Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 145:12 - ಕನ್ನಡ ಸತ್ಯವೇದವು J.V. (BSI)

12 ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ ನಿನ್ನ ರಾಜ್ಯದ ಮಹಾಪ್ರಭಾವವನ್ನೂ ಗ್ರಹಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ, ನಿನ್ನ ರಾಜ್ಯದ ಮಹಾಪ್ರಭಾವವನ್ನೂ ಗ್ರಹಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅರಿವರಿಂತು ಜನರು ನಿನ್ನ ಶೂರ ಕಾರ್ಯಗಳನು I ಗ್ರಹಿಸುವರು ನಿನ್ನ ರಾಜ್ಯದ ಮಹಿಮೆ ಪ್ರಭಾವವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಹೀಗೆ ನಿನ್ನ ಮಹತ್ಕಾರ್ಯಗಳನ್ನು ಇತರ ಜನರು ತಿಳಿದುಕೊಳ್ಳುವರು. ನಿನ್ನ ರಾಜ್ಯದ ಮಹತ್ವವನ್ನೂ ವೈಭವವನ್ನೂ ಅವರು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮಾನವರಿಗೆ ನಿಮ್ಮ ಪರಾಕ್ರಮ ಕ್ರಿಯೆಗಳನ್ನೂ, ನಿಮ್ಮ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 145:12
15 ತಿಳಿವುಗಳ ಹೋಲಿಕೆ  

ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನ ನಾಮದ ಮಹತ್ವವನ್ನು ವರ್ಣಿಸಿರಿ; ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ.


ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು. ಆಗ ಪರಲೋಕದಲ್ಲಿ ಮಹಾ ಶಬ್ದವನ್ನು ಕೇಳಿದೆನು, ಅದು - ಈಗ ಜಯವೂ ಶಕ್ತಿಯೂ ರಾಜ್ಯವೂ ನಮ್ಮ ದೇವರಿಗೆ ಉಂಟಾಯಿತು; ಆತನು ಅಭಿಷೇಕಿಸಿದವನ ಅಧಿಕಾರವು ಈಗ ಸ್ಥಾಪಿತವಾಯಿತು; ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ.


ಆಗ ಯೇಸು ಹತ್ತರಕ್ಕೆ ಬಂದು - ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ಯೆಹೋವನ ಮಹತ್ಕಾರ್ಯಗಳನ್ನು ಯಾರು ವರ್ಣಿಸಬಲ್ಲರು? ಆತನನ್ನು ತಕ್ಕಂತೆ ಕೀರ್ತಿಸುವದು ಯಾರಿಂದಾದೀತು?


ಆತನ ಸೇವಕನಾದ ಅಬ್ರಹಾಮನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ,


ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡಿಸಿದ್ದಾನೆ. ಆತನ ಬಲಗೈಯೂ ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.


ಆತನು ಅನ್ಯಜನಗಳ ಸ್ವಾಸ್ತ್ಯವನ್ನು ತನ್ನ ಪ್ರಜೆಗೆ ಕೊಡುವದರ ಮೂಲಕ ಸ್ವಪ್ರತಾಪವನ್ನು ತೋರ್ಪಡಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು