Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 139:8 - ಕನ್ನಡ ಸತ್ಯವೇದವು J.V. (BSI)

8 ಮೇಲಣ ಲೋಕಕ್ಕೆ ಏರಿಹೋದರೆ ಅಲ್ಲಿ ನೀನಿರುತ್ತೀ; ಪಾತಾಳಕ್ಕೆ ಹೋಗಿ ಮಲಗಿಕೊಂಡೇನಂದರೆ ಅಲ್ಲಿಯೂ ನೀನಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮೇಲಣ ಲೋಕಕ್ಕೆ ಏರಿಹೋದರೆ ಅಲ್ಲಿ ನೀನಿರುತ್ತಿ, ಪಾತಾಳಕ್ಕೆ ಹೋಗಿ ಮಲಗಿಕೊಂಡೇನೆಂದರೆ ಅಲ್ಲಿಯೂ ನೀನಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಕಾಶಕೆ ನಾನೇರಿದರೂ ನೀನಿರುವೆ ಅಲ್ಲಿ I ಪಾತಾಳದಲಿ ನಾ ನಿದ್ರಿಸಿದರೂ ನೀನಿರುವೆ ಅಲ್ಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಪರಲೋಕಕ್ಕೆ ಏರಿಹೋದರೆ ಅಲ್ಲಿಯೂ ನೀನಿರುವೆ. ಪಾತಾಳಕ್ಕೆ ಇಳಿದುಹೋದರೆ ಅಲ್ಲಿಯೂ ನೀನಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ಆಕಾಶಕ್ಕೆ ಏರಿ ಹೋದರೆ, ನೀವು ಅಲ್ಲಿ ಇದ್ದೀರಿ; ಪಾತಾಳಕ್ಕೆ ಹೋಗಿ ನಿದ್ರಿಸಿದರೂ ನೀವು ಅಲ್ಲಿಯೂ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 139:8
8 ತಿಳಿವುಗಳ ಹೋಲಿಕೆ  

ಇಕ್ಕಟ್ಟಿನಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ಆತನು ನನಗೆ ಸದುತ್ತರವನ್ನು ದಯಪಾಲಿಸಿದನು; ಪಾತಾಳದ ಗರ್ಭದೊಳಗಿಂದ ಕೂಗಿಕೊಂಡೆನು, ಆಹಾ, ನನ್ನ ಧ್ವನಿಯನ್ನು ಲಾಲಿಸಿದಿ.


ನೀನು ಹದ್ದಿನಂತೆ ಮೇಲಕ್ಕೆ ಏರಿದರೂ ನಿನ್ನ ಗೂಡು ನಕ್ಷತ್ರಮಂಡಲದಲ್ಲಿ ನೆಲೆಗೊಂಡಿದ್ದರೂ ಅಲ್ಲಿಂದ ನಿನ್ನನ್ನು ಇಳಿಸಿಬಿಡುವೆನು; ಇದು ಯೆಹೋವನ ನುಡಿ.


ಪಾತಾಳವೂ ನಾಶಲೋಕವೂ ಯೆಹೋವನಿಗೆ ಗೋಚರವಾಗಿರುವಲ್ಲಿ ನರವಂಶದವರ ಹೃದಯಗಳು ಮತ್ತೂ ಸ್ಪಷ್ಟ.


ಪಾತಾಳವು ಆತನ ದೃಷ್ಟಿಗೆ ತೆರೆದಿದೆ, ನಾಶಲೋಕವು ಮರೆಯಾಗಿಲ್ಲ.


ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು