Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 14:6 - ಕನ್ನಡ ಸತ್ಯವೇದವು J.V. (BSI)

6 ನೀವು ಕುಗ್ಗಿದವರ ಸಂಕಲ್ಪವನ್ನು ಭಂಗಪಡಿಸಿದರೂ ಯೆಹೋವನು ಅವರ ಆಶ್ರಯವಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವು ಕುಗ್ಗಿದವರ ಸಂಕಲ್ಪವನ್ನು ಭಂಗಪಡಿಸಿದರೂ ಯೆಹೋವನು ಅವರ ಆಶ್ರಯವಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಕೆಡಿಸಬಹುದವರು ಬಡಜನರ ಯೋಜನೆಯನು I ಪ್ರಭುವಾದರೊ ಅವರಿಗೆ ಆಶ್ರಯವಾಗಿರುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದುಷ್ಟತ್ವ ನಡೆಸುವವರೇ, ನೀವು ಬಡವರ ಯೋಜನೆಗಳನ್ನು ನಿರಾಶೆಗೊಳಿಸುತ್ತೀರಿ, ಆದರೆ ಯೆಹೋವ ದೇವರೇ ಅವರ ಆಶ್ರಯವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 14:6
14 ತಿಳಿವುಗಳ ಹೋಲಿಕೆ  

ಯೆಹೋವನು ಕುಗ್ಗಿಹೋದವರಿಗೆ ಆಶ್ರಯವೂ ಆಪತ್ಕಾಲದಲ್ಲಿ ದುರ್ಗವೂ ಆಗಿರುವನು.


ನನ್ನ ವಿರೋಧಿಗಳು - ನಿನ್ನ ದೇವರು ಎಲ್ಲಿ ಎಂದು ಯಾವಾಗಲೂ ನನ್ನನ್ನು ಗೇಲಿಮಾಡುವದರಿಂದ ನನ್ನ ಎಲುಬುಗಳೆಲ್ಲಾ ಮುರಿದ ಹಾಗಿವೆ.


ಮಹನೀಯರೇ, ನೀವು ಎಷ್ಟರವರೆಗೆ ನನ್ನ ಗೌರವವನ್ನು ಕೆಡಿಸಿ ನನ್ನನ್ನು ಅವಮಾನ ಪಡಿಸುವಿರಿ? ಯಾಕೆ ನಿರರ್ಥಕವಾದದ್ದನ್ನು ಪ್ರೀತಿಸಿ ಸುಳ್ಳನ್ನು ಹಿಂಬಾಲಿಸುವಿರಿ? ಸೆಲಾ.


ಈಗಲಾದರೂ ನೀವು ಸಿದ್ಧವಾಗಿದ್ದು ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು ಎಂದು ಹೇಳಿದನು.


ನೀನು - ಇವೆರಡು ಜನಾಂಗಗಳೂ ಇವೆರಡು ದೇಶಗಳೂ ನನ್ನ ವಶವಾಗುವವು, ನಾವು ಅವುಗಳನ್ನು ಅನುಭವಿಸುವೆವು ಅಂದುಕೊಂಡು ಅಲ್ಲಿ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯ ಮಾಡಿದ್ದರಿಂದ ನನ್ನ ಜೀವದಾಣೆ,


ಯೆಹೋವನೇ, ನಾನು ನಿನಗೆ - ನೀನೇ ನನ್ನ ಶರಣನೂ ಜೀವಲೋಕದಲ್ಲಿ ನನ್ನ ಪಾಲೂ ಆಗಿದ್ದೀ ಎಂದು ಕೂಗಿ ಮೊರೆಯಿಟ್ಟಿದ್ದೇನೆ.


ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.


ನಾನಾದರೋ ಕುಗ್ಗಿದವನೂ ದಿಕ್ಕಿಲ್ಲದವನೂ ಆಗಿದ್ದೇನೆ; ಕರ್ತನೇ ನನ್ನ ಹಿತಚಿಂತಕನು. ನನ್ನ ದೇವರೇ, ನೀನೇ ನನಗೆ ಸಹಾಯಕನೂ ರಕ್ಷಕನೂ ಆಗಿದ್ದೀ; ತಡಮಾಡಬೇಡ.


ಅನೇಕರು ನನ್ನ ವಿಷಯದಲ್ಲಿ - ಅವನಿಗೆ ದೇವರಿಂದ ಸಹಾಯವು ಆಗುವದೇ ಇಲ್ಲವೆಂದು ಹೇಳಿಕೊಳ್ಳುತ್ತಾರೆ. ಸೆಲಾ.


ಆಶ್ರಯವನ್ನು ಹೊಂದಬೇಕೆಂದು ಓಡಿಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಎರಡು ನಿಶ್ಚಲವಾದ ಆಧಾರಗಳು ಇರುವ ಕಾರಣ ಬಲವಾದ ಧೈರ್ಯವುಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು