Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 144:7 - ಕನ್ನಡ ಸತ್ಯವೇದವು J.V. (BSI)

7 ಮೇಲಣ ಲೋಕದಿಂದ ಕೈಚಾಚಿ ಮಹಾಜಲರಾಶಿಯೊಳಗಿಂದ ನನ್ನನ್ನು ಎಳೆದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮೇಲಣ ಲೋಕದಿಂದ ಕೈಚಾಚಿ, ಮಹಾ ಜಲರಾಶಿಯೊಳಗಿಂದ ನನ್ನನ್ನು ಎಳೆದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನನ್ನ ಸೆಳೆದುಕೊ ಮಹಾಜಲರಾಶಿಯಿಂದ I ನಿನ್ನ ಕೈಚಾಚಿ ಮೇಲಣಲೋಕದಿಂದ I ನನ್ನನು ಬಿಡಿಸು ಅನ್ಯಜನರ ಕೈಯಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮೇಲಿನ ಲೋಕದಿಂದ ಕೈಚಾಚಿ ಮಹಾ ಜಲರಾಶಿಯಂತಿರುವ ನನ್ನ ಶತ್ರುಗಳಿಂದ ನನ್ನನ್ನು ಎಳೆದುಕೋ. ಅನ್ಯಜನರ ಕೈಯಿಂದ ನನ್ನನ್ನು ಬಿಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ಕೈಯನ್ನು ಉನ್ನತದಿಂದ ಚಾಚಿ, ಮಹಾ ಜಲದಿಂದಲೂ, ಪರದೇಶದವರ ಕೈಯಿಂದಲೂ ನನ್ನನ್ನು ತಪ್ಪಿಸಿರಿ, ನನ್ನನ್ನು ಬಿಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 144:7
15 ತಿಳಿವುಗಳ ಹೋಲಿಕೆ  

ಆತನು ಮೇಲಣ ಲೋಕದಿಂದ ಕೈಚಾಚಿ ನನ್ನನ್ನು ಹಿಡಿದು ಮಹಾಜಲರಾಶಿಗಳೊಳಗಿಂದ ಎಳೆದನು.


ಇನ್ನೂ ಆ ದೇವದೂತನು ನನಗೆ ಹೇಳಿದ್ದು - ಆ ಜಾರಸ್ತ್ರೀಯು ವಾಸಿಸಿರುವ ನೀರುಗಳನ್ನು ಕಂಡಿಯಲ್ಲ? ಅವು ಪ್ರಜೆ ಸಮೂಹ ಜನ ಭಾಷೆಗಳನ್ನು ಸೂಚಿಸುತ್ತವೆ.


ಅನ್ಯರು ನನಗೆ ವಿರೋಧವಾಗಿ ನಿಂತಿದ್ದಾರೆ; ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವದೇ ಇಲ್ಲ. ಸೆಲಾ.


ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು; ದೇಶಾಂತರದವರು ನನ್ನ ಮುಂದೆ ಮುದುರಿಕೊಳ್ಳುವರು.


ಆತನು ಮೇಲಣ ಲೋಕದಿಂದ ಕೈಚಾಚಿ ನನ್ನನ್ನು ಹಿಡಿದು ಮಹಾಜಲರಾಶಿಗಳೊಳಗಿಂದ ಎಳೆದನು.


ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರು ಅವನಲ್ಲಿ ಇಷ್ಟಪಟ್ಟರೆ ಈಗ ಅವನನ್ನು ಬಿಡಿಸಲಿ; ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ ಎಂದು ಹಾಸ್ಯದಿಂದ ಮಾತಾಡುತ್ತಿದ್ದರು.


ಯೆಹೂದವು ದ್ರೋಹಮಾಡಿದೆ, ಇಸ್ರಾಯೇಲಿನಲ್ಲಿಯೂ ಯೆರೂಸಲೇವಿುನಲ್ಲಿಯೂ ಒಂದು ದುರಾಚಾರವು ನಡೆಯುತ್ತಿದೆ; ಯೆಹೂದವು ಅನ್ಯದೇವತೆಯ ಮಗಳನ್ನು ಮದುವೆಯಾಗಿ ಯೆಹೋವನ ಪ್ರಿಯ ದೇವಾಲಯವನ್ನು ಹೊಲೆಗೆಡಿಸಿದೆ.


ಕಪಟವಚನದವರೂ ಬಲಗೈಯೆತ್ತಿ ಸುಳ್ಳಾಣೆಯಿಡುವವರೂ ಆಗಿರುವ ಅನ್ಯಜನಗಳ ಕೈಯಿಂದ ನನ್ನನ್ನು ಬಿಡಿಸಿ ಕಾಪಾಡು.


ಇಸ್ರಾಯೇಲ್‍ಸಂತಾನದವರು ಎಲ್ಲಾ ಅನ್ಯಕುಲದವರಿಂದ ತಮ್ಮನ್ನು ಬೇರ್ಪಡಿಸಿಕೊಂಡು ನಿಂತು ತಮ್ಮ ಪಾಪಗಳನ್ನೂ ತಮ್ಮ ಪಿತೃಗಳ ಪಾಪಗಳನ್ನೂ ಆತನಿಗೆ ಅರಿಕೆಮಾಡಿದರು.


ನನಗಿಂತ ಬಲಿಷ್ಠರೂ ಪುಷ್ಟರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದನು.


ನಿಶ್ಚಯವಾಗಿ ಪ್ರವಾಹವು ನಮ್ಮನ್ನು ಬಡುಕೊಂಡು ಹೋಗುತ್ತಿತ್ತು; ನದಿಯು ನಮ್ಮನ್ನು ಮುಣುಗಿಸುತ್ತಿತ್ತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು