ಕೀರ್ತನೆಗಳು 135:7 - ಕನ್ನಡ ಸತ್ಯವೇದವು J.V. (BSI)7 ಆತನು ಭೂವಿುಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ; ಮಳೆಗೋಸ್ಕರ ವಿುಂಚನ್ನು ಹೊಳೆಯಮಾಡುತ್ತಾನೆ; ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸಮಾಡುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; ಮಳೆಗೋಸ್ಕರ ಮಿಂಚನ್ನು ಹೊಳೆಯುವಂತೆ ಮಾಡುತ್ತಾನೆ; ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಏಳಮಾಡುವನು ದಿಗಂತದೊಳು ಮೋಡವನು I ಹೊಳೆಯಮಾಡುವನು ಮಳೆಗೋಸ್ಕರ ಮಿಂಚನು I ಬೀಸಮಾಡುವನು ಉಗ್ರಾಣದಿಂದ ಗಾಳಿಯನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆತನು ಭೂಮಿಯ ಮೇಲೆಲ್ಲಾ ಮೋಡಗಳನ್ನು ಏಳಮಾಡುವನು; ಮಿಂಚನ್ನೂ ಮಳೆಯನ್ನೂ ಬರಮಾಡುವನು; ಗಾಳಿಯನ್ನು ಬೀಸಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಭೂಮಿಯ ಎಲ್ಲಕಡೆಗಳಿಂದ ಮೋಡಗಳನ್ನು ಏಳುವಂತೆ ಮಾಡುತ್ತಾರೆ. ಮಳೆಯನ್ನೂ ಮಿಂಚನ್ನೂ ಕಳುಹಿಸುತ್ತಾರೆ. ಗಾಳಿಯನ್ನು ತಮ್ಮ ಉಗ್ರಾಣಗಳಿಂದ ಬೀಸುವಂತೆ ಮಾಡುತ್ತಾರೆ. ಅಧ್ಯಾಯವನ್ನು ನೋಡಿ |