Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 143:1 - ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲಿಸು; ನನ್ನ ಬಿನ್ನಹಕ್ಕೆ ಕಿವಿಗೊಡು; ನಿನ್ನ ನೀತಿಸತ್ಯತೆಗಳಿಗನುಸಾರವಾಗಿ ಸದುತ್ತರವನ್ನು ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲಿಸು; ನನ್ನ ಬಿನ್ನಹಕ್ಕೆ ಕಿವಿಗೊಡು; ನಿನ್ನ ನೀತಿ ಸತ್ಯತೆಗಳಿಗೆ ಅನುಸಾರವಾಗಿ ಸದುತ್ತರವನ್ನು ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಲಿಸು ಪ್ರಭು ನನ್ನ ಪ್ರಾರ್ಥನೆ ಸೇರಲಿ ನಿನಗೀ ಬಿನ್ನಹ I ನಿನ್ನ ನೀತಿಸತ್ಯತೆಗಳನುಸಾರ ಪಾಲಿಸೆನಗೆ ಸದುತ್ತರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು. ನನ್ನ ಬಿನ್ನಹಕ್ಕೆ ಕಿವಿಗೊಡು. ನಿನ್ನ ನೀತಿಗೂ ನಂಬಿಗಸ್ತಿಕೆಗೂ ತಕ್ಕಂತೆ ನನ್ನ ಪ್ರಾರ್ಥನೆಗೆ ಉತ್ತರ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ; ನನ್ನ ವಿಜ್ಞಾಪನೆಗಳಿಗೆ ಕಿವಿಗೊಡಿರಿ; ನಿಮ್ಮ ನಂಬಿಗಸ್ತಿಕೆಯಲ್ಲಿಯೂ, ನಿಮ್ಮ ನೀತಿಯಲ್ಲಿಯೂ ನನಗೆ ಉತ್ತರಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 143:1
8 ತಿಳಿವುಗಳ ಹೋಲಿಕೆ  

ನೀತಿಸ್ಥಾಪಕನಾದ ನೀನು ನನ್ನನ್ನು ಬಿಡಿಸಿ ಪಾರುಮಾಡು; ನನ್ನ ಪ್ರಾರ್ಥನೆಗೆ ಕಿವಿಗೊಟ್ಟು ಉದ್ಧರಿಸು.


ನಾನು ಯೆಹೋವನಿಗೆ - ನೀನೇ ನನ್ನ ದೇವರು; ಯೆಹೋವನೇ, ನನ್ನ ವಿಜ್ಞಾಪನೆಗೆ ಕಿವಿಗೊಡು;


ಯೆಹೋವನೇ, ನಿನ್ನ ಮರೆಹೊಕ್ಕಿದ್ದೇನೆ; ನನಗೆ ಎಂದಿಗೂ ಆಶಾಭಂಗಪಡಿಸಬೇಡ. ನಿನ್ನ ನೀತಿಗನುಸಾರವಾಗಿ ನನ್ನನ್ನು ರಕ್ಷಿಸು.


ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷವಿುಸಿಬಿಟ್ಟು ಸಕಲ ಅನೀತಿಯನ್ನು ಪರಿಹರಿಸಿ ನಮ್ಮನ್ನು ಶುದ್ಧಿಮಾಡುವನು.


ಕರ್ತನೇ, ನಿನ್ನ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿನ್ನ ಪಟ್ಟಣವೂ ನಿನ್ನ ಪವಿತ್ರಪರ್ವತವೂ ಆದ ಯೆರೂಸಲೇವಿುನ ಮೇಲಣ ನಿನ್ನ ಕೋಪವನ್ನು, ನಿನ್ನ ರೋಷಾಗ್ನಿಯನ್ನು ದಯಮಾಡಿ ತೊಲಗಿಸಿಬಿಡು; ನಮ್ಮ ಮತ್ತು ನಮ್ಮ ಪಿತೃಗಳ ಪಾಪಾಪರಾಧಗಳ ನಿವಿುತ್ತ ಯೆರೂಸಲೇಮೂ ನಿನ್ನ ಜನವೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆಯಲ್ಲಾ.


ದೇವರೇ, ಯೆಹೋವನೇ, ನೀನು ನಿನ್ನ ಸೇವಕನನ್ನೂ ಅವನ ಮನೆಯನ್ನೂ ಕುರಿತು ಮಾಡಿದ ವಾಗ್ದಾನವನ್ನು ನೆರವೇರಿಸು. ಅದು ಸದಾ ಸ್ಥಿರವಾಗಿರಲಿ.


ಯೆಹೋವನೇ, ನ್ಯಾಯವಾದದ್ದನ್ನು ಆಲೈಸು; ನನ್ನ ಮೊರೆಗೆ ಲಕ್ಷ್ಯವಿಡು. ನನ್ನ ಪ್ರಾರ್ಥನೆಗೆ ಕಿವಿಗೊಡು, ಅದು ಕಪಟವಾದ ಬಾಯಿಂದ ಬಂದದ್ದಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು