Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 145:8 - ಕನ್ನಡ ಸತ್ಯವೇದವು J.V. (BSI)

8 ಯೆಹೋವನು ದಯೆಯೂ ಕನಿಕರವೂ ಉಳ್ಳವನು; ದೀರ್ಘಶಾಂತನೂ ಪ್ರೀತಿಪೂರ್ಣನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ದಯೆಯು, ಕನಿಕರವು ಉಳ್ಳವನು, ದೀರ್ಘಶಾಂತನು, ಪ್ರೀತಿಪೂರ್ಣನು ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪ್ರಭು ದಯಾನಿಧಿ, ಕೃಪಾಸಾಗರನು I ಸಹನಶೀಲನು, ಪ್ರೀತಿಪೂರ್ಣನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ದಯೆಯುಳ್ಳವನೂ ಕನಿಕರವುಳ್ಳವನೂ ದೀರ್ಘಶಾಂತನೂ ಪ್ರೀತಿಪೂರ್ಣನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ಕೃಪಾಳುವೂ, ಅನುಕಂಪವೂ, ದೀರ್ಘಶಾಂತಿಯೂ, ಪ್ರೀತಿ ಪೂರ್ಣರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 145:8
14 ತಿಳಿವುಗಳ ಹೋಲಿಕೆ  

ಯೆಹೋವನು ದೀರ್ಘಶಾಂತನು, ಬಹು ಪ್ರೀತಿಯುಳ್ಳವನು, ಅಪರಾಧ ಪಾಪಗಳನ್ನು ಕ್ಷವಿುಸುವವನು; ಆದಾಗ್ಯೂ [ಅಪರಾಧಿಗಳನ್ನು] ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರುನಾಲ್ಕು ತಲೆಗಳವರೆಗೆ ಬರಮಾಡುವವನು ಎಂದು ಹೇಳಿದಿಯಲ್ಲಾ. ಈ ಮಾತಿಗೆ ದೃಷ್ಟಾಂತವನ್ನು ಕೊಟ್ಟು ನಿನ್ನ ಮಹಿಮೆಯನ್ನು ದೃಢಪಡಿಸಬೇಕು.


ಯೆಹೋವನು ಕನಿಕರವೂ ದಯೆಯೂ ದೀರ್ಘಶಾಂತಿಯೂ ಪೂರ್ಣಪ್ರೀತಿಯೂ ಉಳ್ಳವನು.


ಕರ್ತನೇ, ನೀನು ಒಳ್ಳೆಯವನೂ ಕ್ಷವಿುಸುವವನೂ ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದೀಯಲ್ಲಾ.


ಯೆಹೋವನು ಕೃಪಾಳುವೂ ನೀತಿವಂತನೂ ಆಗಿದ್ದಾನೆ; ನಮ್ಮ ದೇವರು ಕನಿಕರವುಳ್ಳವನು.


ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.


ಕರ್ತನೇ, ನೀನು ಕನಿಕರವೂ ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ ನಂಬಿಕೆಯೂ ಉಳ್ಳವನು.


ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮ ಮೇಲೆ ಮಹಾ ಪ್ರೀತಿಯನ್ನಿಟ್ಟು


ಆತನು ರಹಸ್ಯವಾದ ತನ್ನ ಸಂಕಲ್ಪವನ್ನು ನಮಗೆ ತಿಳಿಯಪಡಿಸುವದರ ಮೂಲಕ ವಿಶೇಷವಾದ ಜ್ಞಾನವನ್ನೂ ಬುದ್ಧಿಯನ್ನೂ ಕೊಟ್ಟು ಆ ಕೃಪೆಯನ್ನು ಇನ್ನೂ ಹೆಚ್ಚಾಗಿ ನಮಗೆ ತೋರಿಸಿದ್ದಾನೆ.


ಅವನು ಸಿಟ್ಟುಗೊಂಡು - ಯೆಹೋವಾ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವದೆಂದು ಹೇಳಿದೆನಷ್ಟೆ; ನೀನು ದಯೆಯೂ ಕನಿಕರವೂ ದೀರ್ಘಶಾಂತಿಯೂ ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ ತಾರ್ಷೀಷಿಗೆ ಓಡಿ ಹೋಗಲು ತ್ವರೆಪಟ್ಟೆನು.


ಕರ್ತನಾದ ನಮ್ಮ ದೇವರು ಕರುಣಿಸುವವನೂ ಕ್ಷವಿುಸುವವನೂ ಆಗಿದ್ದಾನೆ; ನಾವು ಆತನಿಗೆ ತಿರುಗಿಬಿದ್ದೆವಲ್ಲಾ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು