Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 146:3 - ಕನ್ನಡ ಸತ್ಯವೇದವು J.V. (BSI)

3 ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನವನನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತನಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಪ್ರಭುಗಳಲ್ಲಾಗಲಿ, ಮನುಷ್ಯರಲ್ಲಾಗಲಿ ಭರವಸವಿಡಬೇಡಿರಿ, ಅವರು ಸಹಾಯ ಮಾಡ ಶಕ್ತರಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಂಬಬೇಡ ಅಧಿಕಾರಿಯನು I ನೆಚ್ಚಬೇಡ ನರಮಾನವನನು I ಉದ್ಧರಿಸಲು ಅಸಮರ್ಥನವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸಹಾಯಕ್ಕಾಗಿ ನಿಮ್ಮ ನಾಯಕರುಗಳನ್ನು ಅವಲಂಬಿಸಿಕೊಳ್ಳಬೇಡಿ. ಮನುಷ್ಯರಲ್ಲಿ ಭರವಸವಿಡಬೇಡಿ, ಅವರು ನಿಮ್ಮನ್ನು ರಕ್ಷಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಧಿಪತಿಗಳಲ್ಲಿಯೂ ರಕ್ಷಿಸಲಾಗದ ಮಾನವರಲ್ಲಿಯೂ ಭರವಸವಿಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 146:3
11 ತಿಳಿವುಗಳ ಹೋಲಿಕೆ  

ಉಸಿರು ಮೂಗಿನಲ್ಲಿರುವ ತನಕ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಯಾವ ಗಣನೆಗೆ ಬಂದಾನು?


ನಮಗೆ ಕೈಕೊಟ್ಟು ಶತ್ರುಬಾಧೆಯಿಂದ ಪಾರುಮಾಡು. ಮನುಷ್ಯರ ಸಹಾಯವು ವ್ಯರ್ಥ.


ಐಗುಪ್ತ್ಯರು ಮನುಷ್ಯ ಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಮಾಂಸಮಯವೇ, ಆತ್ಮವಲ್ಲ; ಯೆಹೋವನು ಕೈಚಾಚುವಾಗ ಸಹಾಯ ಮಾಡಿದವನು ಮುಗ್ಗರಿಸುವನು, ಸಹಾಯಪಡೆದವನು ಬಿದ್ದು ಹೋಗುವನು, ಅಂತು ಎಲ್ಲರೂ ಒಟ್ಟಿಗೆ ಲಯವಾಗುವರು.


ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಲಘು.


ನಮಗೆ ಕೈಕೊಟ್ಟು ಶತ್ರುಬಾಧೆಯಿಂದ ಪಾರುಮಾಡು; ಮನುಷ್ಯರ ಸಹಾಯವು ವ್ಯರ್ಥ.


ಅರಸನು ಆಕೆಗೆ - ಯೆಹೋವನು ನಿನ್ನನ್ನು ರಕ್ಷಿಸದಿದ್ದರೆ ನಾನು ಹೇಗೆ ರಕ್ಷಿಸಬಹುದು? ಕಣದಲ್ಲಾಗಲಿ ದ್ರಾಕ್ಷೇ ಆಲೆಯಲ್ಲಾಗಲಿ ಏನಾದರೂ ಉಂಟೋ ಎಂದು ಹೇಳಿ


ಆ ಕಾಲದಲ್ಲಿ ದರ್ಶಿಯಾದ ಹನಾನಿಯು ಯೆಹೂದ್ಯರ ಅರಸನಾದ ಆಸನ ಬಳಿಗೆ ಬಂದು ಅವನಿಗೆ - ನೀನು ನಿನ್ನ ದೇವರಾದ ಯೆಹೋವನ ಮೇಲೆ ಆತುಕೊಳ್ಳದೆ ಅರಾಮ್ಯರ ಅರಸನ ಮೇಲೆ ಆತುಕೊಂಡದರಿಂದ ಅರಾಮ್‍ರಾಜನ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.


ಸೇನಾಧೀಶ್ವರನಾದ ಯೆಹೋವನು ಹೇಳುವದೇನಂದರೆ - ಗಟ್ಟಿಯಾದ ಸ್ಥಳದಲ್ಲಿ ಹೊಡೆದ ಮೊಳೆಯು ಆ ದಿನದಲ್ಲಿ ಕುಸಿದು ಹೋಗುವದು; ಅದು ಬಡಿಯಲ್ಪಟ್ಟು ಬೀಳಲಾಗಿ ಅದಕ್ಕೆ ತಗಲುಹಾಕಿದ ಭಾರವೂ ನಾಶವಾಗುವದು. ಇದೇ ಯೆಹೋವನಾದ ನನ್ನ ನುಡಿ ಎಂಬದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು