Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 150:4 - ಕನ್ನಡ ಸತ್ಯವೇದವು J.V. (BSI)

4 ದಮ್ಮಡಿಬಡಿಯುತ್ತಾ ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತೀವಾದ್ಯಗಳಿಂದಲೂ ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದಮ್ಮಡಿಯನ್ನು ಬಡಿಯುತ್ತಾ, ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆತನನ್ನು ಸ್ತುತಿಸಿರಿ ತಮಟೆ ಬಡಿಯುತಾ ಕುಣಿಯುತಾ I ಆತನನ್ನು ಸ್ತುತಿಸಿರಿ ತಂತಿವಾದ್ಯ ನುಡಿಸುತಾ ಕೊಳಲೂದುತಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದಮ್ಮಡಿಗಳನ್ನು ಬಡಿಯುತ್ತಾ ಕುಣಿಯುತ್ತಾ ಆತನನ್ನು ಸ್ತುತಿಸಿರಿ. ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದಮ್ಮಡಿಯಿಂದಲೂ, ನಾಟ್ಯದಿಂದಲೂ ದೇವರನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಅವರನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 150:4
10 ತಿಳಿವುಗಳ ಹೋಲಿಕೆ  

ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ; ದಮ್ಮಡಿಕಿನ್ನರಿಗಳಿಂದ ಆತನನ್ನು ಭಜಿಸಲಿ.


ಯೆಹೋವನು ನನಗೆ ರಕ್ಷಣಪರನಾಗಿದ್ದಾನಷ್ಟೆ; ನಮ್ಮ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ನಮ್ಮ ಕಿನ್ನರಿ ವೀಣೆಗಳನ್ನು ನುಡಿಸುವೆವು.


ಆರೋನನ ಅಕ್ಕನಾದ ವಿುರ್ಯಾಮಳು ಪ್ರವಾದಿನಿಯಾಗಿದ್ದು ದಮ್ಮಡಿಯನ್ನು ಕೈಯಲ್ಲಿ ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ನಾಟ್ಯವಾಡುತ್ತಾ ಆಕೆಯ ಹಿಂದೆ ಹೋಗುತ್ತಿರಲು


ದೇವರೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು; ಹತ್ತು ತಂತಿಗಳ ಸ್ವರಮಂಡಲವನ್ನು ಬಾರಿಸುತ್ತಾ ನಿನ್ನನ್ನು ಕೊಂಡಾಡುವೆನು.


ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ ರಾತ್ರಿಯಲ್ಲಿ ನಿನ್ನ ಸತ್ಯತೆಯನ್ನೂ ವರ್ಣಿಸುವದು ಉಚಿತವಾಗಿದೆ.


ಇದರಿಂದ ನನ್ನ ಕಿನ್ನರಿಯಲ್ಲಿ ಗೋಳಾಟವೂ, ನನ್ನ ಕೊಳಲಿನಲ್ಲಿ ಅಳುವ ಧ್ವನಿಯೂ ಕೇಳಿಸುತ್ತವೆ.


ನಿನ್ನ ದಿವ್ಯಾಂಬರಗಳು ರಕ್ತಬೋಳ ಅಗರು ಚಂದನಗಳಿಂದ ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; ಗಜದಂತಮಂದಿರಗಳೊಳಗೆ ಉತ್ಕೃಷ್ಟವಾದ್ಯಗಳು ನಿನ್ನನ್ನು ಆನಂದಗೊಳಿಸುವವು.


ಕಿನ್ನರಿಯನ್ನು ನುಡಿಸುತ್ತಾ ಯೆಹೋವನನ್ನು ಕೊಂಡಾಡಿರಿ; ಹತ್ತುತಂತಿಗಳ ಸ್ವರಮಂಡಲವನ್ನು ಬಾರಿಸುತ್ತಾ ಸಂಕೀರ್ತಿಸಿರಿ.


ಅವರು ದಮ್ಮಡಿಕಿನ್ನರಿಗಳೊಡನೆ ಸ್ವರವೆತ್ತಿ ಕೊಳಲಿನ ಧ್ವನಿಗೆ ಉಲ್ಲಾಸಪಡುವರು.


ಕರ್ತನಾದ ಯೆಹೋವನೇ ನನ್ನ ಬಲ; ಆತನು ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕುಮಾಡಿ ನನ್ನ ಉನ್ನತಪ್ರದೇಶಗಳಲ್ಲಿ ನನ್ನನ್ನು ನಡಿಸುತ್ತಾನೆ. ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು