Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 140:9 - ಕನ್ನಡ ಸತ್ಯವೇದವು J.V. (BSI)

9 ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು ಅವರ ತಲೆಯ ಮೇಲೇ ಬರಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು ಅವರ ತಲೆಯ ಮೇಲೆಯೇ ಬರಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನನ್ನನ್ನು ಸುತ್ತುವರೆದಿರುವವರು ತಲೆಯೆತ್ತದಿರಲಿ I ಅವರಾಡುವ ಕೇಡು ಅವರ ತಲೆಯ ಮೇಲೇ ಎರಗಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನನ್ನ ವೈರಿಗಳಿಗೆ ಜಯವಾಗಲು ಬಿಡಬೇಡ. ಅವರು ಕುಯುಕ್ತಿಗಳನ್ನು ಮಾಡುತ್ತಿದ್ದಾರೆ; ಅವುಗಳನ್ನು ವಿಫಲಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು, ಅವರ ತಲೆಯ ಮೇಲೇ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 140:9
11 ತಿಳಿವುಗಳ ಹೋಲಿಕೆ  

ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವದು; ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ಬುರುಡೆಯ ಮೇಲೆ ಬೀಳುವದು.


ಜ್ಞಾನಹೀನನಿಗೆ ಬಾಯಿ ನಾಶ; ತುಟಿಗಳು ಪಾಶ.


ದುಷ್ಟನು ತುಟಿಗಳ ದೋಷದಿಂದ ಬೋನಿಗೆ ಬೀಳುವನು; ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು.


ಶಿಷ್ಟನ ಬಾಯಿ ಜೀವದ ಬುಗ್ಗೆ; ದುಷ್ಟನ ಬಾಯಲ್ಲಿ ಬಲಾತ್ಕಾರವು ತುಂಬಿ ತುಳುಕುತ್ತದೆ.


ಶಿಷ್ಟನ ತಲೆ ಆಶೀರ್ವಾದದ ನೆಲೆ; ದುಷ್ಟನ ಬಾಯಿಗೆ ಬಲಾತ್ಕಾರವೇ ಮುಚ್ಚಳ.


ಅವರ ಕೆಟ್ಟತನವನ್ನು ಅವರಿಗೇ ತಿರುಗಿಸುವನು; ಅವರ ದುಷ್ಟತನದಿಂದಲೇ ಅವರನ್ನು ನಿರ್ಮೂಲ ಮಾಡುವನು. ನಮ್ಮ ಯೆಹೋವದೇವರು ಅವರನ್ನು ಸಂಹರಿಸಿಬಿಡುವನು.


ಅವರ ನಾಲಿಗೆಗಳೇ ಅವರಿಗೆ ವಿಘ್ನವಾಗಿ ಎಡವಿ ಬೀಳುವರು; ಆಗ ನೋಡುವವರೆಲ್ಲರು ತಲೆ ಅಲ್ಲಾಡಿಸಿ ಅಣಕಿಸುವರು.


ಹಾಮಾನನನ್ನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿಗೆ ಹಾಕಿದರು. ಅರಸನ ಕೋಪವೂ ಶಾಂತವಾಯಿತು.


ಅವನನ್ನು ಕೊಲ್ಲಿಸಿದ್ದಕ್ಕೆ ನಾವೂ ನಮ್ಮ ಮಕ್ಕಳೂ ಉತ್ತರ ಕೊಡುತ್ತೇವೆ ಅಂದರು.


ಅದಕ್ಕೆ ಅವನು ಪತ್ನಿಯಾದ ಜೆರೆಷಳೂ ಅವನ ಎಲ್ಲಾ ಆಪ್ತರೂ - ಐವತ್ತು ಮೊಳ ಎತ್ತರವಾದ ಒಂದು ಗಲ್ಲುಮರವನ್ನು ಸಿದ್ಧಮಾಡಿಸಿ ನಾಳೆ ಅರಸನ ಅಪ್ಪಣೆಯನ್ನು ಪಡಕೊಂಡು ಮೊರ್ದೆಕೈಯನ್ನು ಅದಕ್ಕೆ ನೇತುಹಾಕಿಸಬೇಕು; ಆಮೇಲೆ ನೀನು ಸಂತೋಷದಿಂದ ಅರಸನ ಜೊತೆಯಲ್ಲಿ ಔತಣಕ್ಕೆ ಹೋಗಬಹುದು ಎಂದು ಹೇಳಿದರು. ಹಾಮಾನನು ಈ ಮಾತಿಗೆ ಮೆಚ್ಚಿ ಗಲ್ಲುಮರವನ್ನು ಸಿದ್ಧಮಾಡಿಸಿದನು.


ಆದರೆ ಅವರ ವಿರೋಧಿಗಳು ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು - ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಂಡಾರೆಂದು ನಾನು ಹಿಂದೆಗೆದೆನು ಎಂಬದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು