ್ನಡ ಸತ್ಯವೇದವು J.V. (BSI)

1 ಎಲೈ ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, ಯೆಹೋವನನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, ಬನ್ನಿರಿ, ಯೆಹೋವನನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಭಜಿಸಿರಿ ಪ್ರಭುವನು ಆತನ ಸಕಲ ಸೇವಕರೇ I ಆತನ ಮಂದಿರದಲಿ ರಾತ್ರಿ ಕಾವಲಿರುವವರೇ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನ ಸೇವಕರೆಲ್ಲರೇ, ಆತನನ್ನು ಕೊಂಡಾಡಿರಿ. ರಾತ್ರಿಯೆಲ್ಲಾ ದೇವಾಲಯದಲ್ಲಿ ಸೇವೆ ಮಾಡಿದವರೇ, ಆತನಿಗೆ ಸ್ತೋತ್ರಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರ ಆಲಯದಲ್ಲಿ ಪ್ರತಿ ರಾತ್ರಿ ಸೇವೆ ಸಲ್ಲಿಸುವ ಯೆಹೋವ ದೇವರ ಎಲ್ಲಾ ಸೇವಕರೇ, ಯೆಹೋವ ದೇವರನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 134:1
32 ತಿಳಿವುಗಳ ಹೋಲಿಕೆ  

ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿದನು.


ವಾದ್ಯಗಾರರ ಪಟ್ಟಿ. ಅವರು ಲೇವಿಯ ಗೋತ್ರಗಳಲ್ಲಿ ಪ್ರಧಾನರೂ ದೇವಾಲಯದ ಕೋಣೆಗಳಲ್ಲಿ ವಾಸಿಸುವವರೂ ಆಗಿದ್ದರು. ಅವರು ಹಗಲಿರುಳೂ ಕೆಲಸದಲ್ಲಿರುತ್ತಿದ್ದದರಿಂದ ಇತರ ಸೇವೆಯಿಂದ ಬಿಡುಗಡೆ ಹೊಂದಿದ್ದರು.


ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು - ದೇವರ ದಾಸರೆಲ್ಲರೇ, ದೇವರಿಗೆ ಭಯಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು.


ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ; ಯೆಹೋವನು ತನ್ನನ್ನು ಆರಾಧಿಸುವದಕ್ಕೂ ಧೂಪಹಾಕುವದಕ್ಕೂ ನಿಮ್ಮನ್ನು ತನ್ನ ಸಾನ್ನಿಧ್ಯಸೇವಕರನ್ನಾಗಿ ಆರಿಸಿಕೊಂಡನಲ್ಲಾ ಎಂದು ಹೇಳಿದನು.


ಯೆಹೋವನ ಮಂದಿರಕ್ಕೆ ಹೋಗೋಣ, ಬಾ ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು.


ಆದದರಿಂದ ನೀವು ಯೆಹೋವನ ಆಜ್ಞೆಯ ಮೇರೆಗೆ ಏಳು ದಿನವೂ ಹಗಲಿರುಳು ದೇವದರ್ಶನದ ಗುಡಾರದ ಬಾಗಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ; ಹೀಗೆಯೇ ನನಗೆ ಅಪ್ಪಣೆಯಾಯಿತು.


ಆಕೆ ದೇವಾಲಯವನ್ನು ಬಿಟ್ಟುಹೋಗದೆ ಉಪವಾಸ ವಿಜ್ಞಾಪನೆಗಳಿಂದ ರಾತ್ರಿಹಗಲೂ ದೇವರ ಸೇವೆಯನ್ನು ಮಾಡುತ್ತಿದ್ದಳು.


ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವದು?


ಯೆಹೋವನೇ, ದಾವೀದನ ಹಿತಕ್ಕೋಸ್ಕರ ಅವನ ಶ್ರಮಗಳನ್ನು ನೆನಪುಮಾಡಿಕೋ.


ಯೆಹೋವನೇ, ನನ್ನ ಎದೆಯಲ್ಲಿ ಹವ್ಮಿುಲ್ಲ; ನನಗೆ ಸೊಕ್ಕಿನ ಕಣ್ಣಿಲ್ಲ; ಅಸಾಧ್ಯಕಾರ್ಯಗಳಲ್ಲಿ ಕೈಹಾಕುವದಿಲ್ಲ.


ಕಾವಲುಗಾರರು ಬೆಳಗಾಗುವದನ್ನು ಮುನ್ನೋಡುತ್ತಾರಲ್ಲಾ; ಕಾವಲುಗಾರರು ಬೆಳಗಾಗುವದನ್ನು ಮುನ್ನೋಡುವದಕ್ಕಿಂತ ವಿಶೇಷವಾಗಿ ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ.


ನಮ್ಮ ಯೌವನಾರಭ್ಯ ಶತ್ರುಗಳು ನಮ್ಮನ್ನು ಹಲವು ಸಾರಿ ಬಾಧಿಸಿದ್ದಾರೆಂದು ಇಸ್ರಾಯೇಲು ಹೇಳಲಿ.


ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು.


ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರಿಗಿ ಚೀಯೋನಿಗೆ ಬರಮಾಡಿದಾಗ ನಾವು ಕನಸುಕಂಡವರಂತಿದ್ದೆವು.


ಪರಲೋಕದಲ್ಲಿ ಆಸೀನನಾಗಿರುವಾತನೇ, ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ.


ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವದಕ್ಕೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವದಕ್ಕೂ ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವದಕ್ಕೂ ಅವರನ್ನು ನೇವಿುಸಿದನು. ಅವರು ಇಂದಿನವರೆಗೂ ಆ ಕೆಲಸವನ್ನು ನಡಿಸುತ್ತಾರೆ.


ಆಹಾ, ಸಹೋದರರು ಒಂದಾಗಿರುವದು ಎಷ್ಟೋ ಒಳ್ಳೇದು, ಎಷ್ಟೋ ರಮ್ಯವಾದದ್ದು!


ಆತನ ಸೈನ್ಯಗಳೇ, ಆತನ ಮೆಚ್ಚಿಕೆಯನ್ನು ನೆರವೇರಿಸುವ ಸೇವಕರೇ, ಯೆಹೋವನನ್ನು ಕೊಂಡಾಡಿರಿ.


ಯೆಹೋವನು ಮನೇ ಕಟ್ಟದಿದ್ದರೆ ಅದನ್ನು ಕಟ್ಟುವವರು ಕಷ್ಟಪಡುವದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ ಕಾವಲುಗಾರರು ಅದನ್ನು ಕಾಯುವದು ವ್ಯರ್ಥ.


ಯೆಹೋವನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವದಿಲ್ಲ, ಸದಾ ಸ್ಥಿರವಾಗಿರುತ್ತದೆ.


ಯೆಹೋವನು ನಮಗಿಲ್ಲದಿದ್ದರೆ ನಮ್ಮ ಗತಿ ಏನಾಗುತ್ತಿತ್ತೆಂದು ಇಸ್ರಾಯೇಲ್ಯರೇ ಹೇಳಲಿ.


ಅವರೂ ಅವರ ಮಕ್ಕಳೂ ಯೆಹೋವನ ಮಂದಿರದ ಅಂದರೆ ಗುಡಾರದ ಬಾಗಲುಗಳನ್ನು ಕಾಯುತ್ತಿದ್ದರು.


ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆಮಾಡುತ್ತಾ ಇದ್ದಾರೆ; ಸಿಂಹಾಸನದಲ್ಲಿ ಕೂತಿರುವಾತನು ಗುಡಾರದಂತೆ ಅವರನ್ನು ಆವರಿಸುವನು.


ಯೆಹೋವನೇ, ಜಲಾಗಾಧದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ.


ಅವರು ರಾತ್ರಿಯಲ್ಲಿಯೂ ದೇವಾಲಯದ ಸುತ್ತಲೂ ಇಳುಕೊಂಡು ಅವುಗಳನ್ನು ಕಾಯುತ್ತಿದ್ದರು; ಪ್ರತಿದಿನ ಬೆಳಿಗ್ಗೆ ಅವುಗಳನ್ನು ತೆರೆಯುತ್ತಿದ್ದರು.


ನಿಮ್ಮ ಸಹೋದರರಾದ ಇಸ್ರಾಯೇಲ್ಯರ ಒಂದೊಂದು ಗೋತ್ರಶಾಖೆಗೋಸ್ಕರ ನಿಮ್ಮಲ್ಲಿ ಒಂದೊಂದು ಗುಂಪಿನವರು ಪವಿತ್ರಸ್ಥಾನದಲ್ಲಿ ನಿಂತು ಪಸ್ಕದ ಕುರಿಯನ್ನು ವಧಿಸಲಿ.


ಇವರ ಸಹೋದರರಾದ ಬಕ್ಬುಕ್ಯ, ಉನ್ನೀ ಎಂಬವರು ಭಜನಸೇವೆಯಲ್ಲಿ ಇವರೆದುರಿಗೆ ನಿಂತು ಹಾಡುವವರು.


ನಿನ್ನಲ್ಲಿ ಬಲವನ್ನು ಹೊಂದುವ ಮನುಷ್ಯರು ಧನ್ಯರು. ಅವರು ಯಾತ್ರಾಪರರಾಗಿ


ಯಾಹುವಿಗೆ ಸ್ತೋತ್ರ! ಯೆಹೋವನ ಸೇವಕರೇ, ಸ್ತೋತ್ರಮಾಡಿರಿ; ಯೆಹೋವನಾಮಸ್ತುತಿಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು