Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 144:12 - ಕನ್ನಡ ಸತ್ಯವೇದವು J.V. (BSI)

12 ಯೌವನಸ್ಥರಾದ ನಮ್ಮ ಗಂಡುಮಕ್ಕಳು ಹೊರವಾಗಿ ಬೆಳೆದಿರುವ ಸಸಿಗಳಂತಿರುವರು; ಹೆಣ್ಣುಮಕ್ಕಳು ಅರಮನೆಯಲ್ಲಿರುವ ವಿಚಿತ್ರವಾಗಿ ಕೆತ್ತಿದ ಮೂಲೆಗಂಬದಂತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೌವನಸ್ಥರಾದ ನಮ್ಮ ಗಂಡುಮಕ್ಕಳು ಸಮೃದ್ಧಿಯಾಗಿ ಬೆಳದಿರುವ ಸಸಿಗಳಂತಿರುವರು, ಹೆಣ್ಣುಮಕ್ಕಳು ಅರಮನೆಯಲ್ಲಿ ಕೆತ್ತಿದ ಮೂಲೆಗಂಬದಂತೆ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಮ್ಮ ಗಂಡು ಮಕ್ಕಳಿರಲಿ I ಯೌವನಾವಸ್ಥೆಯಲಿ ಹುಲುಸಾಗಿ ಬೆಳೆದ ಗಿಡಗಳಂತೆ II ನಮ್ಮ ಹೆಣ್ಣುಮಕ್ಕಳಿರಲಿ I ಅರಮನೆಯಲ್ಲಿ ಕೆತ್ತಿದ ಸುಂದರ ಮೂಲೆಗಂಬಗಳಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಮ್ಮ ಯುವಕರು ಮಹಾವೃಕ್ಷಗಳಂತಿದ್ದಾರೆ. ನಮ್ಮ ಯುವತಿಯರು ಅರಮನೆಯಲ್ಲಿ ಸುಂದರವಾಗಿ ಕೆತ್ತಲ್ಪಟ್ಟ ಕಂಬಗಳಂತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ಯೌವನದಲ್ಲಿ ಉತ್ತಮವಾಗಿ ಬೆಳೆದವರಾಗಿರಲಿ; ನಮ್ಮ ಹೆಣ್ಣುಮಕ್ಕಳು ಅರಮನೆಯ ಶೃಂಗಾರಕ್ಕಾಗಿ ಕೆತ್ತಿದ ಸುಂದರ ಸ್ತಂಭಗಳ ಹಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 144:12
12 ತಿಳಿವುಗಳ ಹೋಲಿಕೆ  

ಅಂತಃಪುರದಲ್ಲಿರುವ ನಿನ್ನ ಹೆಂಡತಿಯು ಫಲಭರಿತವಾದ ದ್ರಾಕ್ಷಾಲತೆಯಂತಿರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕೂತುಕೊಳ್ಳುವ ನಿನ್ನ ಮಕ್ಕಳು ಎಣ್ಣೇಮರದ ಸಸಿಗಳಂತಿರುವರು.


ಯೋಬನ ಮಕ್ಕಳಷ್ಟು ಸುಂದರ ಸ್ತ್ರೀಯರು ಆ ದೇಶದಲ್ಲಿ ಎಲ್ಲಿಯೂ ಸಿಕ್ಕುತ್ತಿರಲಿಲ್ಲ. ತಂದೆಯು ಅಣ್ಣತಮ್ಮಂದಿರಿಗೆ ಕೊಟ್ಟ ಹಾಗೆ ಅವರಿಗೂ ಸ್ವಾಸ್ತ್ಯವನ್ನು ಹಂಚಿದನು.


ಅಯ್ಯೋ, ಅಪರಂಜಿಯಷ್ಟು ಅಮೂಲ್ಯರಾದ ಚೀಯೋನಿನ ಪ್ರಜೆಗಳು ಕುಂಬಾರನ ಕೈಕೆಲಸದ ಮಣ್ಣುಮಡಿಕೆಗಳೋ ಎಂಬಂತೆ ತಿರಸ್ಕರಿಸಲ್ಪಟ್ಟಿದ್ದಾರೆ.


ನಿಮ್ಮನ್ನು ಪ್ರೀತಿಸಿ ಅಭಿವೃದ್ಧಿಪಡಿಸಿ ಹೆಚ್ಚಿಸುವನು. ಆತನು ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮ ಸಂತಾನವನ್ನೂ ವ್ಯವಸಾಯವನ್ನೂ ನಿಮಗಿರುವ ಧಾನ್ಯದ್ರಾಕ್ಷಾರಸ, ಎಣ್ಣೆ ಇವುಗಳನ್ನೂ ನಿಮ್ಮ ದನಕುರಿಗಳಲ್ಲಿ ಹುಟ್ಟಿದ್ದನ್ನೂ ಅಭಿವೃದ್ಧಿಪಡಿಸುವನು.


ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು