Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 150:1 - ಕನ್ನಡ ಸತ್ಯವೇದವು J.V. (BSI)

1 ಯಾಹುವಿಗೆ ಸ್ತೋತ್ರ! ದೇವರನ್ನು ಆತನ ಪರಿಶುದ್ಧಾಲಯದಲ್ಲಿ ಸ್ತುತಿಸಿರಿ; ಆತನ ಶಕ್ತಿಪ್ರದರ್ಶಕವಾದ ಆಕಾಶಮಂಡಲದಲ್ಲಿ ಆತನನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನಿಗೆ ಸ್ತೋತ್ರ! ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಶಕ್ತಿಪ್ರದರ್ಶಕವಾದ ಆಕಾಶಮಂಡಲದಲ್ಲಿ ಆತನನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಲ್ಲೆಲೂಯ! I ಸ್ತುತಿಸಿರಿ ದೇವರನು ಆತನ ಪರಿಶುದ್ಧ ಆಲಯದಲಿ I ಆತನ ಶಕ್ತಿಯನು ಸಾರುವಾ ಆಕಾಶಮಂಡಲದಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನಿಗೆ ಸ್ತೋತ್ರವಾಗಲಿ! ದೇವರನ್ನು ಆತನ ಆಲಯದಲ್ಲಿ ಸ್ತುತಿಸಿರಿ! ಆತನ ಶಕ್ತಿಯನ್ನು ಪರಲೋಕದಲ್ಲಿ ಸ್ತುತಿಸಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರಿಗೆ ಸ್ತೋತ್ರ! ದೇವರನ್ನು ಅವರ ಪರಿಶುದ್ಧಾಲಯದಲ್ಲಿ ಸ್ತುತಿಸಿರಿ; ದೇವರ ಶಕ್ತಿದಾಯಕ ಆಕಾಶಮಂಡಲದಲ್ಲಿ ಅವರನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 150:1
13 ತಿಳಿವುಗಳ ಹೋಲಿಕೆ  

ಯಾಹುವಿಗೆ ಸ್ತೋತ್ರ! ಯೆಹೋವನಿಗೆ ನೂತನಕೀರ್ತನೆಯನ್ನು ಹಾಡಿರಿ; ಭಕ್ತಸಭೆಯಲ್ಲಿ ಆತನನ್ನು ಸ್ತುತಿಸಿರಿ.


ಮಹಾಪರಿಶುದ್ಧ ಸ್ಥಳದ ಕಡೆಗೆ ಕೈಯೆತ್ತಿ ಯೆಹೋವನನ್ನು ಕೊಂಡಾಡಿರಿ.


ಯೆಹೋವನ ಗರ್ಜನೆಗೆ ಗರ್ಭದ ಜಿಂಕೆಗಳು ಈಯುತ್ತವೆ; ಕಾಡಿನ ಮರಗಳು ಬರೀದಾಗುತ್ತವೆ. ಆಗ ಆತನ ಮಂದಿರದಲ್ಲಿರುವವರೆಲ್ಲರು - ಎಷ್ಟೋ ಪ್ರಭಾವ! ಎನ್ನುತ್ತಾರೆ.


ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು; ಬಹು ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.


ಇಗೋ, ನಾನು ನೋಡಲಾಗಿ ಕೆರೂಬಿಗಳ ತಲೆಗಳ ಮೇಲಣ ನೆಲಗಟ್ಟಿನ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು.


ಯೆಹೋವನು ತನ್ನ ಮಹೋನ್ನತವಾದ ಪವಿತ್ರಸ್ಥಾನದಿಂದ ಕೆಳಕ್ಕೆ ನೋಡಿದ್ದಾನೆ; ಆತನು ಪರಲೋಕದಿಂದ ಭೂವಿುಯನ್ನು ದೃಷ್ಟಿಸಿದ್ದಾನೆ.


ಆಕಾಶವು ದೇವರ ಪ್ರಭಾವವನ್ನು ಪ್ರಚುರಪಡಿಸುತ್ತದೆ; ಗಗನವು ಆತನ ಕೈಕೆಲಸವನ್ನು ತಿಳಿಸುತ್ತದೆ.


ದಿನವು ದಿನಕ್ಕೆ ಪ್ರಕಟಿಸುತ್ತಿರುವದು; ರಾತ್ರಿಯು ರಾತ್ರಿಗೆ ಅರುಹುತ್ತಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು