Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 139:23 - ಕನ್ನಡ ಸತ್ಯವೇದವು J.V. (BSI)

23 ದೇವಾ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ; ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ಗೊತ್ತುಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ದೇವಾ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ, ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ತಿಳಿದುಕೋ ದೇವಾ, ನನ್ನ ಹೃದಯವನು ಪರೀಕ್ಷಿಸಿ I ಅರಿತುಕೋ ನನ್ನ ಆಲೋಚನೆಗಳನು ಪರಿಶೋಧಿಸಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ದೇವರೇ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ. ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ಗ್ರಹಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ದೇವರೇ, ನನ್ನನ್ನು ಪರಿಶೋಧಿಸಿ, ನನ್ನ ಹೃದಯವನ್ನು ತಿಳಿದುಕೊಳ್ಳಿರಿ; ನನ್ನನ್ನು ಪರೀಕ್ಷಿಸಿ, ನನ್ನ ಚಿಂತಾಲೋಚನೆಗಳನ್ನು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 139:23
13 ತಿಳಿವುಗಳ ಹೋಲಿಕೆ  

ಯೆಹೋವನೇ, ನನ್ನನ್ನು ಪರೀಕ್ಷಿಸು, ಪರಿಶೀಲಿಸು; ನನ್ನ ಅಂತರಿಂದ್ರಿಯವನ್ನೂ ಹೃದಯವನ್ನೂ ಪರಿಶೋಧಿಸು.


ಬಂಗಾರವು ನಾಶವಾಗುವಂಥದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟಾಹಾಕಿ ಶೋಧಿಸುವದುಂಟಷ್ಟೆ. ಬಂಗಾರಕ್ಕಿಂತ ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವ ಮಾನಗಳನ್ನು ಉಂಟುಮಾಡುವದು.


ಒಂದು ವೇಳೆ ನಾನು ಕಪಟದ ಜೊತೆಯಲ್ಲಿ ನಡೆದು ಮೋಸವನ್ನು ಹಿಂಬಾಲಿಸಿ ಓಡಿ


ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು; ಹೃದಯಗಳನ್ನು ಶೋಧಿಸುವವನು ಯೆಹೋವನೇ.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ್ದನ್ನೂ ನೀವು ತನ್ನ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.


ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ ತಿಳುಕೊಂಡಿದ್ದೀ;


ಹೃದಯವನ್ನೂ ಅಂತರಿಂದ್ರಿಯವನ್ನೂ ಪರೀಕ್ಷಿಸಿ ನ್ಯಾಯವಾಗಿ ತೀರ್ಪುಮಾಡುವ ಸೇನಾಧೀಶ್ವರನಾದ ಯೆಹೋವನೇ, ನೀನು ಅವರಿಗೆ ಕೊಡುವ ಪ್ರತಿಫಲವನ್ನು ನಾನು ಕಾಣುವೆನು; ನನ್ನ ವ್ಯಾಜ್ಯವನ್ನು ನಿನಗೇ ಅರಿಕೆ ಮಾಡಿದ್ದೇನಷ್ಟೆ.


ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು - ಇವರು ನನ್ನ ಜನರು ಅಂದುಕೊಳ್ಳುವೆನು, ಅವರು - ನಮ್ಮ ದೇವರಾದ ಯೆಹೋವನೇ ಅನ್ನುವರು.


ಯೆಹೋವನು ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.


ಯೆಹೋವನು ನೀತಿವಂತರನ್ನೂ ಅನೀತಿವಂತರನ್ನೂ ಪರೀಕ್ಷಿಸುತ್ತಾನೆ; ಬಲಾತ್ಕಾರಿಗಳನ್ನು ದ್ವೇಷಿಸುತ್ತಾನೆ.


ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ ರಾತ್ರಿ ವೇಳೆ ವಿಚಾರಿಸಿದರೂ ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವದಿಲ್ಲ; ನನ್ನ ಬಾಯಲ್ಲಿಯೂ ತಪ್ಪಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು