ಕೀರ್ತನೆಗಳು 150:3 - ಕನ್ನಡ ಸತ್ಯವೇದವು J.V. (BSI)3 ಕೊಂಬೂದುತ್ತಾ ಆತನನ್ನು ಸ್ತುತಿಸಿರಿ; ಸ್ವರಮಂಡಲಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಕೊಂಬೂದುತ್ತಾ ಆತನನ್ನು ಸ್ತುತಿಸಿರಿ; ಸ್ವರಮಂಡಲ, ಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆತನನ್ನು ಸ್ತುತಿಸಿರಿ ಕೊಂಬುಗಳನ್ನೂದುತಾ I ಸ್ವರಮಂಡಲಗಳನು, ಕಿನ್ನರಿಗಳನು ಬಾರಿಸುತಾ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ತುತ್ತೂರಿಗಳನ್ನೂ ಕೊಂಬುಗಳನ್ನೂ ಊದುತ್ತಾ ಆತನನ್ನು ಸ್ತುತಿಸಿರಿ! ಹಾರ್ಪ್‌ವಾದ್ಯಗಳನ್ನೂ ಲೈರ್‌ವಾದ್ಯಗಳನ್ನೂ ನುಡಿಸುತ್ತಾ ಆತನನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ತುತೂರಿಯ ಶಬ್ದದಿಂದ ದೇವರನ್ನು ಸ್ತುತಿಸಿರಿ, ಕಿನ್ನರಿಯಿಂದಲೂ, ವೀಣೆಯಿಂದಲೂ, ಅವರನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿ |
[ಮಂಜೂಷವನ್ನು ಒಳಗಿಟ್ಟ] ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಒಬ್ಬನೋ ಎಂಬಂತೆ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವದಕ್ಕಾಗಿ ತುತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ ತಾಳ ಮೊದಲಾದ ವಾದ್ಯಗಳ ಧ್ವನಿಯೂ ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವದು ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.