Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 147:14 - ಕನ್ನಡ ಸತ್ಯವೇದವು J.V. (BSI)

14 ಆತನು ನಿನ್ನ ಪ್ರಾಂತದೊಳಗೆ ಸೌಭಾಗ್ಯವನ್ನುಂಟುಮಾಡುತ್ತಾನೆ; ಶ್ರೇಷ್ಠವಾದ ಗೋದಿಯಿಂದ ನಿನ್ನನ್ನು ತೃಪ್ತಿಗೊಳಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆತನು ನಿನ್ನ ಪ್ರಾಂತ್ಯದೊಳಗೆ ಸೌಭಾಗ್ಯವನ್ನು ಉಂಟುಮಾಡುತ್ತಾನೆ, ಶ್ರೇಷ್ಠವಾದ ಗೋದಿಯಿಂದ ನಿನ್ನನ್ನು ತೃಪ್ತಿಗೊಳಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿನ್ನ ಪ್ರಾಂತದೊಳಗೆಲ್ಲಾ ಇರುವುದು ನೆಮ್ಮದಿ I ನೀಡುವನು ನಿನಗೆ ಅತ್ಯುತ್ತಮ ಗೋದಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆತನು ನಿಮ್ಮ ದೇಶದಲ್ಲಿ ಶಾಂತಿಯನ್ನು ನೆಲೆಗೊಳಿಸಿದನು. ನಿಮ್ಮನ್ನು ಶ್ರೇಷ್ಠವಾದ ಗೋಧಿಯಿಂದ ತೃಪ್ತಿಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದೇವರು ನಿಮ್ಮ ಮೇರೆಗಳನ್ನು ಸಮಾಧಾನಪಡಿಸುತ್ತಾರೆ; ಉತ್ತಮವಾದ ಗೋಧಿಯಿಂದ ನಿಮ್ಮನ್ನು ತೃಪ್ತಿಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 147:14
15 ತಿಳಿವುಗಳ ಹೋಲಿಕೆ  

ನಾನು ಅವರಿಗೆ ಶ್ರೇಷ್ಠವಾದ ಗೋದಿಯನ್ನು ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವೆನು.


ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು; ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು.


ಇದರ ಆದಾಯವನ್ನು ಆಶೀರ್ವದಿಸುವೆನು; ಇಲ್ಲಿಯ ಬಡವರನ್ನು ಆಹಾರದಿಂದ ತೃಪ್ತಿಗೊಳಿಸುವೆನು;


ಆಹಾರಕ್ಕಾಗಿ ಆಕಳಿನ ಮೊಸರು, ಆಡುಕುರಿಗಳ ಹಾಲು, ಕೊಬ್ಬಿದ ಕುರಿಟಗರುಗಳ ಮಾಂಸವು, ಬಾಷಾನ್ ಸೀಮೆಯ ಉತ್ತಮಪಶುಗಳು, ಹೋತಗಳು, ಶ್ರೇಷ್ಠವಾದ ಗೋದಿ ಇವುಗಳನ್ನೂ ಪಾನಕ್ಕಾಗಿ ದ್ರಾಕ್ಷೆಯ ರಕ್ತರಸವನ್ನೂ ಕೊಟ್ಟದ್ದೂ; ಇದನ್ನೆಲ್ಲಾ ನೆನಪಿಗೆ ತಂದುಕೊಳ್ಳಿರಿ.


ಯಾರೂ ಹಾದುಹೋಗಿ ಬಾರದಂತೆ ನನ್ನ ಆಲಯದ ಸುತ್ತಲು ಪಾಳೆಯಹಾಕಿ ಕಾವಲಾಗಿರುವೆನು; ಇನ್ನು ಮುಂದೆ ಯಾವ ಬಾಧಕನೂ ನನ್ನ ಜನರ ಮೇಲೆ ಬೀಳನು; ಏಕಂದರೆ ಈಗ ನಾನು ಕಣ್ಣಿಟ್ಟು ನೋಡುತ್ತಿದ್ದೇನೆ.


ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಆಕೆಗೆ ಸುಖವನ್ನು ನದಿಯಂತೆ ದಯಪಾಲಿಸಿ ತುಂಬಿ ತುಳುಕುವ ತೊರೆಯನ್ನೋ ಎಂಬಂತೆ ಜನಾಂಗಗಳ ವೈಭವವನ್ನು ನೀಡುವೆನು; ನೀವು ಪಾನಮಾಡುವಿರಿ; ನಿಮ್ಮನ್ನು ಕಂಕುಳಲ್ಲಿ ಎತ್ತಿಕೊಂಡು ಹೋಗುವರು, ತೊಡೆಯ ಮೇಲೆ ನಲಿದಾಡಿಸುವರು.


ಯೆರೂಸಲೇವಿುನ ಶುಭಕ್ಕೋಸ್ಕರ ಪ್ರಾರ್ಥಿಸಿರಿ. [ಯೆರೂಸಲೇಮೇ,] ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ.


ನಿನಗೆ ಒಬ್ಬ ಮಗನು ಹುಟ್ಟುವನು; ಅವನು ಸಮಾಧಾನಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲಾ ವಿರೋಧಿಗಳನ್ನು ಅಣಗಿಸಿ ಅವನಿಗೆ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನನೆಂಬ ಹೆಸರಿರುವದು. ಅವನ ಕಾಲದಲ್ಲಿ ಇಸ್ರಾಯೇಲ್ಯರಿಗೆ ಸಮಾಧಾನವನ್ನೂ ಸೌಭಾಗ್ಯವನ್ನೂ ದಯಪಾಲಿಸುವೆನು.


ನಿಮ್ಮ ದೇಶದಲ್ಲಿ ನಿಮಗೆ ಸುಕ್ಷೇಮವನ್ನು ಅನುಗ್ರಹಿಸುವೆನು; ಯಾರ ಭಯವೂ ಇಲ್ಲದೆ ಮಲಗಿಕೊಳ್ಳುವಿರಿ; ದುಷ್ಟಮೃಗಗಳು ದೇಶದಲ್ಲಿ ಇರದಂತೆ ಮಾಡುವೆನು; ನಿಮ್ಮ ದೇಶವು ಶತ್ರುಗಳ ಕತ್ತಿಯಿಂದ ಹಾಳಾಗುವದಿಲ್ಲ.


ಯೆಹೂದ್ಯರೂ ಇಸ್ರಾಯೇಲ್ ದೇಶದವರೂ ನಿನ್ನ ಕಡೆಯ ವರ್ತಕರಾಗಿ ವಿುನ್ನೀಥಿನ ಗೋದಿ ಕಂಡಸಕ್ಕರೆ ಜೇನು ಎಣ್ಣೆ ಸುಗಂಧತೈಲ ಈ ಸಾಮಗ್ರಿಗಳನ್ನು ನಿನಗೆ ಸೇರಿಸಿದರು.


ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವದಿಲ್ಲ - ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;


ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಿನ್ನ ಆಹಾರವು ಗೋದಿಹಿಟ್ಟು, ಜೇನು, ಎಣ್ಣೆ; ನಿನ್ನ ಲಾವಣ್ಯವು ಅತಿಮನೋಹರ; ನೀನು ವೃದ್ಧಿಗೊಂಡು ರಾಣಿಯಾದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು