Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 141:9 - ಕನ್ನಡ ಸತ್ಯವೇದವು J.V. (BSI)

9 ಕೆಡುಕರು ಒಡ್ಡಿದ ಉರುಲಿನಲ್ಲಿ ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು; ಅವರಿಟ್ಟ ಬೋನಿಗೆ ನನ್ನನ್ನು ತಪ್ಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕೆಡುಕರ ಉರುಲಿನಲ್ಲಿ ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು, ಅವರು ಬೀಸಿಟ್ಟಿರುವ ಬಲೆಯಿಂದ ನನ್ನನ್ನು ತಪ್ಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕಾಪಾಡು ಕೆಡುಕರೊಡ್ಡಿದ ಉರುಲಿನಿಂದ I ತಪ್ಪಿಸೆನ್ನನು ಅವರಿಟ್ಟ ಬೋನಿನಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕೆಟ್ಟವರು ನನಗೆ ಬಲೆಗಳನ್ನು ಒಡ್ಡಿದ್ದಾರೆ. ಅವರ ಬೋನುಗಳಿಂದ ನನ್ನನ್ನು ತಪ್ಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರು ನನಗೆ ಒಡ್ಡಿದ ಉರುಲಿನಿಂದಲೂ, ಅಪರಾಧಗಳ ನೇಣುಗಳಿಂದಲೂ ನನ್ನನ್ನು ಕಾಪಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 141:9
10 ತಿಳಿವುಗಳ ಹೋಲಿಕೆ  

ಗರ್ವಿಷ್ಠರು ನನಗೋಸ್ಕರ ಗುಪ್ತಸ್ಥಳದಲ್ಲಿ ಉರುಲನ್ನೂ ಪಾಶಗಳನ್ನೂ ಒಡ್ಡಿದ್ದಾರೆ; ದಾರಿಯ ಮಗ್ಗುಲಲ್ಲಿ ಬಲೆಹಾಸಿದ್ದಾರೆ; ನನಗಾಗಿ ಬೋನಿಟ್ಟಿದ್ದಾರೆ. ಸೆಲಾ.


ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಕ್ಕೂ ಒಪ್ಪಿಸಬೇಕೆಂದು ಹೊಂಚಿನೋಡುವವರಾಗಿ ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ಹಿಡಿಯುವದಕ್ಕೆ [ಆತನ ಬಳಿಗೆ] ಕಳುಹಿಸಿದರು.


ಜ್ಞಾನಿಯ ಬೋಧೆ ಜೀವದ ಬುಗ್ಗೆ; ಅದನ್ನಾಲಿಸುವವನು ಮೃತ್ಯುಪಾಶದಿಂದ ತಪ್ಪಿಸಿಕೊಳ್ಳುವನು.


ದುಷ್ಟರು ಬಲೆಯೊಡ್ಡಿದ್ದಾರೆ; ನಾನು ನಿನ್ನ ನೇಮಗಳನ್ನು ತಪ್ಪಿಹೋಗುವದಿಲ್ಲ.


ನನ್ನ ಪ್ರಾಣವನ್ನು ತೆಗೆಯಬೇಕೆಂಬವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ; ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ.


ಯುದ್ಧದಲ್ಲಿ ಖಡ್ಗವು ಅವರ ಯುವಕರನ್ನು ವಧಿಸಲಿ. ಸುಲಿಗೆಯವರ ಗುಂಪನ್ನು ಫಕ್ಕನೆ ಅವರ ಮೇಲೆ ಬೀಳಮಾಡು, ಅವರ ಮನೆಗಳೊಳಗಿಂದ ಅರಚಾಟವು ಕೇಳಿಸಲಿ; ಅವರು ನನ್ನನ್ನು ಹಿಡಿಯಲಿಕ್ಕೆ ಗುಂಡಿಯನ್ನು ತೋಡಿ ನನ್ನ ಕಾಲುಗಳಿಗೆ ಪಾಶಗಳನ್ನು ಗುಪ್ತವಾಗಿ ಒಡ್ಡಿದ್ದಾರೆ.


ನನ್ನ ಆತ್ಮವು ಕುಂದಿಹೋಗಿದೆ; ನೀನೇ ನನ್ನ ಮಾರ್ಗವನ್ನು ಬಲ್ಲವನು; ನಾನು ಹೋಗಬೇಕಾದ ದಾರಿಯಲ್ಲಿ ಉರುಲನ್ನೊಡ್ಡಿದ್ದಾರೆ.


ದೇವರೇ, ನನ್ನ ಹೃದಯವು ಸ್ಥಿರವಾಗಿದೆ, ಸ್ಥಿರವಾಗಿದೆ. ನಾನು ಬಾರಿಸುತ್ತಾ ಹಾಡುವೆನು.


ಅವರು ನಾಲಿಗೆಯೆಂಬ ಕತ್ತಿಯನ್ನು ಮಸೆದಿದ್ದಾರೆ; ವಿಷವಚನವೆಂಬ ಬಾಣವನ್ನು ಹೂಡಿ


ನನ್ನ ಬಲಗಡೆಗೆ ನೋಡಿ ಪರಾಂಬರಿಸು; ಅಲ್ಲಿ ಸಹಾಯಕರು ಯಾರೂ ಇಲ್ಲ. ಆಶ್ರಯವು ನಾಶವಾಯಿತು; ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು