Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 136:4 - ಕನ್ನಡ ಸತ್ಯವೇದವು J.V. (BSI)

4 ಮಹತ್ಕಾರ್ಯಗಳನ್ನು ನಡಿಸುವದಕ್ಕೆ ಆತನೊಬ್ಬನೇ ಶಕ್ತನು; ಆತನ ಕೃಪೆಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮಹತ್ಕಾರ್ಯಗಳನ್ನು ನಡೆಸುವುದಕ್ಕೆ ಆತನೊಬ್ಬನೇ ಶಕ್ತನು, ಆತನ ಪ್ರೀತಿಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮಹತ್ಕಾರ್ಯವೆಸಗಬಲ್ಲ ಆ ಏಕೈಕನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಮಹತ್ಕಾರ್ಯಗಳನ್ನು ಮಾಡಬಲ್ಲ ಆತನಿಗೆ ಸ್ತೋತ್ರಮಾಡಿರಿ. ಆತನ ಪ್ರೀತಿ ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರೊಬ್ಬರೇ ಮಹಾ ಅದ್ಭುತಗಳನ್ನು ಮಾಡುತ್ತಾರೆ; ದೇವರ ಪ್ರೀತಿಯು ಎಂದೆಂದಿಗೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 136:4
5 ತಿಳಿವುಗಳ ಹೋಲಿಕೆ  

ಮಹತ್ಕಾರ್ಯಗಳನ್ನು ನಡಿಸುವದರಲ್ಲಿ ಅದ್ವಿತೀಯನೂ ಇಸ್ರಾಯೇಲ್ಯರ ದೇವರೂ ಆದ ಯೆಹೋವ ದೇವರಿಗೆ ಸ್ತೋತ್ರವು.


ಮಹೋನ್ನತನೂ ಮಹತ್ಕಾರ್ಯಗಳನ್ನು ನಡಿಸುವವನೂ ನೀನು; ದೇವರು ನೀನೊಬ್ಬನೇ.


ಆತನು ಅಪ್ರಮೇಯ ಮಹಾಕಾರ್ಯಗಳನ್ನೂ ಅಸಂಖ್ಯವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ;


ದೇವರ ದಾಸನಾದ ಮೋಶೆಯ ಹಾಡನ್ನೂ ಯಜ್ಞದ ಕುರಿಯಾದಾತನ ಹಾಡನ್ನೂ ಹಾಡುತ್ತಾ - ದೇವರಾದ ಕರ್ತನೇ, ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಸರ್ವಜನಾಂಗಗಳ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ;


ಯೆಹೋವನೇ, ದೇವರುಗಳಲ್ಲಿ ನಿನ್ನ ಸಮಾನನು ಯಾವನು? ಪರಿಶುದ್ಧತ್ವದಿಂದ ಸರ್ವೋತ್ತಮನೂ ಪ್ರಖ್ಯಾತ ಕೃತ್ಯಗಳನ್ನು ಮಾಡಿರುವದರಿಂದ ಭಯಂಕರನೂ ಅದ್ಭುತಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನನು ಎಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು