Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 138:4 - ಕನ್ನಡ ಸತ್ಯವೇದವು J.V. (BSI)

4 ಯೆಹೋವನೇ, ಭೂರಾಜರೆಲ್ಲರು ನೀನು ಉಸಿರಿದ ನುಡಿಗಳನ್ನು ಕೇಳಿ ನಿನ್ನನ್ನು ಸ್ತುತಿಸುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನೇ, ಭೂರಾಜರೆಲ್ಲರು ನೀನು ನುಡಿದ ನುಡಿಗಳನ್ನು ಕೇಳಿ ನಿನ್ನನ್ನು ಸ್ತುತಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿನ್ನ ಗುಣಗಾನ ಮಾಳ್ಪರು ಪ್ರಭು, ಭೂರಾಜರೆಲ್ಲರು I ಏಕೆನೆ, ನೀ ಉಸುರಿದ ನುಡಿಗಳನು ಕೇಳ್ವರವರೆಲ್ಲರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನೇ, ಭೂರಾಜರುಗಳೆಲ್ಲಾ ನಿನ್ನ ನುಡಿಗಳನ್ನು ಕೇಳಿ ನಿನ್ನನ್ನು ಕೊಂಡಾಡಬೇಕೆಂಬುದು ನನ್ನ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರೇ, ನಿಮ್ಮ ತೀರ್ಪುಗಳನ್ನು ಭೂಮಿಯ ಅರಸರೆಲ್ಲರೂ ಕೇಳುವಾಗ, ನಿಮ್ಮನ್ನು ಕೊಂಡಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 138:4
14 ತಿಳಿವುಗಳ ಹೋಲಿಕೆ  

ಯೆಹೋವನು ಗತಿಹೀನರ ಮೊರೆಯನ್ನು ತಿರಸ್ಕರಿಸದೆ ನೆರವೇರಿಸಿದನೆಂದೂ


ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; ಸರ್ವಜನಾಂಗಗಳು ಅವನನ್ನು ಸೇವಿಸಲಿ.


ಭೂಮಂಡಲದವರೆಲ್ಲರು ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; [ಯೆಹೋವನೇ,] ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.


ನಿನ್ನ ನಾಮ ಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.


ಅದರ ಬೆಳಕಿನಿಂದ ಸರ್ವಜನಾಂಗದವರು ಸಂಚಾರಮಾಡುವರು; ಭೂರಾಜರು ತಮ್ಮ ವೈಭವವನ್ನು ಅಲ್ಲಿಗೆ ತರುವರು.


ಏಳನೆಯ ದೇವದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾ ಶಬ್ದಗಳುಂಟಾಗಿ - ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ಉಂಟಾಯಿತು; ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು ಎಂದು ಹೇಳಿದವು.


ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.


ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಗಳು ನಿನಗೆ ಸಾಕುತಾಯಿಯರು ಆಗುವರು; ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳಿಯನ್ನು ನೆಕ್ಕುವರು; ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡರು ಎಂದು ನಿನಗೆ ಗೊತ್ತಾಗುವದು.


ಜನಾಂಗಗಳೂ ರಾಜ್ಯಗಳೂ ಕೂಡಿಬಂದು ಇವರೊಡನೆ ಯೆಹೋವನನ್ನು ಸೇವಿಸುತ್ತವೆ ಎಂದು ಹೇಳುವದು.


ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.


ಆಗ ನಿನ್ನ ಮಾರ್ಗವನ್ನು ದ್ರೋಹಿಗಳಿಗೆ ಬೋಧಿಸುವೆನು; ಪಾಪಿಗಳು ನಿನ್ನ ಕಡೆಗೆ ತಿರುಗಿಕೊಳ್ಳುವರು.


ಕರ್ತನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು