Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 147:2 - ಕನ್ನಡ ಸತ್ಯವೇದವು J.V. (BSI)

2 ಯೆಹೋವನು ಯೆರೂಸಲೇಮನ್ನು ಕಟ್ಟಿಸುತ್ತಿದ್ದಾನೆ; ಚದರಿಹೋಗಿದ್ದ ಇಸ್ರಾಯೇಲ್ಯರನ್ನು ಕೂಡಿಸುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನು ಯೆರೂಸಲೇಮನ್ನು ಕಟ್ಟಿಸುತ್ತಿದ್ದಾನೆ, ಚದರಿಹೋಗಿದ್ದ ಇಸ್ರಾಯೇಲರನ್ನು ಕೂಡಿಸುತ್ತಿದ್ದಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಿರ್ಮಿಸುತಿಹನು ಪ್ರಭು ಮರಳಿ ಜೆರುಸಲೇಮನು I ಬಂದು ಸೇರಿಸುತಿಹನು ಚದರಿದ ಇಸ್ರಯೇಲರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ಜೆರುಸಲೇಮನ್ನು ಕಟ್ಟಿದನು. ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದ್ದ ಇಸ್ರೇಲರನ್ನು ಆತನು ಹಿಂದಕ್ಕೆ ಕರೆತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರು ಯೆರೂಸಲೇಮನ್ನು ಕಟ್ಟುತ್ತಾರೆ, ಚದರಿಹೋದ ಇಸ್ರಾಯೇಲನ್ನು ಕೂಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 147:2
28 ತಿಳಿವುಗಳ ಹೋಲಿಕೆ  

ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನಂದರೆ - ನಾನು ಕೂಡಿಸಿದ ಇಸ್ರಾಯೇಲ್ಯರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು ಎಂಬದೇ.


ಚೀಯೋನ್ ಪಟ್ಟಣವನ್ನು ಕಟಾಕ್ಷಿಸಿ ಅದಕ್ಕೆ ಶುಭವನ್ನುಂಟುಮಾಡು; ಯೆರೂಸಲೇವಿುನ ಪೌಳಿಗೋಡೆಯನ್ನು ಕಟ್ಟಿಸು.


ನಿಮ್ಮ ದೇವರಾದ ಯೆಹೋವನು ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ ನಿಮ್ಮನ್ನು ಕನಿಕರಿಸಿ ತಾನು ನಿಮ್ಮನ್ನು ಚದರಿಸಿರುವ ಎಲ್ಲಾ ದೇಶಗಳಿಂದ ತಿರಿಗಿ ಕೂಡಿಸುವನು.


ಬಹುದಿವಸಗಳ ಮೇಲೆ ನಿನಗೆ ಅಪ್ಪಣೆಯಾಗುವದು; ಖಡ್ಗದಿಂದ ನಾಶವಾಗಿ ಪುನರ್ಜೀವಿತವಾದ ದೇಶದೊಳಗೆ ನೀನು ಕಾಲಾನುಕಾಲಕ್ಕೆ ನುಗ್ಗಿ ಅನೇಕ ಜನಾಂಗಗಳೊಳಗಿಂದ ಒಟ್ಟುಗೂಡಿದ [ನನ್ನ] ಜನರ ಮೇಲೆ ಬೀಳುವಿ; ಹೌದು, ಜನಾಂಗಗಳೊಳಗಿಂದ ಪಾರಾದ ಆ ಜನರೆಲ್ಲರು ಬಹುಕಾಲ ಹಾಳಾಗಿದ್ದ ಇಸ್ರಾಯೇಲಿನ ಪರ್ವತಗಳಲ್ಲಿ ನೆಮ್ಮದಿಯಾಗಿ ವಾಸಿಸುತ್ತಿರಲು ನೀನು ಅವರ ಮೇಲೆ ಬೀಳುವಿ.


ಇಗೋ, ನಾನು ಕೋಪರೋಷ ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರತಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ಯೆಹೋವನಿಗೆ ಜ್ಞಾಪಿಸುವವರೇ, ಆತನು ಯೆರೂಸಲೇಮನ್ನು ಭದ್ರಪಡಿಸಿ ಲೋಕಪ್ರಸಿದ್ಧಿಗೆ ತರುವ ತನಕ ನಿಮಗೆ ವಿರಾಮವಿಲ್ಲದಿರಲಿ, ಆತನಿಗೂ ವಿರಾಮಕೊಡದಿರಿ.


ಹೀಗಿರಲು ಪರಜನಾಂಗದ ರಾಯಭಾರಿಗಳಿಗೆ ಏನುತ್ತರ ಕೊಡಬೇಕಂದರೆ ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ದೀನದರಿದ್ರರು ಅದನ್ನೇ ಆಶ್ರಯಿಸಿಕೊಳ್ಳುವರು ಎಂಬದೇ.


ಇಸ್ರಾಯೇಲೆಂಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು. ನೀನು ಮತ್ತೆ ದಮ್ಮಡಿಗಳಿಂದ ವೈಭವಗೊಂಡು ವಿನೋದಪಡುವವರ ನಾಟ್ಯಗಳಲ್ಲಿ ಸೇರಿಕೊಳ್ಳುವಿ.


ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ ಐಗುಪ್ತ ಸೀಮೆಯಲ್ಲಿನ ದೇಶಭ್ರಷ್ಟರಾದವರೂ ಬಂದು ಪರಿಶುದ್ಧಪರ್ವತದ ಯೆರೂಸಲೇವಿುನಲ್ಲಿ ಯೆಹೋವನ ಮುಂದೆ ಅಡ್ಡಬೀಳುವರು.


ಪಟ್ಟಣವು ಎಲ್ಲಾ ಕಡೆಗಳಲ್ಲಿ ವಿಸ್ತಾರವಾಗಿದ್ದರೂ ಅದರೊಳಗೆ ಬಹು ಸ್ವಲ್ಪಜನರಿದ್ದರು. ಮನೆಗಳನ್ನು ಇನ್ನೂ ಕಟ್ಟಿರಲಿಲ್ಲ.


ಇದನ್ನು ತಿಳಿದು ಮಂದಟ್ಟುಮಾಡಿಕೋ; ಯೆರೂಸಲೇಮು ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ಪ್ರಭುವು ಬರುವದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರುವತ್ತೆರಡು ವಾರ ಇರುವದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.


ಮತ್ತು ನಾನೂ ನಿನಗೆ ಒಂದು ಮಾತನ್ನು ಹೇಳುತ್ತೇನೆ, ಅದೇನಂದರೆ - ನೀನು ಪೇತ್ರನು, ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುವೆನು; ಪಾತಾಳಲೋಕದ ಬಲವು ಅದನ್ನು ಸೋಲಿಸಲಾರದು.


ಗೋಡೆಯು ಭಾದ್ರಪದ ಮಾಸದ ಇಪ್ಪತ್ತೈದನೆಯ ದಿನದಲ್ಲಿ ತೀರಿತು. ಅದನ್ನು ಕಟ್ಟುವದಕ್ಕೆ ಒಟ್ಟು ಐವತ್ತೆರಡು ದಿನಗಳು ಹಿಡಿದವು.


ಈ ಸುದ್ದಿಯು ನಮ್ಮ ವಿರೋಧಿಗಳಾದ ಸುತ್ತಣ ಎಲ್ಲಾ ಜನಾಂಗಗಳವರಿಗೆ ಮುಟ್ಟಿದಾಗ ಅವರು ಭಯವುಳ್ಳವರಾಗಿ ಸೊಕ್ಕನ್ನು ಬಿಟ್ಟು ಬಹಳ ಮನಗುಂದಿದವರಾದರು. ಈ ಕಾರ್ಯವು ನಮ್ಮ ದೇವರಿಂದಲೇ ಪೂರೈಸಿತು ಎಂದು ಅವರಿಗೆ ಮಂದಟ್ಟಾಯಿತು.


ಜನಾಂಗಗಳು ಯೆಹೋವ ಎಂಬ ನಿನ್ನ ನಾಮಕ್ಕೂ ಭೂರಾಜರು ನಿನ್ನ ಪ್ರತಾಪಕ್ಕೂ ಭಯಪಡುವರು.


ಜನಾಂಗಗಳೇ, ಯೆಹೋವನ ವಾಕ್ಯವನ್ನು ಕೇಳಿರಿ, ದೂರದ್ವೀಪಗಳಲ್ಲಿ ಸಾರಿರಿ! ಇಸ್ರಾಯೇಲ್ಯರನ್ನು ಚದರಿಸಿದಾತನು ಕುರುಬನು ಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನು ಎಂದು ಪ್ರಕಟಿಸಿರಿ.


ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ಕುಂಟುಜನಾಂಗವನ್ನು ಒಟ್ಟುಗೊಡಿಸುವೆನು, ನಾನು ಬಾಧಿಸಿ ತಳ್ಳಿದ ಪ್ರಜೆಯನ್ನು ಸೇರಿಸುವೆನು;


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ನನ್ನ ಜನರನ್ನು ಮೂಡಣ ದೇಶದಿಂದಲೂ ಪಡುವಣ ದೇಶದಿಂದಲೂ ಪಾರುಮಾಡಿ ಬರಗೊಳಿಸುವೆನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು