Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 145:15 - ಕನ್ನಡ ಸತ್ಯವೇದವು J.V. (BSI)

15 [ಯೆಹೋವನೇ,] ಎಲ್ಲಾ ಜೀವಿಗಳ ಕಣ್ಣುಗಳು ನಿನ್ನನ್ನೇ ನೋಡುತ್ತವೆ; ನೀನು ಅವುಗಳಿಗೆ ಹೊತ್ತುಹೊತ್ತಿಗೆ ಆಹಾರಕೊಡುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನೇ, ಎಲ್ಲಾ ಜೀವಿಗಳ ಕಣ್ಣುಗಳು ನಿನ್ನನ್ನೇ ನೋಡುತ್ತವೆ, ನೀನು ಅವುಗಳಿಗೆ ಹೊತ್ತುಹೊತ್ತಿಗೆ ಆಹಾರಕೊಡುತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಎತ್ತುವನಾತ ಬಿದ್ದವರನೆಲ್ಲ I ಉದ್ಧರಿಪನು ಕುಗ್ಗಿದವರನೆಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಎಲ್ಲಾ ಜೀವಿಗಳು ತಮ್ಮ ಆಹಾರಕ್ಕಾಗಿ ನಿನ್ನನ್ನೇ ನೋಡುತ್ತವೆ. ನೀನು ಸಮಯಕ್ಕೆ ಸರಿಯಾಗಿ ಅವುಗಳಿಗೆ ಆಹಾರವನ್ನು ಕೊಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದೇವರೇ, ಎಲ್ಲರ ಕಣ್ಣುಗಳು ನಿಮಗಾಗಿ ಕಾಯುತ್ತಿರುತ್ತವೆ. ನೀವು ಅವರಿಗೆ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 145:15
11 ತಿಳಿವುಗಳ ಹೋಲಿಕೆ  

ಎಲ್ಲಾ ಜೀವಿಗಳಿಗೂ ಆಹಾರಕೊಡುವವನು ಆತನೇ; ಆತನ ಕೃಪೆಯು ಶಾಶ್ವತವಾದದ್ದು.


ಇವೆಲ್ಲಾ ಹೊತ್ತುಹೊತ್ತಿಗೆ ಆಹಾರಕ್ಕೋಸ್ಕರ ನಿನ್ನನ್ನೇ ನಿರೀಕ್ಷಿಸುತ್ತವೆ.


ತಾನೇ ಎಲ್ಲರಿಗೂ ಜೀವಶ್ವಾಸ ಮುಂತಾದದ್ದೆಲ್ಲವನ್ನೂ ಕೊಡುವವನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಸೇವೆಹೊಂದುವವನೂ ಅಲ್ಲ.


ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ?


ಕಾಗೆಗಳನ್ನು ಲಕ್ಷ್ಯವಿಟ್ಟು ಯೋಚಿಸಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ, ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ; ಆದಾಗ್ಯೂ ದೇವರು ಅವುಗಳನ್ನು ಸಾಕಿಸಲಹುತ್ತಾನೆ. ಹಕ್ಕಿಗಳಿಗಿಂತ ನೀವು ಎಷ್ಟೋ ಹೆಚ್ಚಿನವರಲ್ಲವೇ.


ಇದಲ್ಲದೆ ಭೂವಿುಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿವಿುಕೀಟಗಳು ಎಂಬ ಜೀವಿಗಳಿಗೆ ಎಲ್ಲಾ ಹುಲ್ಲುಸೊಪ್ಪುಗಳನ್ನು ಆಹಾರಕ್ಕಾಗಿ ಕೊಟ್ಟಿದ್ದೇನೆ ಎಂದು ಹೇಳಿದನು; ಅದು ಹಾಗೆಯೇ ಆಯಿತು.


ಭೂಜಂತುಗಳೇ, ಅಂಜಬೇಡಿರಿ; ಕಾಡಿನ ಕಾವಲಲ್ಲಿ ಹುಲ್ಲು ಮೊಳೆಯುವದು, ಮರವು ಹಣ್ಣುಬಿಡುವದು, ಅಂಜೂರದ ಗಿಡವೂ ದ್ರಾಕ್ಷಾಲತೆಯೂ ಸಾರವತ್ತಾಗಿ ಫಲಿಸುವವು.


ಪ್ರಾಯದ ಸಿಂಹಗಳು ಬೇಟೆಗಾಗಿ ಗರ್ಜಿಸುತ್ತವೆ; ದೇವರಿಂದ ಆಹಾರವನ್ನು ಕೇಳಿಕೊಳ್ಳುತ್ತವೆ.


ಯೆಹೋವನು ಸರ್ವೋಪಕಾರಿಯೂ ತಾನು ನಿರ್ಮಿಸಿದವುಗಳನ್ನೆಲ್ಲಾ ಕರುಣಿಸುವಾತನೂ ಆಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು