Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 145:3 - ಕನ್ನಡ ಸತ್ಯವೇದವು J.V. (BSI)

3 ಯೆಹೋವನು ಮಹೋನ್ನತನೂ ಮಹಾಸ್ತುತಿಪಾತ್ರನೂ ಆಗಿದ್ದಾನೆ; ಆತನ ಮಹತ್ತು ಅಪಾರವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ಮಹೋನ್ನತನೂ, ಮಹಾಸ್ತುತಿಪಾತ್ರನೂ ಆಗಿದ್ದಾನೆ, ಆತನ ಮಹತ್ತು ಅಪಾರವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪ್ರಭು ಮಹಾತ್ಮನು, ಸ್ತುತ್ಯರ್ಹನು I ಆತನ ಮಹಿಮೆ ಅಗಮ್ಯವಾದದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ಮಹೋನ್ನತನೂ ಸ್ತುತಿಗೆ ಪಾತ್ರನೂ ಆಗಿದ್ದಾನೆ. ಆತನ ಮಹತ್ಕಾರ್ಯಗಳು ಅಸಂಖ್ಯಾತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರು ಮಹೋನ್ನತರೂ, ಬಹುಸ್ತುತಿಪಾತ್ರರೂ ಆಗಿದ್ದಾರೆ. ಅವರ ಮಹತ್ವವು ಅಗಮ್ಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 145:3
14 ತಿಳಿವುಗಳ ಹೋಲಿಕೆ  

ನಮ್ಮ ಕರ್ತನು ದೊಡ್ಡವನೂ ಪರಾಕ್ರವಿುಯೂ ಆಗಿದ್ದಾನೆ; ಆತನ ಜ್ಞಾನವು ಅಪರಿವಿುತವಾಗಿದೆ.


ಆಹಾ, ದೇವರ ಐಶ್ವರ್ಯವೂ ಜ್ಞಾನವೂ ವಿವೇಕವೂ ಎಷ್ಟೋ ಅಗಾಧ! ಆತನ ತೀರ್ಮಾನಗಳು ಪರಿಶೋಧನೆಗೆ ಎಷ್ಟೋ ಅಗಮ್ಯ! ಆತನ ಮಾರ್ಗಗಳು ಕಂಡುಹಿಡಿಯುವದಕ್ಕೆ ಎಷ್ಟೋ ಅಸಾಧ್ಯ!


ಆತನು ಅಪ್ರಮೇಯ ಮಹಾಕಾರ್ಯಗಳನ್ನೂ ಅಸಂಖ್ಯವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ;


ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ ಭೂವಿುಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ; ಆತನು ದಣಿದು ಬಳಲುವದಿಲ್ಲ; ಆತನ ವಿವೇಕವು ಪರಿಶೋಧನೆಗೆ ಅಗಮ್ಯ.


ಅಪ್ರಮೇಯ ಮಹಾಕಾರ್ಯಗಳನ್ನೂ ಅಸಂಖ್ಯವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ.


ಇಂಥ ಜ್ಞಾನವು ನನಗೆ ಬಹು ಆಶ್ಚರ್ಯವಾಗಿದೆ; ಅದು ಉನ್ನತವಾದದ್ದು, ನನಗೆ ನಿಲುಕುವದಿಲ್ಲ.


ಯೆಹೋವನು ಮಹೋನ್ನತನು; ನಮ್ಮ ದೇವರು ತನ್ನ ಪರಿಶುದ್ಧ ಪರ್ವತನಗರದಲ್ಲಿ ಸರ್ವಸ್ತುತಿಪಾತ್ರನಾಗಿದ್ದಾನೆ.


ಯೆಹೋವನು ದೊಡ್ಡವನೂ ಬಹಳವಾಗಿ ಸ್ತುತ್ಯನೂ ಆಗಿದ್ದಾನೆ; ಎಲ್ಲಾ ದೇವರುಗಳಲ್ಲಿ ಆತನೇ ಭಯಂಕರನು.


ಆಹಾ, ಈ ಅದ್ಭುತಗಳು ಆತನ ಮಾರ್ಗಗಳ ಕಟ್ಟಕಡೆಯಾಗಿವೆ. ಆತನ ವಿಷಯವಾಗಿ ಸೂಕ್ಷ್ಮಶಬ್ದವನ್ನು ಮಾತ್ರ ಕೇಳಿದ್ದೇವೆ, ಆತನ ಪ್ರಾಬಲ್ಯದ ಘನಗರ್ಜನೆಯನ್ನು ಯಾರು ಗ್ರಹಿಸಬಲ್ಲರು?


ದೇವರ ದಾಸನಾದ ಮೋಶೆಯ ಹಾಡನ್ನೂ ಯಜ್ಞದ ಕುರಿಯಾದಾತನ ಹಾಡನ್ನೂ ಹಾಡುತ್ತಾ - ದೇವರಾದ ಕರ್ತನೇ, ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಸರ್ವಜನಾಂಗಗಳ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ;


ಯೆಹೋವನು ದೊಡ್ಡವನೂ ಬಹಳವಾಗಿ ಸ್ತುತ್ಯನೂ ಆಗಿದ್ದಾನೆ; ಎಲ್ಲಾ ದೇವತೆಗಳಲ್ಲಿ ಆತನೇ ಭಯಂಕರನು.


ಆಹಾ, ದೇವರು ಮಹೋನ್ನತನಾಗಿದ್ದಾನೆ, ನಾವು ಆತನನ್ನು ಅರಿಯಲಾರೆವು; ಆತನ ವರುಷಗಳು ಅಸಂಖ್ಯಾತವಾಗಿವೆ.


ಇಂಥ ಸರ್ವಶಕ್ತನನ್ನು ನಾವು ಕಂಡುಹಿಡಿಯಲಾರೆವು; ಆತನ ಪರಾಕ್ರಮವು ಬಹಳ; ಆತನು ನ್ಯಾಯವನ್ನಾಗಲಿ ಪರಿಪೂರ್ಣಧರ್ಮವನ್ನಾಗಲಿ ಕುಂದಿಸುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು