Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 149:5 - ಕನ್ನಡ ಸತ್ಯವೇದವು J.V. (BSI)

5 ಭಕ್ತರು ತಮಗುಂಟಾದ ಮಹಿಮೆಯಲ್ಲಿ ಹಿಗ್ಗಲಿ; ಹಾಸಿಗೆಯ ಮೇಲಿರುವಾಗಲೂ ಉತ್ಸಾಹಧ್ವನಿ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಭಕ್ತರು ತಮಗುಂಟಾದ ಮಹಿಮೆಯಲ್ಲಿ ಹಿಗ್ಗಲಿ; ಹಾಸಿಗೆಯ ಮೇಲಿರುವಾಗಲೂ ಉತ್ಸಾಹಧ್ವನಿ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹಿಗ್ಗಲಿ ಭಕ್ತಾದಿಗಳು ದೊರೆತ ವಿಜಯದಲಿ I ಜಯಕಾರ ಮಾಡಲಿ ತಮ್ಮ ತಮ್ಮ ಶಿಬಿರಗಳಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆತನ ಭಕ್ತರೇ, ನಿಮ್ಮ ವಿಜಯದಲ್ಲಿ ಉಲ್ಲಾಸಿಸಿರಿ! ಹಾಸಿಗೆಯ ಮೇಲಿರುವಾಗಲೂ ಸಂತೋಷದಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇಂಥಾ ಸನ್ಮಾನದಲ್ಲಿ ನಂಬಿಗಸ್ತರು ಸಂತೋಷಪಡಲಿ ಹಾಸಿಗೆಯಲ್ಲಿರುವಾಗಲೂ ಆನಂದಗಾನ ಹಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 149:5
12 ತಿಳಿವುಗಳ ಹೋಲಿಕೆ  

ನನ್ನ ಸೃಷ್ಟಿಕರ್ತನಾದ ದೇವರು ಎಲ್ಲಿ, ಆತನು ರಾತ್ರಿಯಲ್ಲಿಯೂ ಕೀರ್ತನೆಗಳನ್ನು ಹಾಡಮಾಡುತ್ತಾನಲ್ಲಾ;


ಯೆಹೋವನು ಹಗಲಿನಲ್ಲಿ ತನ್ನ ಪ್ರೀತಿಯನ್ನು ನನಗೆ ಅನುಗ್ರಹಿಸುವನು; ರಾತ್ರಿವೇಳೆಯಲ್ಲಿಯೂ ಆತನ ಕೀರ್ತನೆ ನನ್ನಲ್ಲಿರುವದು. ನನ್ನ ಜೀವಾಧಾರಕನಾದ ದೇವರನ್ನು ಪ್ರಾರ್ಥಿಸುವೆನು.


ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮರಕ್ಷಣೆಯನ್ನು ಹೊಂದುವವರಾಗಿ ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.


ಯೆಹೋವನೇ, ನಿನ್ನ ಸೃಷ್ಟಿಯೆಲ್ಲವು ನಿನ್ನನ್ನು ಸ್ತುತಿಸುವದು; ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು.


ಉತ್ಸಾಹಧ್ವನಿಯೂ ಜಯಘೋಷವೂ ನೀತಿವಂತರ ಗುಡಾರಗಳಲ್ಲಿವೆ; ಯೆಹೋವನ ಬಲಗೈ ಪರಾಕ್ರಮವನ್ನು ನಡಿಸುತ್ತದೆ.


ನಾವು ಈಗ ನೆಲೆಗೊಂಡಿರುವ ದೇವರ ಕೃಪಾಶ್ರಯದಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾಯಿತು. ಮತ್ತು ದೇವರ ಮಹಿಮೆಯನ್ನು ಹೊಂದುವೆವೆಂಬ ಭರವಸದಿಂದ ಉಲ್ಲಾಸವಾಗಿದ್ದೇವೆ.


ಯಾಜಕರಿಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸುವೆನು; ಭಕ್ತರು ಉತ್ಸಾಹಧ್ವನಿಮಾಡುವರು.


ವೀಣಾಸ್ವರಮಂಡಲಗಳಿಂದಲೂ ಕಿನ್ನರಿಯ ಘನಸ್ವರದಿಂದಲೂ


ಯೆಹೋವನು ನನಗೆ ಕುರುಬನು; ಕೊರತೆಪಡೆನು.


ಹೀಗೆ ದಾವೀದನೂ ಎಲ್ಲಾ ಇಸ್ರಾಯೇಲ್ಯರೂ ಆರ್ಭಟಿಸುತ್ತಾ ತುತೂರಿ ಊದುತ್ತಾ ಯೆಹೋವನ ಮಂಜೂಷವನ್ನು ತಂದರು.


ಮಹಾವೃದ್ಧನು ಅಯ್ತಂದು ಪರಾತ್ಪರನ ಭಕ್ತರಿಗಾಗಿ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದು ಕಣ್ಣುಳ್ಳದ್ದಾಗಿ ಬಾಯಿಂದ ಬಡಾಯಿಕೊಚ್ಚಿಕೊಳ್ಳುತ್ತಾ ವಿುಕ್ಕ ಕೊಂಬುಗಳಿಗಿಂತ ಬಿರಸಾಗಿ ನೋಡುತ್ತಾ ಇತ್ತೋ ಆ ಕೊಂಬಿನ ವಿಷಯವಾಗಿಯೂ ಸತ್ಯಾರ್ಥವನ್ನು ತಿಳಿದುಕೊಳ್ಳಬೇಕೆಂದು ಅಪೇಕ್ಷಿಸಿ ವಿಚಾರಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು