Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 143:2 - ಕನ್ನಡ ಸತ್ಯವೇದವು J.V. (BSI)

2 ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಗುರಿಮಾಡಬೇಡ ನಿನ್ನ ದಾಸನನು ನ್ಯಾಯ ವಿಚಾರಣೆಗೆ I ಯಾವ ಜೀವಾತ್ಮನೂ ನಿರ್ದೋಷಿಯಲ್ಲ ನಿನ್ನ ಲೆಕ್ಕಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿನ್ನ ಸೇವಕನಾದ ನನಗೆ ತೀರ್ಪುಮಾಡಬೇಡ. ನನ್ನ ಇಡೀ ಜೀವಮಾನದಲ್ಲಿ ನಿರಪರಾಧಿಯೆಂಬ ತೀರ್ಪನ್ನು ಹೊಂದಲು ನನಗೆ ಸಾಧ್ಯವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿಮ್ಮ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡಿರಿ, ಏಕೆಂದರೆ ಜೀವಿಸುವರಲ್ಲಿ ಒಬ್ಬರೂ ನಿಮ್ಮ ಮುಂದೆ ನೀತಿವಂತರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 143:2
12 ತಿಳಿವುಗಳ ಹೋಲಿಕೆ  

ಪಾಪಮಾಡದೆ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷನು ಲೋಕದಲ್ಲಿ ಇಲ್ಲವೇ ಇಲ್ಲ.


ಯಾಕಂದರೆ ಯಾವನಾದರೂ ನೇಮನಿಷ್ಠೆಗಳನ್ನನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರುಹು ಉಂಟಾಗುತ್ತದಷ್ಟೆ.


ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವದು ಹೇಗೆ? ಸ್ತ್ರೀಯಲ್ಲಿ ಹುಟ್ಟಿದವನು ಪರಿಶುದ್ಧನಾಗಿರುವದು ಸಾಧ್ಯವೋ?


ನಾವು ಪಾಪಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ ಮತ್ತು ಆತನ ವಾಕ್ಯವು ನಮ್ಮಲ್ಲಿ ಇಲ್ಲ.


ಆದರೂ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದರಿಂದ ನಾವು ಸಹ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿಸಲ್ಪಡುವದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು; ಯಾಕಂದರೆ ಯಾವನಾದರೂ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲ.


ಕರ್ತನೇ, ಯಾಹುವೇ, ನೀನು ಪಾಪಗಳನ್ನು ಎಣಿಸುವದಾದರೆ ನಿನ್ನ ಮುಂದೆ ಯಾರು ನಿಂತಾರು?


ನೀನು ಇಂಥವನಾದ ನನ್ನ ಮೇಲೆ ಕಣ್ಣಿಟ್ಟು ನಿನ್ನ ನ್ಯಾಯಸ್ಥಾನಕ್ಕೆ ನನ್ನನ್ನು ಬರಮಾಡುವಿಯಾ?


ನರನು ಎಷ್ಟರವನು! ಅವನು ಪರಿಶುದ್ಧನಾಗಿರುವದು ಸಾಧ್ಯವೋ? ಸ್ತ್ರೀಯಲ್ಲಿ ಹುಟ್ಟಿದವನು ನೀತಿವಂತನಾಗಿರಬಹುದೇ?


ಅದೇನಂದರೆ - ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾದಾನೇ? ಮಾನವನು ಸೃಷ್ಟಿಕರ್ತನ ಸನ್ನಿಧಿಯಲ್ಲಿ ಪರಿಶುದ್ಧನಾಗಿರಬಹುದೇ?


ಅವರು ನಿನಗೆ ವಿರುದ್ಧವಾಗಿ ಪಾಪಮಾಡಾರು. ಪಾಪಮಾಡದ ಮನುಷ್ಯನು ಒಬ್ಬನೂ ಇಲ್ಲವಲ್ಲಾ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ ಸಮೀಪದಲ್ಲಾಗಲಿ ಇರುವ ತಮ್ಮ ದೇಶಕ್ಕೆ ಅವರನ್ನು ಒಯ್ದಾಗ


ಸಾವಿರಾರು ತಲೆಗಳವರೆಗೂ ದಯೆತೋರಿಸುವವನು; ದೋಷಾಪರಾಧಪಾಪಗಳನ್ನು ಕ್ಷವಿುಸುವವನು; ಆದರೂ [ಅಪರಾಧಗಳನ್ನು] ಶಿಕ್ಷಿಸದೆ ಬಿಡದವನು; ತಂದೆಗಳ ದೋಷ ಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು ಎಂಬದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು