Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 135:13 - ಕನ್ನಡ ಸತ್ಯವೇದವು J.V. (BSI)

13 ಯೆಹೋವನೇ, ನಿನ್ನ ನಾಮವು ಶಾಶ್ವತವಾದದ್ದು; ಯೆಹೋವನೇ, ನೀನು ತಲತಲಾಂತರಕ್ಕೂ ಸ್ಮರಿಸಲ್ಪಡುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನೇ, ನಿನ್ನ ನಾಮವು ಶಾಶ್ವತವಾದದ್ದು; ಯೆಹೋವನೇ, ನೀನು ತಲತಲಾಂತರಕ್ಕೂ ಸ್ಮರಿಸಲು ಯೋಗ್ಯನಾಗಿರುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಿನ್ನ ನಾಮ ಪ್ರಭು ಶಾಶ್ವತ I ನಿನ್ನ ಸ್ಮರಣೆಯೂ ಅನವರತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನೇ, ನೀನು ಸದಾಕಾಲ ಪ್ರಸಿದ್ಧನಾಗಿರುವೆ! ಯೆಹೋವನೇ, ಜನರು ನಿನ್ನನ್ನು ಸದಾಕಾಲ ನೆನಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರೇ, ನಿಮ್ಮ ನಾಮವೂ, ನಿಮ್ಮ ಪ್ರಭಾವವೂ ತಲತಲಾಂತರಕ್ಕೂ ಸ್ಮರಣೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 135:13
12 ತಿಳಿವುಗಳ ಹೋಲಿಕೆ  

ಯೆಹೋವನೇ, ನೀನಾದರೋ ಸದಾ ಸಿಂಹಾಸನಾರೂಢನಾಗಿರುವಿ; ನಿನ್ನ ನಾಮವು ತಲತಲಾಂತರಕ್ಕೂ ಸ್ಮರಿಸಲ್ಪಡುವದು.


ದೇವರು ಮೋಶೆಗೆ ಮತ್ತೂ ಹೇಳಿದ್ದೇನಂದರೆ - ನೀನು ಇಸ್ರಾಯೇಲ್ಯರಿಗೆ ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಬೇಕು. ಇದು ಸದಾಕಾಲಕ್ಕೂ ನನ್ನ ಹೆಸರು; ಇದು ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ.


ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.


ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು.


ಆದದರಿಂದ ನೀವು ಹೀಗೆ ಪ್ರಾರ್ಥನೆಮಾಡತಕ್ಕದ್ದು -


(ಯೆಹೋವನೆಂಬದೇ ಆತನನ್ನು ಸ್ಮರಿಸುವ ನಾಮಧೇಯ).


ಅವರು ಚೀಯೋನಿನಲ್ಲಿ ಯೆಹೋವನಾಮವನ್ನು ವರ್ಣಿಸುವಂತೆಯೂ ಯೆರೂಸಲೇವಿುನಲ್ಲಿ ತನ್ನ ಕೀರ್ತನೆಯನ್ನು ಹಾಡುವಂತೆಯೂ ಮಾಡಿದ್ದಾನೆ.


ಯೆಹೋವನೇ, ನಿತ್ಯವೂ ನಿನ್ನ ಕೃಪಾತಿಶಯವನ್ನು ಹಾಡಿಹರಸುವೆನು; ನಿನ್ನ ಸತ್ಯತೆಯನ್ನು ಮುಂದಣ ಸಂತಾನದವರೆಲ್ಲರಿಗೂ ನನ್ನ ಬಾಯಿ ತಿಳಿಯಮಾಡುವದು.


ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು. ಆಕಾಶಮಂಡಲದಲ್ಲಿ ನಿನ್ನ ವೈಭವವನ್ನು ಪ್ರಕಾಶಪಡಿಸಿದ್ದೀ.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.


ನೀನು ಎದ್ದು ಚೀಯೋನನ್ನು ಕರುಣಿಸುವಿ. ಅದಕ್ಕೆ ಕೃಪೆತೋರಿಸುವ ಸಮಯ ಇದೇ; ನಿಯವಿುತಕಾಲವು ಬಂದದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು