Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 136:2 - ಕನ್ನಡ ಸತ್ಯವೇದವು J.V. (BSI)

2 ದೇವಾಧಿದೇವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನ ಕೃಪೆಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದೇವಾಧಿದೇವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದೇವಾದಿ ದೇವನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವಾಧಿದೇವನಿಗೆ ಕೃತಜ್ಞತಾಸ್ತುತಿಮಾಡಿರಿ! ಆತನ ಪ್ರೀತಿ ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇವಾಧಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸಿರಿ; ದೇವರ ಪ್ರೀತಿಯು ಎಂದೆಂದಿಗೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 136:2
8 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ ಕರ್ತರ ಕರ್ತನಾಗಿಯೂ ಇದ್ದಾನೆ; ಆತನು ಪರಮದೇವರೂ ಪರಾಕ್ರವಿುಯೂ ಭಯಂಕರನೂ ಆಗಿದ್ದಾನೆ. ಆತನು ದಾಕ್ಷಿಣ್ಯ ನೋಡುವವನಲ್ಲ, ಲಂಚತೆಗೆದುಕೊಳ್ಳುವವನಲ್ಲ.


ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ; ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ.


ಅವನ ಮಾತಿಗೆ ಪ್ರತ್ಯುತ್ತರವಾಗಿ - ನೀನು ಈ ರಹಸ್ಯವನ್ನು ಬೈಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ ರಾಜರ ಒಡೆಯನೂ ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆಂಬುದು ನಿಶ್ಚಯ ಎಂದು ಹೇಳಿದನು.


ನಮ್ಮ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವನು; ನಾನು ಕಟ್ಟಿಸುವ ಆಲಯವೂ ದೊಡ್ಡದಾಗಿರಬೇಕು.


ಇದಕ್ಕೆ ಸಾಕ್ಷಿ; ದೇವದೇವನಾದ ಯೆಹೋವನಿಗೆ ಇದು ಗೊತ್ತುಂಟು. ಇಸ್ರಾಯೇಲ್ಯರಿಗೂ ಗೊತ್ತಾಗುವದು. ನಾವು ದ್ರೋಹಿಗಳೂ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರೂ ಆಗಿದ್ದರೆ ಆತನು ನಮ್ಮನ್ನು ಈ ಹೊತ್ತೇ ಕೈಬಿಡಲಿ.


ಆತನು ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ ಆ ಐಗುಪ್ತ್ಯರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ ಆ ವಿಷಯದಲ್ಲಿ ಅವರನ್ನು ತಗ್ಗಿಸಿದ್ದರಿಂದ ಯೆಹೋವನೇ ಎಲ್ಲಾ ದೇವರುಗಳಿಗಿಂತಲೂ ದೊಡ್ಡವನೆಂದು ಈಗ ತಿಳಿದುಕೊಂಡಿದ್ದೇನೆ ಅಂದನು.


ವಿಗ್ರಹಗಳಲ್ಲಿ ಹಿಗ್ಗುವ ಮೂರ್ತಿಪೂಜಕರೆಲ್ಲಾ ತಲೆಬೊಗ್ಗಿಸಲಿ; ದೇವರುಗಳಿರಾ, ನೀವೆಲ್ಲರು ಆತನಿಗೆ ಅಡ್ಡಬೀಳಿರಿ.


ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ ದೇವರುಗಳೊಳಗೆ ನ್ಯಾಯವಿಧಿಸುತ್ತಾನೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು