Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 139:14 - ಕನ್ನಡ ಸತ್ಯವೇದವು J.V. (BSI)

14 ನೀನು ನನ್ನನ್ನು ಅದ್ಭುತವಾಗಿಯೂ ವಿಚಿತ್ರವಾಗಿಯೂ ರಚಿಸಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ. ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ, ನಿನ್ನನ್ನು ಕೊಂಡಾಡುತ್ತೇನೆ. ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು, ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿನಗೆ ವಂದನೆ, ನೀ ನನ್ನ ಭಯಭಕ್ತಿಗೆ ಪಾತ್ರ I ನಿನ್ನ ಕೃತ್ಯಗಳು ಅದ್ಭುತಕರ ಹಾಗೂ ವಿಚಿತ್ರ I ನನ್ನ ಬಗ್ಗೆ ನಿನಗಿರುವ ಪೂರ್ಣ ಅರಿವು ಸಮರ್ಥ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಿನ್ನ ಎಲ್ಲಾ ಅದ್ಭುತಕಾರ್ಯಗಳಿಗಾಗಿ ನಿನಗೆ ಕೃತಜ್ಞತಾಸ್ತುತಿ ಮಾಡುವೆನು. ನಿನ್ನ ಕಾರ್ಯಗಳು ಅದ್ಭುತಕರವಾಗಿವೆಯೆಂದು ನಾನು ಗ್ರಹಿಸಿಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀವು ನನ್ನನ್ನು ವಿಚಿತ್ರವಾಗಿಯೂ ವಿಸ್ಮಯವಾಗಿಯೂ ಸೃಷ್ಟಿಸಿದ್ದರಿಂದ ನಾನು ನಿಮ್ಮನ್ನು ಸ್ತುತಿಸುತ್ತೇನೆ; ನಿಮ್ಮ ಕೃತ್ಯಗಳು ಆಶ್ಚರ್ಯಕರವಾಗಿವೆ ಎಂದು, ನಾನು ಪೂರ್ಣವಾಗಿ ತಿಳಿದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 139:14
8 ತಿಳಿವುಗಳ ಹೋಲಿಕೆ  

ಯೆಹೋವನ ಕೃತ್ಯಗಳು ಮಹತ್ತಾದವುಗಳು; ಅವುಗಳಲ್ಲಿ ಸಂತೋಷಿಸುವವರು ಅವುಗಳನ್ನೇ ಧ್ಯಾನಿಸುವರು.


ಯೆಹೋವನೇ, ನಿನ್ನ ಕೈಕೆಲಸಗಳು ಎಷ್ಟೋ ವಿಧವಾಗಿವೆ. ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿದ್ದೀ; ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ.


ಆತನು ಅಪ್ರಮೇಯ ಮಹಾಕಾರ್ಯಗಳನ್ನೂ ಅಸಂಖ್ಯವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ;


ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯವು; ಅವು ಅಸಂಖ್ಯಾತವಾಗಿವೆ.


ದೇವರ ದಾಸನಾದ ಮೋಶೆಯ ಹಾಡನ್ನೂ ಯಜ್ಞದ ಕುರಿಯಾದಾತನ ಹಾಡನ್ನೂ ಹಾಡುತ್ತಾ - ದೇವರಾದ ಕರ್ತನೇ, ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಸರ್ವಜನಾಂಗಗಳ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ;


ಪಶುಪ್ರಾಯನು ಅರಿಯನು; ಹುಚ್ಚನು ತಿಳಿಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು