Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 144:15 - ಕನ್ನಡ ಸತ್ಯವೇದವು J.V. (BSI)

15 ಇಂಥ ಸುಸ್ಥಿತಿಯಲ್ಲಿರುವ ಜನರು ಧನ್ಯರು; ಯಾರಿಗೆ ಯೆಹೋವನು ದೇವರಾಗಿರುತ್ತಾನೋ ಅವರು ಭಾಗ್ಯವಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇಂಥ ಸುಸ್ಥಿತಿಯಲ್ಲಿರುವ ಜನರು ಧನ್ಯರು, ಯಾರಿಗೆ ಯೆಹೋವನು ದೇವರಾಗಿರುತ್ತಾನೋ ಅವರು ಭಾಗ್ಯವಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇಂತಹ ಸಮೃದ್ಧಿ ಪಡೆದಿರುವ ಜನರು ಭಾಗ್ಯವಂತರು I ಯಾರಿಗೆ ದೇವರು ಪ್ರಭುವಾಗಿಹನೋ ಅವರು ಧನ್ಯರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇಂಥ ಸುಸ್ಥಿತಿಯಲ್ಲಿರುವ ಜನರೇ ಧನ್ಯರು. ಯಾರಿಗೆ ಯೆಹೋವನು ದೇವರಾಗಿರುತ್ತಾನೋ ಅವರೇ ಭಾಗ್ಯವಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹೀಗಿರುವ ಜನರು ಧನ್ಯರು; ಯೆಹೋವ ದೇವರು ಯಾರಿಗೆ ದೇವರಾಗಿದ್ದಾರೋ, ಅವರು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 144:15
7 ತಿಳಿವುಗಳ ಹೋಲಿಕೆ  

ಯಾವ ಜನರಿಗೆ ಯೆಹೋವನೇ ದೇವರಾಗಿದ್ದಾನೋ ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯವರಗಳನ್ನು ನಮಗೆ ಕ್ರಿಸ್ತ ಯೇಸುವಿನಲ್ಲಿ ಅನುಗ್ರಹಿಸಿದ್ದಾನೆ.


ಯಾವನಿಗೆ ಯಾಕೋಬನ ದೇವರು ಸಹಾಯಕನೋ ಯಾವನು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ ಅವನೇ ಧನ್ಯನು.


ಇಸ್ರಾಯೇಲ್ಯರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಡಾಲೂ ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ.


ನಿನ್ನ ಅಂಗಳದಲ್ಲಿ ವಾಸಿಸುವವರಾಗಿ ನಿನ್ನ ಸನ್ನಿಧಿಯಲ್ಲಿ ಸೇವೆಮಾಡುವದಕ್ಕೋಸ್ಕರ ಯಾರನ್ನು ಆರಿಸಿಕೊಳ್ಳುತ್ತೀಯೋ ಅವರೇ ಧನ್ಯರು. ನೀನು ವಾಸಿಸುವ ಮಹಾಪವಿತ್ರಾಲಯದ ಸೌಭಾಗ್ಯದಿಂದ ನಮಗೆ ಸಂತೃಪ್ತಿಯಾಗಲಿ.


ಉತ್ಸಾಹಧ್ವನಿಯನ್ನು ಕೇಳಿದ ಜನರು ಧನ್ಯರು; ಯೆಹೋವನೇ, ಅವರು ನಿನ್ನ ಮುಖಪ್ರಕಾಶದಲ್ಲಿ ಸಂಚರಿಸುತ್ತಾರೆ.


ಹಿಜ್ಕೀಯನೂ ಪ್ರಭುಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಯೆಹೋವನನ್ನು ಕೊಂಡಾಡಿ ಆತನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಹರಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು