ಕೀರ್ತನೆಗಳು 15:3 - ಕನ್ನಡ ಸತ್ಯವೇದವು J.V. (BSI)3 ಅವನು ಚಾಡಿಯನ್ನು ಹೇಳದವನೂ ಮತ್ತೊಬ್ಬರಿಗೆ ಅನ್ಯಾಯಮಾಡದವನೂ ಯಾರನ್ನೂ ನಿಂದಿಸದವನೂ ಆಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನು ಚಾಡಿಯನ್ನು ಹೇಳದವನೂ, ಮತ್ತೊಬ್ಬರಿಗೆ ಅನ್ಯಾಯ ಮಾಡದವನೂ, ಯಾರನ್ನೂ ನಿಂದಿಸದವನೂ ಆಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಚಾಡಿಯನು ಹೇಳನು, ಕೇಡನು ಮಾಡನನ್ಯರಿಗೆ I ಗುರಿಮಾಡನವನು ನೆರೆಹೊರೆಯವರನು ನಿಂದೆಗೆ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅವನು ಚಾಡಿ ಹೇಳದವನೂ ನೆರೆಯವರಿಗೆ ಕೇಡನ್ನು ಮಾಡದವನೂ ತನ್ನ ಸ್ವಂತ ಕುಟುಂಬದವರನ್ನು ನಿಂದಿಸದವನೂ ಆಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವರ ನಾಲಿಗೆಯು ಚಾಡಿ ಹೇಳುವುದಿಲ್ಲ, ತಮ್ಮ ನೆರೆಯವರಿಗೆ ಕೇಡುಮಾಡುವುದಿಲ್ಲ, ಇತರರನ್ನು ನಿಂದಿಸುವುದೂ ಇಲ್ಲ; ಅಧ್ಯಾಯವನ್ನು ನೋಡಿ |
ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿರಿ. ಯಾವನಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪುಮಾಡಿದರೆ ಅವನು ಧರ್ಮಶಾಸ್ತ್ರವನ್ನು ನಿಂದಿಸಿ ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದ ಹಾಗಾಗುವದು. ಆದರೆ ನೀನು ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದರೆ ನೀನು ನ್ಯಾಯಾಧಿಪತಿಯೆನಿಸಿಕೊಳ್ಳುವಿಯೇ ಹೊರತು ಅದನ್ನು ಅನುಸರಿಸುವವನಲ್ಲ.