Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 145:7 - ಕನ್ನಡ ಸತ್ಯವೇದವು J.V. (BSI)

7 ಜನರು ನಿನ್ನ ಮಹೋಪಕಾರವನ್ನು ನೆನಪಿನಲ್ಲಿಟ್ಟುಕೊಂಡು ಪ್ರಕಟಿಸುವರು; ನಿನ್ನ ನೀತಿಯನ್ನು ಹೊಗಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಜನರು ನಿನ್ನ ಮಹೋಪಕಾರವನ್ನು ನೆನಪಿನಲ್ಲಿಟ್ಟುಕೊಂಡು ಪ್ರಕಟಿಸುವರು, ನಿನ್ನ ನೀತಿಯನ್ನು ಹೊಗಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪ್ರಕಟಿಸುವರವರು ನಿನ್ನ ಮಹೋಪಕಾರವನು I ಹಾಡಿ ಹೊಗಳುವರು ನಿನ್ನ ನ್ಯಾಯನೀತಿಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿನ್ನ ಒಳ್ಳೆಯ ಕಾರ್ಯಗಳ ಕುರಿತಾಗಿ ಜನರು ಹೇಳುವರು. ನಿನ್ನ ನೀತಿಯು ಕುರಿತಾಗಿ ಜನರು ಹಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ಬಹು ಒಳ್ಳೆಯತನದ ಜ್ಞಾಪಕವನ್ನು ಅವರು ನುಡಿಯುವರು; ನಿಮ್ಮ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 145:7
16 ತಿಳಿವುಗಳ ಹೋಲಿಕೆ  

ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನೂ ಸ್ತುತ್ಯಕೃತ್ಯಗಳನ್ನೂ ಆತನು ಕನಿಕರದಿಂದಲೂ ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು.


ದೇವರೇ, ನನ್ನ ರಕ್ಷಣಕರ್ತನೇ, ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ಸತ್ಯಸಂಧತೆಯನ್ನು ಕೊಂಡಾಡುವದು.


ನಿನ್ನನ್ನು ಅರಿತವರಿಗೆ ನಿನ್ನ ಪ್ರೀತಿಯನ್ನು ಯಾವಾಗಲೂ ದಯಪಾಲಿಸು; ಯಥಾರ್ಥಚಿತ್ತರಿಗೆ ನಿನ್ನ ನ್ಯಾಯವನ್ನು ನಿರಂತರವೂ ಅನುಗ್ರಹಿಸು.


ಯಾವಾಗಲೂ ನಿನ್ನ ನಾಮದಲ್ಲಿ ಆನಂದಿಸುತ್ತಾರೆ; ನಿನ್ನ ನೀತಿಯಿಂದ ಏಳಿಗೆಹೊಂದುತ್ತಾರೆ.


ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ. ಮಹತ್ಕೃತ್ಯಗಳನ್ನು ನಡಿಸಿದ ದೇವರೇ, ನಿನಗೆ ಸಮಾನರು ಯಾರು?


ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲ್ಯರು ನೆಮ್ಮದಿಯಾಗಿ ವಾಸಿಸುವರು; ಯೆಹೋವ ಚಿದ್ಕೇನು [ಅಂದರೆ ಯೆಹೋವನೇ ನಮ್ಮ ಸದ್ಧರ್ಮ] ಎಂಬ ಹೆಸರು ಅವನಿಗಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು