Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 140:5 - ಕನ್ನಡ ಸತ್ಯವೇದವು J.V. (BSI)

5 ಗರ್ವಿಷ್ಠರು ನನಗೋಸ್ಕರ ಗುಪ್ತಸ್ಥಳದಲ್ಲಿ ಉರುಲನ್ನೂ ಪಾಶಗಳನ್ನೂ ಒಡ್ಡಿದ್ದಾರೆ; ದಾರಿಯ ಮಗ್ಗುಲಲ್ಲಿ ಬಲೆಹಾಸಿದ್ದಾರೆ; ನನಗಾಗಿ ಬೋನಿಟ್ಟಿದ್ದಾರೆ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಗರ್ವಿಷ್ಠರು ನನಗೋಸ್ಕರ ಗುಪ್ತಸ್ಥಳದಲ್ಲಿ ಉರುಲನ್ನೂ, ಪಾಶಗಳನ್ನೂ ಒಡ್ಡಿದ್ದಾರೆ, ದಾರಿಯ ಮಗ್ಗುಲಲ್ಲಿ ಬಲೆಹಾಸಿದ್ದಾರೆ, ನನಗಾಗಿ ಬಲೆಬೀಸಿಟ್ಟಿದ್ದಾರೆ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಒಡ್ಡಿದರು ಗರ್ವಿಗಳು ಗುಪ್ತವಾಗಿ I ಉರುಲನು, ಪಾಶಗಳನು ನನಗಾಗಿ I ಬಲೆಹಾಸಿದರು ದಾರಿಗೆ ಅಡ್ಡವಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ಗರ್ವಿಷ್ಠರು ನನಗೆ ಉರುಲನ್ನು ಒಡ್ಡಿದ್ದಾರೆ; ನನ್ನನ್ನು ಹಿಡಿಯಲು ಬಲೆಯನ್ನು ಹಾಸಿದ್ದಾರೆ; ನನ್ನ ದಾರಿಯಲ್ಲಿ ಬೋನನ್ನು ಇಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಗರ್ವಿಷ್ಠರು ನನಗೆ ಉರುಲನ್ನೂ, ಪಾಶಗಳನ್ನೂ ರಹಸ್ಯವಾಗಿ ಇಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನನಗೆ ಬೋನಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 140:5
21 ತಿಳಿವುಗಳ ಹೋಲಿಕೆ  

ನನ್ನ ಆತ್ಮವು ಕುಂದಿಹೋಗಿದೆ; ನೀನೇ ನನ್ನ ಮಾರ್ಗವನ್ನು ಬಲ್ಲವನು; ನಾನು ಹೋಗಬೇಕಾದ ದಾರಿಯಲ್ಲಿ ಉರುಲನ್ನೊಡ್ಡಿದ್ದಾರೆ.


ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ; ಅಕಾರಣವಾಗಿ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ.


ಯುದ್ಧದಲ್ಲಿ ಖಡ್ಗವು ಅವರ ಯುವಕರನ್ನು ವಧಿಸಲಿ. ಸುಲಿಗೆಯವರ ಗುಂಪನ್ನು ಫಕ್ಕನೆ ಅವರ ಮೇಲೆ ಬೀಳಮಾಡು, ಅವರ ಮನೆಗಳೊಳಗಿಂದ ಅರಚಾಟವು ಕೇಳಿಸಲಿ; ಅವರು ನನ್ನನ್ನು ಹಿಡಿಯಲಿಕ್ಕೆ ಗುಂಡಿಯನ್ನು ತೋಡಿ ನನ್ನ ಕಾಲುಗಳಿಗೆ ಪಾಶಗಳನ್ನು ಗುಪ್ತವಾಗಿ ಒಡ್ಡಿದ್ದಾರೆ.


ಮೇಲಿಗೆ ಮುಯ್ಯಾಗಿ ಕೇಡು ಆಗ ತಕ್ಕದ್ದೋ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ. ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ಚಿತ್ತವಿಸು.


ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ; ನನ್ನ ಪ್ರಾಣವು ಕುಂದಿಹೋಯಿತು. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದರು; ತಾವೇ ಅದರಲ್ಲಿ ಬಿದ್ದುಹೋದರು. ಸೆಲಾ.


ನೆರೆಯವನೊಂದಿಗೆ ವಂಚಿಸುವ ಸವಿನುಡಿಗಳನ್ನಾಡುವವನು ಅವನ ಹೆಜ್ಜೆಗೆ ಬಲೆಯನ್ನೊಡ್ಡುವನು.


ದುಷ್ಟರು ಬಲೆಯೊಡ್ಡಿದ್ದಾರೆ; ನಾನು ನಿನ್ನ ನೇಮಗಳನ್ನು ತಪ್ಪಿಹೋಗುವದಿಲ್ಲ.


ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದ ಗರ್ವಿಷ್ಠರು ನನಗಾಗಿ ಗುಂಡಿಗಳನ್ನು ಅಗೆದಿದ್ದಾರೆ.


ಗರ್ವಿಷ್ಠರು ನನಗೆ ವಿರೋಧವಾಗಿ ಸುಳ್ಳುಕಲ್ಪಿಸಿದ್ದಾರೆ; ನಾನಾದರೋ ಪೂರ್ಣಮನಸ್ಸಿನಿಂದ ನಿನ್ನ ನೇಮಗಳನ್ನು ಕೈಕೊಳ್ಳುವೆನು.


ಗರ್ವಿಷ್ಠರ ಕಾಲಕೆಳಗೆ ನಮ್ಮನ್ನು ಬೀಳಲೀಸಬೇಡ; ದುರ್ಜನರಿಂದ ನಾವು ಭ್ರಷ್ಟರಾಗದಂತೆ ಮಾಡು.


ಶತ್ರುಗಳು ನನಗೆ ರಹಸ್ಯವಾಗಿ ಒಡ್ಡಿದ ಬಲೆಯೊಳಗೆ ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು;


ಕತ್ತರಿಬೋನು ಅವನ ಹಿಮ್ಮಡಿಯನ್ನು ಕಚ್ಚುವದು, ಉರುಲು ಅವನನ್ನು ಹಿಡಿಯುವದು,


ಆಗ ಅವರು - ಯೆರೆಮೀಯನಿಗೆ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದಷ್ಟೆ. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ ಎಂದುಕೊಂಡರು.


ದೇವರೇ, ನ್ಯಾಯವನ್ನು ನಿರ್ಣಯಿಸು; ನನಗೋಸ್ಕರ ವ್ಯಾಜ್ಯವನ್ನು ನಡಿಸಿ ನಿರ್ದಯವಾದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.


ದುಷ್ಟನೇ, ಶಿಷ್ಟನ ಮನೆಗೆ ಹೊಂಚುಹಾಕಬೇಡ; ಅವನ ನಿವಾಸವನ್ನು ಸೂರೆಮಾಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು