Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 139:4 - ಕನ್ನಡ ಸತ್ಯವೇದವು J.V. (BSI)

4 ಯೆಹೋವನೇ, ನನ್ನ ನಾಲಿಗೆಯ ಮಾತುಗಳಲ್ಲಿ ನೀನು ಅರಿಯದೆ ಇರುವಂಥದು ಒಂದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನೇ, ನನ್ನ ನಾಲಿಗೆಯ ಮಾತುಗಳಲ್ಲಿ, ನೀನು ಅರಿಯದೆ ಇರುವಂಥದು ಒಂದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪ್ರಭು, ನಾ ಮಾತೆತ್ತುವುದಕ್ಕೆ ಮುಂಚಿತವಾಗಿ I ತಿಳಿದುಹೋಗಿದೆ ಎಲ್ಲ ನಿನಗೆ ಪೂರ್ತಿಯಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನೇ, ನನ್ನ ಬಾಯಿಂದ ಮಾತುಗಳು ಹೊರಡುವುದಕ್ಕಿಂತ ಮೊದಲೇ ನಾನು ಹೇಳಬೇಕೆಂದಿರುವುದು ನಿನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನ್ನ ನಾಲಿಗೆಯಲ್ಲಿ ಒಂದು ಮಾತು ಆರಂಭಿಸುವುದಕ್ಕಿಂತ ಮುಂಚೆಯೇ ಯೆಹೋವ ದೇವರೇ, ಅದು ನಿಮಗೆ ಪೂರ್ಣವಾಗಿ ತಿಳಿದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 139:4
13 ತಿಳಿವುಗಳ ಹೋಲಿಕೆ  

ಯೆಹೋವನೇ, ನನ್ನ ಶರಣನೇ, ನನ್ನ ವಿಮೋಚಕನೇ, ನನ್ನ ಮಾತುಗಳೂ ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ.


ಜ್ಞಾನವಿಲ್ಲದೆ ಸತ್ಯಾಲೋಚನೆಯನ್ನು ಮಂಕುಮಾಡುವ ಇವನು ಯಾರು ಎಂಬ ನಿನ್ನ ಮಾತಿನಂತೆ ನಾನು ತಿಳಿಯದ ಸಂಗತಿಗಳನ್ನೂ ನನಗೆ ಗೊತ್ತಿಲ್ಲದೆ ಬುದ್ಧಿಗೆ ಮೀರಿರುವ ಅದ್ಭುತಗಳನ್ನೂ ಕುರಿತು ಮಾತಾಡಿದ್ದೇನೆ.


ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನವಾಗಿದೆ.


ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡಿಸಿ ನೆರೆಯವರ ಹೆಂಡಿರಲ್ಲಿ ವ್ಯಭಿಚಾರಮಾಡಿ ನಾನು ಆಜ್ಞಾಪಿಸಿದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ ಎಂಬದೇ.


ಬಿರುಗಾಳಿಯಂತಿರುವ ಮಾತುಗಳನ್ನಾಡಿ ಇನ್ನೆಷ್ಟರವರೆಗೂ ಹೀಗೆ ನುಡಿಯುತ್ತಿರುವಿ?


ಅಜ್ಞಾನದ ಮಾತುಗಳಿಂದ ಸತ್ಯಾಲೋಚನೆಯನ್ನು ಮಂಕುಮಾಡುವ ಇವನು ಯಾರು?


ಆ ಕಾಲದಲ್ಲಿ ನಾನು ದೀಪಗಳನ್ನು ಹಿಡಿದು ಯೆರೂಸಲೇಮನ್ನೆಲ್ಲಾ ಹುಡುಕಿಬಿಡುವೆನು; ಯೆಹೋವನು ಮೇಲನ್ನಾಗಲಿ ಕೇಡನ್ನಾಗಲಿ ಮಾಡನು ಎಂದು ಮನಸ್ಸಿನೊಳಗೆ ಅಂದುಕೊಳ್ಳುವವರಾಗಿ ಮಡ್ಡಿಯ ಮೇಲೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನು ದಂಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು