Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 141:4 - ಕನ್ನಡ ಸತ್ಯವೇದವು J.V. (BSI)

4 ನನ್ನ ಹೃದಯವು ದುರಾಚಾರವನ್ನು ಮೆಚ್ಚದಂತೆಯೂ ನಾನು ದುಷ್ಟರೊಡನೆ ಕೂಡಿ ಕೆಟ್ಟ ಕೆಲಸಗಳನ್ನು ನಡಿಸದಂತೆಯೂ ನನ್ನನ್ನು ಕಾಪಾಡು. ಅವರ ಮೃಷ್ಟಾನ್ನವು ನನಗೆ ಬೇಡವೇ ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ಹೃದಯವು ದುರಾಚಾರವನ್ನು ಮೆಚ್ಚದಂತೆಯೂ, ನಾನು ದುಷ್ಟರೊಡನೆ ಸೇರಿ ಕೆಟ್ಟ ಕೆಲಸಗಳನ್ನು ನಡೆಸದಂತೆಯೂ ನನ್ನನ್ನು ಕಾಪಾಡು. ಅವರ ಮೃಷ್ಟಾನ್ನವು ನನಗೆ ಬೇಡವೇ ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮಾಡು ನನ್ನ ಹೃದಯ ದುರಾಚಾರವನು ಮೆಚ್ಚದಂತೆ I ಕಾಪಾಡು ದುರ್ಜನರೊಡಗೂಡಿ ಕೇಡನು ಮಾಡದಂತೆ I ನೋಡು ದುರುಳರೌತಣಗಳಲಿ ನಾ ಪಾಲ್ಗೊಳ್ಳದಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಕೆಟ್ಟದ್ದನ್ನು ಮಾಡಲು ನನಗೆ ಅವಕಾಶಕೊಡಬೇಡ. ಕೆಟ್ಟವರೊಂದಿಗೆ ಸೇರಿ ಕೆಟ್ಟದ್ದನ್ನು ಮಾಡದಂತೆ ನನ್ನನ್ನು ಕಾಪಾಡು. ಅವರು ಹರ್ಷಿಸುವಂಥವುಗಳಲ್ಲಿ ನಾನು ಪಾಲುಗಾರನಾಗದಂತೆ ನೋಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅಪರಾಧ ಮಾಡುವವರ ಸಂಗಡ ನಾನು ಸಹ ಸೇರಿಕೊಂಡು ಕೆಟ್ಟ ಕಾರ್ಯಗಳನ್ನು ಮಾಡಲು ನನ್ನ ಹೃದಯ ಸೆಳೆಯದಂತೆ ಕಾಪಾಡಿರಿ; ಅವರ ಸವಿ ಊಟಗಳನ್ನು ನಾನು ಉಣ್ಣದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 141:4
21 ತಿಳಿವುಗಳ ಹೋಲಿಕೆ  

ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.


ನನ್ನ ಮನಸ್ಸನ್ನು ದ್ರವ್ಯಾಶೆಗಲ್ಲ, ನಿನ್ನ ಕಟ್ಟಳೆಗಳಿಗೆ ತಿರುಗಿಸು.


ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನ ಪಡಿಸುವದೇಕೆ? ನಿನ್ನ ಸೇವಕರ ನಿವಿುತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು,


ಆದದರಿಂದ ಅನ್ಯಜನರ ಮಧ್ಯದಲ್ಲಿಂದ ಹೊರಟು ಬಂದು ಪ್ರತ್ಯೇಕವಾಗಿರಿ; ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.


ಮೋಸ ಹೋಗಬೇಡಿರಿ; ದುಸ್ಸಹವಾಸವು ಸದಾಚಾರವನ್ನು ಕೆಡಿಸುತ್ತದೆ.


ನಾವು ನಮ್ಮ ಪಿತೃಗಳಿಗೆ ಕೊಡಲ್ಪಟ್ಟ ಆಜ್ಞಾನಿಯಮ ವಿಧಿಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವಂತೆ ನಮ್ಮ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿಕೊಳ್ಳಲಿ.


ಯಾವನಾದರೂ ಪಾಪಮಾಡುವದಕ್ಕೆ ಪ್ರೇರೇಪಿಸಲ್ಪಡುವಾಗ - ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ದೇವರು ಕೆಟ್ಟದ್ದಕ್ಕೇನೂ ಸಂಬಂಧಪಟ್ಟವನಲ್ಲ; ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸುವದಿಲ್ಲ.


ಹೀಗಿರಲಾಗಿ ನೀವು ಉಂಡರೂ ಕುಡಿದರೂ ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಘನತೆಗಾಗಿ ಮಾಡಿರಿ.


ಪರಲೋಕದಿಂದ ಬಂದ ಮತ್ತೊಂದು ಶಬ್ದವನ್ನು ಕೇಳಿದೆನು; ಅದು ಹೇಳಿದ್ದೇನಂದರೆ - ನನ್ನ ಪ್ರಜೆಗಳೇ, ಅವಳನ್ನು ಬಿಟ್ಟುಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿಯಾಗಬಾರದು.


ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು, ಕೇಳುವ ಕಿವಿ ಇವುಗಳನ್ನು ಯೆಹೋವನು ಇಂದಿನವರೆಗೂ ನಿಮಗೆ ಅನುಗ್ರಹಿಸಲಿಲ್ಲ ಅಯ್ಯೋ.


ಹೇಗೆ ಪ್ರೇರಿಸುವಿ ಎಂದು ಯೆಹೋವನು ಕೇಳಲು ಅದು - ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ - ಹೋಗಿ ಅದರಂತೆ ಮಾಡು; ಅವನನ್ನು ಪ್ರೇರಿಸಿ ಸಫಲನಾಗುವಿ ಅಂದನು.


ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿವ್ಮಿುಂದ ಸೋತುಹೋಗಬೇಕೆಂಬದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪ; ಅದು ಈಗಾಗಲೇ ನೆರವೇರಿತಲ್ಲಾ.


ಆ ಸ್ತ್ರೀಯರು ತಮ್ಮ ದೇವತೆಗಳಿಗೆ ಮಾಡಿದ ಔತಣದ ಯಜ್ಞಗಳಿಗೆ ಇಸ್ರಾಯೇಲ್ಯರನ್ನು ಕರಿಸಲು ಇವರು ಆ ಭೋಜನವನ್ನು ಮಾಡಿ ಅವರ ದೇವತೆಗಳಿಗೆ ನಮಸ್ಕರಿಸುವವರಾದರು.


ಅವನು ಹೋಗಿ ಅವುಗಳನ್ನು ತಂದು ತಾಯಿಗೆ ಕೊಟ್ಟನು. ರೆಬೆಕ್ಕಳು ಅವನ ತಂದೆಗೆ ಇಷ್ಟವಾಗಿದ್ದ


ದೇವರ ಮನುಷ್ಯನು ಅರಸನಿಗೆ - ನೀನು ನನಗೆ ನಿನ್ನ ಆಸ್ತಿಯಲ್ಲಿ ಅರ್ಧವನ್ನು ಕೊಟ್ಟರೂ ನಾನು ನಿನ್ನ ಸಂಗಡ ಬರುವದಿಲ್ಲ; ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲ.


ನೀನು ದುಷ್ಟರೊಡನೆಯೂ ಪಾತಕಿಗಳ ಸಂಗಡಲೂ ನನ್ನನ್ನೂ ಎಳೆದುಕೊಂಡು ಹೋಗಬೇಡ. ಅವರು ಹೊರಗೆ ಒಳ್ಳೇದಾಗಲಿ ಎಂದು ಹೇಳಿದರೂ ಒಳಗೆ ಕೇಡಾಗಲಿ ಎಂದು ಯೋಚಿಸುವವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು