Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 148:5 - ಕನ್ನಡ ಸತ್ಯವೇದವು J.V. (BSI)

5 ಅವು ಯೆಹೋವನ ನಾಮವನ್ನು ಸ್ತುತಿಸಲಿ; ಆತನು ಅಪ್ಪಣೆಕೊಡಲು ಅವು ಉಂಟಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವು ಯೆಹೋವನ ನಾಮವನ್ನು ಸ್ತುತಿಸಲಿ, ಆತನು ಅಪ್ಪಣೆಕೊಡಲು ಅವು ಉಂಟಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹೊಗಳಲಿ ಪ್ರಭುವಿನ ನಾಮವನು ಇವೆಲ್ಲ I ಆತನ ಅಪ್ಪಣೆಗೆ ಉಂಟಾದವುಗಳೆಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವು ಯೆಹೋವನ ಹೆಸರನ್ನು ಸ್ತುತಿಸಲಿ. ಆತನು ಆಜ್ಞಾಪಿಸಲು ಅವುಗಳೆಲ್ಲಾ ಸೃಷ್ಟಿಯಾದವು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರ ಹೆಸರನ್ನು ಅವು ಸ್ತುತಿಸಲಿ, ಏಕೆಂದರೆ ದೇವರು ಆಜ್ಞಾಪಿಸಲು, ಅವು ನಿರ್ಮಿಸಲಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 148:5
8 ತಿಳಿವುಗಳ ಹೋಲಿಕೆ  

ಕರ್ತನೇ, ನಮ್ಮ ದೇವರೇ, ನೀನು ಪ್ರಭಾವ ಮಾನ ಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಸಮಸ್ತವನ್ನು ಸೃಷ್ಟಿಸಿದಾತನು ನೀನೇ; ಎಲ್ಲವು ನಿನ್ನ ಚಿತ್ತದಿಂದಲೇ ಇದ್ದವು, ನಿನ್ನ ಚಿತ್ತದಿಂದಲೇ ನಿರ್ಮಿತವಾದವು ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾರೆ.


ಬಳಿಕ ದೇವರು - ಜಲಸಮೂಹಗಳ ನಡುವೆ ವಿಸ್ತಾರವಾದ ಗುಮಟವು ಉಂಟಾಗಲಿ; ಅದು ಕೆಳಗಣ ನೀರುಗಳನ್ನೂ ಮೇಲಣ ನೀರುಗಳನ್ನೂ ಬೇರೆ ಬೇರೆ ಮಾಡಲಿ ಅಂದನು.


ಉನ್ನತಲೋಕದಲ್ಲಿ ಉಪ್ಪರಿಗೆಯನ್ನು ಅನೇಕ ಅಂತಸ್ತಾಗಿ ಕಟ್ಟಿಕೊಂಡು ಭೂಲೋಕದ ಮೇಲೆ ಗುಮ್ಮಟವನ್ನು ಸ್ಥಾಪಿಸಿಕೊಂಡಿದ್ದಾನೆ; ಸಮುದ್ರದ ನೀರನ್ನು ಕರೆದು ಭೂಮಂಡಲದ ಮೇಲೆ ಹೊಯ್ಯುತ್ತಾನೆ; ಯೆಹೋವನೆಂಬದೇ ಆತನ ನಾಮಧೇಯ.


ಆತನೇ ಸಮುದ್ರವನ್ನು ನಿರ್ಮಿಸಿದವನು; ಅದು ಆತನದೇ. ಒಣನೆಲವು ಆತನ ಕೈಕೆಲಸವೇ.


ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೇ, ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ, ಯೆಹೋವನನ್ನು ಕೊಂಡಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು