Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 139:21 - ಕನ್ನಡ ಸತ್ಯವೇದವು J.V. (BSI)

21 ಯೆಹೋವನೇ, ನಿನ್ನನ್ನು ದ್ವೇಷಿಸುವವರನ್ನು ನಾನು ದ್ವೇಷಿಸುತ್ತೇನಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೋವನೇ, ನಿನ್ನನ್ನು ದ್ವೇಷಿಸುವವರನ್ನು ನಾನು ದ್ವೇಷಿಸುತ್ತೇನಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಪ್ರಭು, ನಿನ್ನ ದ್ವೇಷಿಗಳನು ನಾ ದ್ವೇಷಿಸದಿರುವೆನೆ? I ನಿನ್ನ ವಿರೋಧಿಗಳನ್ನು ನಾ ತಿರಸ್ಕಾರ ಮಾಡದಿರುವೆನೆ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೋವನೇ, ನಿನ್ನನ್ನು ದ್ವೇಷಿಸುವವರನ್ನು ನಾನೂ ದ್ವೇಷಿಸುವೆನು. ನಿನ್ನನ್ನು ವಿರೋಧಿಸುವವರನ್ನು ನಾನೂ ವಿರೋಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೆಹೋವ ದೇವರೇ, ನಿಮ್ಮನ್ನು ದ್ವೇಷಿಸುವವರನ್ನು ನಾನು ದ್ವೇಷಿಸದಿರುವೆನೋ? ನಿಮಗೆ ವಿರೋಧವಾಗಿ ತಿರುಗಿ ಬಿದ್ದವರನ್ನು ನಾನು ಹೀನೈಸದಿರುವೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 139:21
12 ತಿಳಿವುಗಳ ಹೋಲಿಕೆ  

ನಿನ್ನ ನುಡಿಯನ್ನು ಕೈಕೊಳ್ಳದ ಧರ್ಮಭ್ರಷ್ಟರನ್ನು ನೋಡಿ ಅಸಹ್ಯಪಟ್ಟಿದ್ದೇನೆ.


ಸುಳ್ಳುವಿಗ್ರಹಗಳನ್ನು ಅವಲಂಬಿಸಿದವರನ್ನು ನಾನು ದ್ವೇಷಿಸುತ್ತೇನೆ; ನಾನಾದರೋ ಯೆಹೋವನಲ್ಲಿ ಭರವಸವಿಟ್ಟಿದ್ದೇನೆ.


ನಿನ್ನ ಕೃತ್ಯಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ;


ಅವನು ಯೆರೂಸಲೇವಿುಗೆ ಬರಲು ಹನಾನೀಯನ ಮಗನಾದ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು ಅವನಿಗೆ - ನೀನು ಕೆಟ್ಟವನಿಗೆ ಸಹಾಯಮಾಡತಕ್ಕದ್ದೋ? ಯೆಹೋವನ ಹಗೆಗಾರರನ್ನು ಪ್ರೀತಿಸುವದೋ! ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.


ಆದರೆ ನಿನ್ನಲ್ಲಿ ಒಳ್ಳೇದು ಒಂದುಂಟು, ಅದೇನಂದರೆ - ನಾನು ದ್ವೇಷಿಸುವ ನಿಕೊಲಾಯಿತರ ಕೃತ್ಯಗಳನ್ನು ನೀನು ಸಹ ದ್ವೇಷಿಸುತ್ತಿ.


ನನಗೆ ದುರ್ಜನರ ಕೂಟವು ಅಸಹ್ಯ; ದುಷ್ಟರ ಸಂಗವು ಬೇಕಿಲ್ಲ.


ತರುವಾಯ ಆತನು ಸಮೀಪಕ್ಕೆ ಬಂದಾಗ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಅತ್ತು -


ಆಗ ಆತನು ಅವರ ಮನಸ್ಸು ಕಲ್ಲಾಗಿರುವದನ್ನು ಕಂಡು ದುಃಖಪಟ್ಟು ಕೋಪದಿಂದ ಸುತ್ತಲೂ ಅವರನ್ನು ನೋಡಿ ಆ ಮನುಷ್ಯನಿಗೆ - ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದನು; ಕೈ ವಾಸಿಯಾಯಿತು.


ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿವಿುತ್ತ ಗೋಳಾಡುವದು; ಯೆಹೋವನ ಮಂದೆಯು ಸೆರೆಯಾಗಿ ಹೋದದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವದು.


ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿವಿುತ್ತ ನನಗೆ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ.


ಅವನು ಭ್ರಷ್ಟರನ್ನು ಜರಿದುಬಿಟ್ಟವನೂ ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು