ಕೀರ್ತನೆಗಳು 16:4 - ಕನ್ನಡ ಸತ್ಯವೇದವು J.V. (BSI)4 ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು. ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವದೇ ಇಲ್ಲ; ಅವರ ನಾಮಗಳನ್ನಾದರೂ ಉಚ್ಚರಿಸುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು. ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವುದೇ ಇಲ್ಲ; ಅವರ ನಾಮಗಳನ್ನಾದರೂ ಉಚ್ಚರಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅನ್ಯದೇವರನ್ನು ಬಯಸುವವರನ್ನು ಕಾದಿದೆ ಕಠಿಣ ಕಷ್ಟ I ಅವರಂತೆ ರಕ್ತಪಾನತರ್ಪಣೆ ಮಾಡಲೆನಗಿಲ್ಲ ಇಷ್ಟ I ಆ ದೇವರುಗಳ ನಾಮೋಚ್ಚಾರಣೆ ನನ್ನ ತುಟಿಗೆ ಅನಿಷ್ಟ II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದರೆ ಅನ್ಯದೇವರುಗಳನ್ನು ಆಶ್ರಯಿಸಿಕೊಂಡವರಿಗೆ ಕೇಡುಗಳು ಹೆಚ್ಚಾಗುತ್ತವೆ. ಅವರು ಆ ವಿಗ್ರಹಗಳಿಗೆ ಅರ್ಪಿಸುವ ರಕ್ತದ ಕಾಣಿಕೆಗಳಲ್ಲಿ ನಾನು ಪಾಲುಗಾರನಾಗುವುದಿಲ್ಲ, ಆ ವಿಗ್ರಹಗಳ ಹೆಸರುಗಳನ್ನೂ ನಾನು ಉಚ್ಚರಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇತರ ದೇವರುಗಳನ್ನು ಅವಲಂಬಿಸಿರುವವರಿಗೆ ವ್ಯಥೆಗಳು ಹೆಚ್ಚೆಚ್ಚಾಗುವವು. ಅವರಂತೆ ರಕ್ತ ಬಲಿಗಳನ್ನು ನಾನು ಅರ್ಪಿಸುವುದಿಲ್ಲ. ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಉಚ್ಚರಿಸುವುದಿಲ್ಲ. ಅಧ್ಯಾಯವನ್ನು ನೋಡಿ |