ಕೀರ್ತನೆಗಳು 146:5 - ಕನ್ನಡ ಸತ್ಯವೇದವು J.V. (BSI)5 ಯಾವನಿಗೆ ಯಾಕೋಬನ ದೇವರು ಸಹಾಯಕನೋ ಯಾವನು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ ಅವನೇ ಧನ್ಯನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯಾರಿಗೆ ಯಾಕೋಬನ ದೇವರು ಸಹಾಯಕನೋ, ಯಾರು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ, ಅವನೇ ಧನ್ಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇಸ್ರಯೇಲ ಕುಲದೇವರು ಯಾರಿಗೆ ಉದ್ಧಾರಕನೋ, ಅವನೇ ಧನ್ಯನು I ಪ್ರಭುವನು ತನ್ನ ದೇವರೆಂದು ಯಾರು ನಂಬಿಹನೋ, ಅವನೇ ಧನ್ಯನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯಾರಿಗೆ ದೇವರು ಸಹಾಯಕನೋ, ಯಾರು ತಮ್ಮ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದಾರೋ, ಅವರೇ ಭಾಗ್ಯವಂತರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯಾಕೋಬನ ದೇವರನ್ನು ತಮ್ಮ ಸಹಾಯಕರಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಯೆಹೋವ ದೇವರ ಮೇಲೆ ನಿರೀಕ್ಷೆ ಇಡುವನು. ಅಧ್ಯಾಯವನ್ನು ನೋಡಿ |
ಇಸ್ರಾಯೇಲ್ಯರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಡಾಲೂ ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ.
ನಿನ್ನ ಅಣ್ಣಂದಿರಾದ ನಾವು ನಿನಗೆ ಕೇಡು ಮಾಡಿದ್ದು ನಿಜವೇ; ಆದರೂ ನಮ್ಮ ಅಪರಾಧವನ್ನೂ ಪಾಪವನ್ನೂ ಕ್ಷವಿುಸು ಎಂಬದಾಗಿ ಹೇಳಿಕೊಳ್ಳಬೇಕು; ಹೀಗೆ ಅವನು ಅಪ್ಪಣೆಮಾಡಿದ್ದರಿಂದ ನೀನು ಈಗ ನಿನ್ನ ತಂದೆಯ ದೇವರಿಗೆ ಭಕ್ತರಾಗಿರುವ ನಾವು ಮಾಡಿದ ಅಪರಾಧವನ್ನು ಕ್ಷವಿುಸಬೇಕೆಂದು ಬೇಡಿಕೊಳ್ಳುತ್ತೇವೆಂದು ಹೇಳಿಕಳುಹಿಸಿದರು. ಯೋಸೇಫನು ಈ ಮಾತುಗಳನ್ನು ಕೇಳಿ ಕಣ್ಣೀರು ಸುರಿಸಿದನು.