Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 16:8 - ಕನ್ನಡ ಸತ್ಯವೇದವು J.V. (BSI)

8 ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿಗೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಎಂದಿಗೂ ಕದಲುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇರಿಸಿಕೊಳ್ಳುವೆ ಪ್ರಭುವನು ಸತತ ನನ್ನೆದುರಿಗೆ I ಆತನಿರಲು ಬಲಕ್ಕೆ ನನಗೆಲ್ಲಿಯದು ಹೆದರಿಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಯೆಹೋವನನ್ನು ಯಾವಾಗಲೂ ನನ್ನ ಎದುರಿನಲ್ಲೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿರುವುದರಿಂದ ನಾನೆಂದಿಗೂ ಕದಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ಯೆಹೋವ ದೇವರನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ. ಅವರು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 16:8
13 ತಿಳಿವುಗಳ ಹೋಲಿಕೆ  

ನಿನ್ನನ್ನು ಕಾಯುವವನು ಯೆಹೋವನೇ; ನಿನ್ನ ಬಲಗಡೆಯಲ್ಲಿ ನೆರಳಿನಂತೆ ನಿಂತಿರುವಾತನು ಯೆಹೋವನೇ.


ಆತನೇ ನನಗೆ ಶರಣನೂ ರಕ್ಷಕನೂ ದುರ್ಗವೂ; ನಾನು ಕದಲುವದಿಲ್ಲ.


ಆದರೂ ಸದಾ ನಿನ್ನ ಸನ್ನಿಧಿಯಲ್ಲಿಯೇ ಇದ್ದೇನೆ. ನೀನು ನನ್ನ ಬಲಗೈಯನ್ನು ಹಿಡಿದು


ನಿನ್ನ ಬಲಗಡೆಯಲ್ಲಿರುವ ಕರ್ತನು ತನ್ನ ಕೋಪದ ದಿನದಲ್ಲಿ ರಾಜರನ್ನು ಖಂಡಿಸುವನು.


ತನುಮನಗಳು ಕ್ಷಯಿಸಿದರೂ ನನ್ನ ಆತ್ಮಕ್ಕೆ ಶರಣನೂ ನನ್ನ ಶಾಶ್ವತವಾದ ಪಾಲೂ ದೇವರೇ.


ಆತನು ದೀನನ ಬಲಗಡೆಯಲ್ಲಿ ನಿಂತುಕೊಂಡು ಪ್ರಾಣಶಿಕ್ಷೆ ವಿಧಿಸುವವರ ಕೈಯಿಂದ ತಪ್ಪಿಸಿ ರಕ್ಷಿಸುವನು.


ಅವನು ಅರಸನ ರೌದ್ರಕ್ಕೆ ಭಯಪಡದೆ ಐಗುಪ್ತದೇಶವನ್ನು ಬಿಟ್ಟುಹೋದದ್ದು ನಂಬಿಕೆಯಿಂದಲೇ. ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನೋ ಎಂಬಂತೆ ದೃಢಚಿತ್ತನಾಗಿದ್ದನು.


ಅವನು ಸಾಲಕ್ಕೆ ಬಡ್ಡಿ ಕೇಳದವನೂ ನಿರಪರಾಧಿಯ ಕೇಡಿಗಾಗಿ ಲಂಚತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವದಿಲ್ಲ.


ಅವುಗಳನ್ನು ಲೆಕ್ಕಿಸುವದಾದರೆ [ಸಮುದ್ರದ] ಮರಳಿಗಿಂತ ಹೆಚ್ಚಾಗಿವೆ. ನಾನು ಎಚ್ಚರವಾಗಲು ಮುಂಚಿನಂತೆಯೇ ನಿನ್ನ ಬಳಿಯಲ್ಲಿದ್ದೇನೆ.


ಶತ್ರುಗಳೆಲ್ಲರು ನಿನಗೆ ಸಿಕ್ಕುವರು; ಭುಜಬಲದಿಂದ ನಿನ್ನ ಹಗೆಗಳನ್ನು ಹಿಡಿಯುವಿ.


ನೀವೆಲ್ಲರೂ ಒಬ್ಬ ಪುರುಷನ ಮೇಲೆ ಬಿದ್ದು ಅವನು ಬಾಗಿದ ಗೋಡೆಯೋ ಕುಸಿದ ಪ್ರಾಕಾರವೋ ಎಂಬಂತೆ ಅವನನ್ನು ಹೊಡೆದು ಕೆಡವಬೇಕೆಂದಿರುವದು ಇನ್ನೆಷ್ಟರವರೆಗೆ?


ನನ್ನ ರಕ್ಷಣೆಗೂ ಮಾನಕ್ಕೂ ದೇವರೇ ಆಧಾರ; ನನಗೆ ಬಲವಾದ ದುರ್ಗವೂ ಆಶ್ರಯವೂ ದೇವರಲ್ಲಿಯೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು