Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 149:9 - ಕನ್ನಡ ಸತ್ಯವೇದವು J.V. (BSI)

9 ಲಿಖಿತದಂತೆ ಅವರಿಗೆ ಶಿಕ್ಷೆಯನ್ನು ವಿಧಿಸುವರು; ಇದು ಆತನ ಭಕ್ತರೆಲ್ಲರಿಗೆ ಗೌರವವಾಗಿರುವದು. ಯಾಹುವಿಗೆ ಸ್ತೋತ್ರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಲಿಖಿತದಂತೆ ಅವರಿಗೆ ಶಿಕ್ಷೆಯನ್ನು ವಿಧಿಸುವರು; ಇದು ಆತನ ಭಕ್ತರೆಲ್ಲರಿಗೆ ಗೌರವವಾಗಿರುವುದು. ಯೆಹೋವನಿಗೆ ಸ್ತೋತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ವಿಧಿಸಲಿ ಅವರಿಗೆ ಲಿಖಿತಾಜ್ಞೆಯ ಶಿಕ್ಷೆಯನು I ಇದು ತರಲಿ ಭಕ್ತರೆಲ್ಲರಿಗೆ ಗೌರವವನು I ಅಲ್ಲೆಲೂಯ! II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆತನ ಆಜ್ಞೆಗನುಸಾರವಾಗಿ ಆತನ ಭಕ್ತರು ತಮ್ಮ ಶತ್ರಗಳನ್ನು ದಂಡಿಸುವರು. ಆತನು ತನ್ನ ಭಕ್ತರಿಗೆ ಒಳ್ಳೆಯವನಾಗಿದ್ದಾನೆ. ಯೆಹೋವನಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಬರೆದಿರುವ ನ್ಯಾಯವಿಧಿಯು ಅವರಲ್ಲಿ ನೆರವೇರಲಿ, ದೇವರ ಭಕ್ತರೆಲ್ಲರಿಗೆ ಈ ಗೌರವವಿರುತ್ತದೆ. ಯೆಹೋವ ದೇವರನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 149:9
11 ತಿಳಿವುಗಳ ಹೋಲಿಕೆ  

ಆತನು ತನ್ನ ಪ್ರಜೆಗೋಸ್ಕರ [ಘನದ] ಕೊಂಬನ್ನು ಎಬ್ಬಿಸಿದ್ದಾನೆ. ಆದದರಿಂದ ಆತನ ಎಲ್ಲಾ ಭಕ್ತರೂ ಆತನ ಸಮೀಪ ಪ್ರಜೆಗಳಾದ ಇಸ್ರಾಯೇಲ್ಯರೂ ಹಿಗ್ಗುತ್ತಾರೆ. ಯಾಹುವಿಗೆ ಸ್ತೋತ್ರ!


ಹಾಳಾಗುವದಕ್ಕಿರುವ ಬಾಬೆಲ್ ಪಟ್ಟಣವೇ, ನೀನು ನಮಗೆ ಮಾಡಿದ್ದಕ್ಕೆ ಮುಯ್ಯಿಸಲ್ಲಿಸುವವನು ಧನ್ಯನು.


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕೂತುಕೊಂಡೆನು; ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ಅಲ್ಲಿ ನಿರ್ಭಯವಾಗಿರುವರು, ಮನೆಗಳನ್ನು ಕಟ್ಟಿಕೊಂಡು ತೋಟಗಳನ್ನು ಮಾಡಿಕೊಂಡು ಸುಖವಾಗಿ ವಾಸಿಸುವರು; ಅವರನ್ನು ಹೀನೈಸುವ ನೆರೆಹೊರೆಯವರಿಗೆ ನಾನು ದಂಡನೆಮಾಡಿದ ಮೇಲೆ ನಾನೇ ತಮ್ಮ ದೇವರಾದ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವದು.


ಥಳಥಳಿಸುವ ನನ್ನ ಕತ್ತಿಯನ್ನು ನಾನು ಹದಮಾಡಿ ನ್ಯಾಯವನ್ನು ಸ್ಥಾಪಿಸುವದಕ್ಕೆ ಮುಂಗೊಂಡಾಗ ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು, ನನ್ನನ್ನು ದ್ವೇಷಿಸಿದವರಿಗೆ ಪ್ರತಿದಂಡನೆ ಮಾಡುವೆನು;


ನಿನ್ನ ಅಶೇರವೆಂಬ ವಿಗ್ರಹಸ್ತಂಭಗಳನ್ನು ನಿನ್ನ ಮಧ್ಯದೊಳಗಿಂದ ಕಿತ್ತುಬಿಟ್ಟು ನಿನ್ನ ಪಟ್ಟಣಗಳನ್ನು ನಿರ್ಮೂಲಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು