Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 136:5 - ಕನ್ನಡ ಸತ್ಯವೇದವು J.V. (BSI)

5 ಆತನು ಆಕಾಶವನ್ನು ಜ್ಞಾನದಿಂದ ನಿರ್ಮಿಸಿದ್ದಾನೆ; ಆತನ ಕೃಪೆಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆತನು ಆಕಾಶವನ್ನು ಜ್ಞಾನದಿಂದ ನಿರ್ಮಿಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಜ್ಞಾನದಿಂದ ಜಗವನು ನಿರ್ಮಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಜ್ಞಾನದಿಂದ ಆಕಾಶವನ್ನು ನಿರ್ಮಿಸಿದ ಆತನೊಬ್ಬನನ್ನೇ ಸ್ತುತಿಸಿರಿ! ಆತನ ಪ್ರೀತಿ ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ತಮ್ಮ ಜ್ಞಾನದಿಂದ ಪರಲೋಕಗಳನ್ನು ನಿರ್ಮಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 136:5
11 ತಿಳಿವುಗಳ ಹೋಲಿಕೆ  

ಆದಿಯಲ್ಲಿ ದೇವರು ಆಕಾಶವನ್ನೂ ಭೂವಿುಯನ್ನೂ ಉಂಟುಮಾಡಿದನು.


ಯೆಹೋವನೇ, ನಿನ್ನ ಕೈಕೆಲಸಗಳು ಎಷ್ಟೋ ವಿಧವಾಗಿವೆ. ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿದ್ದೀ; ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ.


ಆತನು ತನ್ನ ಶಕ್ತಿಯಿಂದ ಭೂವಿುಯನ್ನು ನಿರ್ಮಿಸಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ;


ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು; ಅದರಲ್ಲಿರುವದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು.


ಆತನು ತನ್ನ ಶಕ್ತಿಯಿಂದ ಭೂವಿುಯನ್ನು ನಿರ್ಮಿಸಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ;


ದೇವರು ವಿಸ್ತಾರವಾದ ಗುಮಟವನ್ನು ಮಾಡಿ ಅದರ ಕೆಳಗಿದ್ದ ನೀರುಗಳನ್ನು ಅದರ ಮೇಲಿದ್ದ ನೀರುಗಳಿಂದ ವಿಂಗಡಿಸಿದನು; ಹಾಗೆಯೇ ಆಯಿತು.


ದೇವರು ಆ ಗುಮಟಕ್ಕೆ ಆಕಾಶವೆಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಎರಡನೆಯ ದಿನವಾಯಿತು.


ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಯಾಕೆ ನೆನಸಬೇಕು? ಮಾನವನು ಎಷ್ಟರವನು, ಅವನಲ್ಲಿ ಯಾಕೆ ಲಕ್ಷ್ಯವಿಡಬೇಕು?


ಭೂಮ್ಯಾಕಾಶಗಳನ್ನು ಉಂಟುಮಾಡಿದ ಯೆಹೋವನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು