Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 145:21 - ಕನ್ನಡ ಸತ್ಯವೇದವು J.V. (BSI)

21 ನನ್ನ ಬಾಯಿ ಯೆಹೋವನನ್ನು ಕೀರ್ತಿಸುವದು; ಎಲ್ಲಾ ಜೀವಿಗಳು ಆತನ ಪರಿಶುದ್ಧ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನನ್ನ ಬಾಯಿ ಯೆಹೋವನನ್ನು ಕೀರ್ತಿಸುವುದು, ಎಲ್ಲಾ ಜೀವಿಗಳು ಆತನ ಪರಿಶುದ್ಧ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಸಲಹುವನು ತನ್ನನು ಪ್ರೀತಿಸುವವರೆಲ್ಲರನು I ನಾಶಮಾಡುವನು ದುರ್ಮಾರ್ಗಿಗಳೆಲ್ಲರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಾನು ಯೆಹೋವನನ್ನು ಕೊಂಡಾಡುತ್ತೇನೆ! ಎಲ್ಲಾ ಜೀವಿಗಳು ಆತನ ಪವಿತ್ರ ಹೆಸರನ್ನು ಸದಾಕಾಲ ಕೊಂಡಾಡಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನನ್ನ ಬಾಯಿ ಯೆಹೋವ ದೇವರ ಸ್ತೋತ್ರವನ್ನು ನುಡಿಯಲಿ; ಸಮಸ್ತ ಜೀವಿಗಳು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 145:21
16 ತಿಳಿವುಗಳ ಹೋಲಿಕೆ  

ನನ್ನ ಬಾಯಲ್ಲಿ ನಿನ್ನ ಸ್ತೋತ್ರವಲ್ಲದೆ ಮತ್ತೊಂದಿಲ್ಲ; ದಿನವೆಲ್ಲಾ ನಿನ್ನ ಘನತೆಯನ್ನು ವರ್ಣಿಸುತ್ತಿರುವೆನು.


ಶ್ವಾಸವಿರುವದೆಲ್ಲವೂ ಯೆಹೋವನನ್ನು ಸ್ತುತಿಸಲಿ; ಯಾಹುವಿಗೆ ಸ್ತೋತ್ರ!


ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರ ಮಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು.


ಇದರಿಂದ ಯೆಹೋವನೇ, ನನ್ನ ಮನಸ್ಸು ಎಡೆಬಿಡದೆ ನಿನ್ನನ್ನು ಕೀರ್ತಿಸುತ್ತಿರುವದು; ನನ್ನ ದೇವರೇ, ನಿನ್ನನ್ನು ಸದಾಕಾಲವೂ ಸ್ತುತಿಸುವೆನು.


ನಾನು ನಿನ್ನ ಮಹಾಪ್ರಭಾವಯುಕ್ತವಾದ ಮಹಿಮೆಯನ್ನೂ ಅದ್ಭುತಕಾರ್ಯಗಳನ್ನೂ ಧ್ಯಾನಿಸುವೆನು.


ಆತನ ರಾಜ್ಯದ ಸರ್ವಸ್ಥಳಗಳಲ್ಲಿರುವ ಎಲ್ಲಾ ಸೃಷ್ಟಿಗಳೇ, ಯೆಹೋವನನ್ನು ಕೊಂಡಾಡಿರಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು.


ಯೆಹೋವನೇ, ನಿತ್ಯವೂ ನಿನ್ನ ಕೃಪಾತಿಶಯವನ್ನು ಹಾಡಿಹರಸುವೆನು; ನಿನ್ನ ಸತ್ಯತೆಯನ್ನು ಮುಂದಣ ಸಂತಾನದವರೆಲ್ಲರಿಗೂ ನನ್ನ ಬಾಯಿ ತಿಳಿಯಮಾಡುವದು.


ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು.


ನನ್ನ ಬಾಯಿ ನಿನ್ನ ನೀತಿಯನ್ನೂ ರಕ್ಷಣೆಯನ್ನೂ ಹಗಲೆಲ್ಲಾ ವರ್ಣಿಸುತ್ತಿರುವದು; ಆದರೂ ಅವುಗಳ ವಿವರಣೆ ನನಗೆ ಅಸಾಧ್ಯ.


ಪ್ರಾರ್ಥನೆಯನ್ನು ಕೇಳುವವನೇ, ನರರೆಲ್ಲರು ನಿನ್ನ ಬಳಿಗೆ ಬರುವರು.


ದೇವರು ಚೀಯೋನ್ ಪಟ್ಟಣವನ್ನು ರಕ್ಷಿಸಿ ಯೆಹೂದದೇಶದ ನಗರಗಳನ್ನು ಕಟ್ಟಿಸುವನು; ಆತನ ಪ್ರಜೆಗಳು ಅಲ್ಲಿ ವಾಸಮಾಡುತ್ತಾ ಸ್ವದೇಶವಾಗಿ ಮಾಡಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು