Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 144:14 - ಕನ್ನಡ ಸತ್ಯವೇದವು J.V. (BSI)

14 ನಮ್ಮ ಎತ್ತುಗಳು ದೊಡ್ಡ ಹೇರುಗಳನ್ನು ಹೊತ್ತು ಬರುವವು. ವೈರಿಗಳು ಒಳಗೆ ನುಗ್ಗುವದಾಗಲಿ ನಮ್ಮವರನ್ನು ಒಯ್ಯುವದಾಗಲಿ ಇರುವದಿಲ್ಲ; ಬೀದಿಗಳಲ್ಲಿ ಗೋಳಾಟವು ಕೇಳಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಮ್ಮ ಪಶುಗಳು ಅಸಂಖ್ಯಾತವಾಗಲಿ, ವೈರಿಗಳು ಒಳಗೆ ನುಗ್ಗುವುದಾಗಲಿ, ನಮ್ಮವರನ್ನು ಸೆರೆ ಒಯ್ಯುವುದಾಗಲಿ ಇರುವುದಿಲ್ಲ, ಬೀದಿಗಳಲ್ಲಿ ಗೋಳಾಟವು ಕೇಳಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಮ್ಮ ಹಸುಗಳು ನೂರಾರು ಕರುಗಳನ್ನೀಯಲಿ I ಮೈಯಿಳಿಯದೆ, ಲೋಪವಿಲ್ಲದೆಯೆ ಗರ್ಭಧರಿಸಲಿ I ನಮ್ಮ ಬೀದಿಗಳಲಿ ಗೋಳಾಟ ಕೇಳಿಬರದಿರಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಮ್ಮ ಸೈನಿಕರು ಸುರಕ್ಷಿತವಾಗಿದ್ದಾರೆ. ಯಾವ ಶತ್ರುಗಳೂ ನುಗ್ಗಿಬರಲು ಪ್ರಯತ್ನಿಸುತ್ತಿಲ್ಲ. ನಾವು ಯುದ್ಧಕ್ಕೆ ಹೋಗುವುದೂ ಇಲ್ಲ; ನಮ್ಮ ಬೀದಿಗಳಲ್ಲಿ ಗೋಳಾಟವೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಮ್ಮ ಎತ್ತುಗಳು ಪ್ರಯಾಸ ಪಡುವುದಕ್ಕೆ ಬಲವುಳ್ಳವುಗಳಾಗಲಿ; ವೈರಿಗಳು ಒಳಗೆ ನುಗ್ಗುವುದಾಗಲಿ, ನಮ್ಮವರನ್ನು ಸೆರೆ ಹಿಡಿಯುವುದಾಗಲಿ ಇರುವುದಿಲ್ಲ. ನಮ್ಮ ಬೀದಿಗಳಲ್ಲಿ ಗೋಳಾಟವು ಇಲ್ಲದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 144:14
16 ತಿಳಿವುಗಳ ಹೋಲಿಕೆ  

ನಿಮ್ಮ ಮೇಲೆ ಬರುವ ಶತ್ರುಗಳು ನಿಮ್ಮಿಂದ ಸೋತುಹೋಗುವಂತೆ ಯೆಹೋವನು ಮಾಡುವನು. ಅವರು ಒಂದೇ ದಾರಿಯಿಂದ ನಿಮ್ಮ ಮೇಲೆ ಬಂದರೂ ಏಳು ದಾರಿಗಳಿಂದ ಓಡಿಹೋಗುವರು.


ನಾನು ಊರಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು; ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ.


ಯೆಹೂದವು ದುಃಖಿಸುತ್ತದೆ, ಅದರ ಊರುಗಳವರು ಕಂಗೆಟ್ಟು ಕರ್ರಗಾಗಿ ನೆಲದ ಮೇಲೆ ಬಿದ್ದಿದ್ದಾರೆ, ಯೆರೂಸಲೇವಿುನವರ ಗೋಳಾಟವು ಕೇಳಿಸುತ್ತದೆ.


ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲಾ ಅಸ್ತವಿುಸಿದೆ; ಲೋಕದ ಸಡಗರವು ಸೆರೆಯಾಗಿ ತೊಲಗಿದೆ.


ಇಸ್ರಾಯೇಲ್ ಭಟರು ಸೋತರು, ಸೌಲನೂ ಅವನ ಮಕ್ಕಳೂ ಸತ್ತರು ಎಂಬ ವರ್ತಮಾನವನ್ನು ತಗ್ಗಿನ ಆಚೆಯಲ್ಲಿಯೂ ಯೊರ್ದನಿನ ಆಚೆಯಲ್ಲಿಯೂ ವಾಸವಾಗಿದ್ದ ಇಸ್ರಾಯೇಲ್ಯರು ಕೇಳಿ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು; ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು.


ಇಸ್ರಾಯೇಲ್ಯರು ವಿುದ್ಯಾನ್ಯರ ದೆಸೆಯಿಂದ ಬಲು ಕುಗ್ಗಿ ಹೋಗಿ ಯೆಹೋವನಿಗೆ ಮೊರೆಯಿಟ್ಟರು.


ಇವರು ಬೀಜ ಬಿತ್ತಿದ ತರುವಾಯ ವಿುದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ಇವರಿಗೆ ವಿರೋಧವಾಗಿ ದಂಡೆತ್ತಿ ಬಂದು ಇಳುಕೊಂಡು


ಜನರು ಅನ್ಯದೇವತೆಗಳನ್ನು ಆರಿಸಿಕೊಂಡಿದ್ದರು; ಯುದ್ಧವು ಊರುಬಾಗಲವರೆಗೆ ಬಂದಿತ್ತು. ಇಸ್ರಾಯೇಲ್ಯರ ನಾಲ್ವತ್ತು ಸಾವಿರ ಸೈನಿಕರಲ್ಲಿ ಒಬ್ಬನಿಗೂ ಗುರಾಣಿ ಬರ್ಜಿಗಳು ಇದ್ದಿಲ್ಲ.


ನೀವು ಶತ್ರುಗಳಿಂದ ಪರಾಜಯವನ್ನು ಹೊಂದುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.


ನಿಮ್ಮ ದೇಶದಲ್ಲಿ ನಿಮಗೆ ಸುಕ್ಷೇಮವನ್ನು ಅನುಗ್ರಹಿಸುವೆನು; ಯಾರ ಭಯವೂ ಇಲ್ಲದೆ ಮಲಗಿಕೊಳ್ಳುವಿರಿ; ದುಷ್ಟಮೃಗಗಳು ದೇಶದಲ್ಲಿ ಇರದಂತೆ ಮಾಡುವೆನು; ನಿಮ್ಮ ದೇಶವು ಶತ್ರುಗಳ ಕತ್ತಿಯಿಂದ ಹಾಳಾಗುವದಿಲ್ಲ.


ಬಲಹೆಚ್ಚಾಗಿರುವದರಿಂದ ಅದರಲ್ಲಿ ನಂಬಿಕೆಯಿಟ್ಟು ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸಿಬಿಡುವಿಯೋ?


ನಾನೂ ಯೆರೂಸಲೇಮನ್ನು ದೃಷ್ಟಿಸುತ್ತಾ ಉಲ್ಲಾಸಿಸುವೆನು, ಅದರ ಜನರನ್ನು ಈಕ್ಷಿಸುತ್ತಾ ಹರ್ಷಗೊಳ್ಳುವೆನು. ರೋದನಶಬ್ದವೂ ಪ್ರಲಾಪಧ್ವನಿಯೂ ಅಲ್ಲಿ ಇನ್ನು ಕೇಳಿಸವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು