Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 17:3 - ಕನ್ನಡ ಸತ್ಯವೇದವು J.V. (BSI)

3 ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ ರಾತ್ರಿ ವೇಳೆ ವಿಚಾರಿಸಿದರೂ ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವದಿಲ್ಲ; ನನ್ನ ಬಾಯಲ್ಲಿಯೂ ತಪ್ಪಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ, ರಾತ್ರಿಯ ವೇಳೆ ವಿಚಾರಿಸಿದರೂ, ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ, ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವುದಿಲ್ಲ; ನನ್ನ ಬಾಯಿ ಮಾತುಗಳಲ್ಲಿ ತಪ್ಪುವುದಿಲ್ಲ ಎಂದು ತೀರ್ಮಾನಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹೃದಯ ವೀಕ್ಷಿಸು, ಇರುಳೆಲ್ಲ ವಿಚಾರಿಸು, ಅಗ್ನಿಪರೀಕ್ಷೆ ಮಾಡಿಸು I ನಾ ದೋಷರಹಿತ, ಮಾತಲಿ ತಪ್ಪದವ, ಎಂದಾಗ ತೀರ್ಮಾನಿಸು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀನು ನನ್ನ ಅಂತರಾಳವನ್ನು ರಾತ್ರಿಯೆಲ್ಲಾ ಪರೀಕ್ಷಿಸಿರುವೆ. ನೀನು ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದಾಗ ನನ್ನಲ್ಲಿ ಯಾವ ದೋಷವೂ ಕಂಡುಬರಲಿಲ್ಲ. ನಾನು ಯಾವ ತಪ್ಪನ್ನೂ ಮಾಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀವು ನನ್ನ ಹೃದಯವನ್ನು ಶೋಧಿಸಿದರೂ, ನೀವು ರಾತ್ರಿಯಲ್ಲಿ ನನ್ನನ್ನು ಪರೀಕ್ಷಿಸಿ ವಿಚಾರಿಸಿದರೂ, ನಾನು ಕೆಟ್ಟಯೋಜನೆ ಮಾಡಿಕೊಳ್ಳಲಿಲ್ಲವೆಂದು ನೀವು ಕಂಡುಕೊಳ್ಳುವಿರಿ; ನನ್ನ ಬಾಯಿಯೂ ಅತಿಕ್ರಮಿಸುವುದಿಲ್ಲವೆಂದು ನಾನು ತೀರ್ಮಾನಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 17:3
32 ತಿಳಿವುಗಳ ಹೋಲಿಕೆ  

ಯೆಹೋವನೇ, ನನ್ನನ್ನು ಪರೀಕ್ಷಿಸು, ಪರಿಶೀಲಿಸು; ನನ್ನ ಅಂತರಿಂದ್ರಿಯವನ್ನೂ ಹೃದಯವನ್ನೂ ಪರಿಶೋಧಿಸು.


ಅವನು ಒಳ್ಳೆಯವನೂ ಪವಿತ್ರಾತ್ಮಭರಿತನೂ ನಂಬಿಕೆಯಿಂದ ತುಂಬಿದವನೂ ಆಗಿದ್ದನು. ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು - ನೀವು ದೃಢಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರ್ರಿ ಎಂದು ಅವರೆಲ್ಲರಿಗೆ ಬುದ್ಧಿ ಹೇಳಿದನು.


ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು; ದುಷ್ಟರು ನನ್ನ ಮುಂದೆ ಇರುವಾಗ ಬಾಯಿಗೆ ಕುಕ್ಕೆಹಾಕಿಕೊಂಡಿರುವೆನು ಅಂದುಕೊಂಡೆನು.


ಆತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು.


ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ ಅಗಸನ ಚೌಳಿಗೂ ಸಮಾನನಾಗಿದ್ದಾನೆ;


ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು - ಇವರು ನನ್ನ ಜನರು ಅಂದುಕೊಳ್ಳುವೆನು, ಅವರು - ನಮ್ಮ ದೇವರಾದ ಯೆಹೋವನೇ ಅನ್ನುವರು.


ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ ತಿಳುಕೊಂಡಿದ್ದೀ;


ನಿನ್ನ ನೀತಿವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣಮಾಡಿದ್ದೇನೆ; ಅದನ್ನು ನೆರವೇರಿಸುವೆನು.


ದೇವರೇ, ನಮ್ಮನ್ನು ಶೋಧಿಸಿದಿ; ಬೆಳ್ಳಿಯನ್ನು ಪುಟಕ್ಕೆ ಹಾಕುವ ಮೇರೆಗೆ ಶುದ್ಧಿಮಾಡಿದಿ.


ಬಂಗಾರವು ನಾಶವಾಗುವಂಥದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟಾಹಾಕಿ ಶೋಧಿಸುವದುಂಟಷ್ಟೆ. ಬಂಗಾರಕ್ಕಿಂತ ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವ ಮಾನಗಳನ್ನು ಉಂಟುಮಾಡುವದು.


ತಮ್ಮ ಹಾಸಿಗೆಗಳಲ್ಲೇ ಅನ್ಯಾಯವನ್ನು ಯೋಚಿಸಿ ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ! ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೆ.


ಅವರು ಹೊಂಚಿಕೊಂಡಿರುವಾಗ ಆಹಾ, ತಮ್ಮ ಹೃದಯವನ್ನು ಒಲೆಯಂತೆ ಸಿದ್ಧಮಾಡಿರುತ್ತಾರೆ; ಅವರ ರೋಷಾಗ್ನಿಯು ರಾತ್ರಿಯೆಲ್ಲಾ ಹೊತ್ತಿಕೊಂಡೇ ಇರುತ್ತದೆ; ಬೆಳಿಗ್ಗೆ ಧಗಧಗನೆ ಉರಿಯುತ್ತದೆ.


ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ತಡಕಿದರೂ ಸಿಕ್ಕುವದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷವಿುಸುವೆನಲ್ಲವೆ. ಇದು ಯೆಹೋವನ ನುಡಿ.


ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ; ತುಟಿಗಳನ್ನು ತೆರೆದುಬಿಡುವವನು ನಾಶವಾಗುವನು.


ಯೆಹೋವನು ನನಗೆ ಆಲೋಚನೆಯನ್ನು ಹೇಳಿ ಕೊಡುತ್ತಾನೆ; ಆತನನ್ನು ಕೊಂಡಾಡುವೆನು. ರಾತ್ರಿ ಸಮಯಗಳಲ್ಲಿ ನನ್ನ ಅಂತರಾತ್ಮವು ನನ್ನನ್ನು ಬೋಧಿಸುತ್ತದೆ.


ಯೆಹೋವನು ನೀತಿವಂತರನ್ನೂ ಅನೀತಿವಂತರನ್ನೂ ಪರೀಕ್ಷಿಸುತ್ತಾನೆ; ಬಲಾತ್ಕಾರಿಗಳನ್ನು ದ್ವೇಷಿಸುತ್ತಾನೆ.


ವಿುತ್ರದ್ರೋಹಿಯೂ ಆಗಿದ್ದರೆ ಶತ್ರುವು ಹಿಂದಟ್ಟಿ ಬಂದು ನನ್ನನ್ನು ಹಿಡಿದು ನೆಲಕ್ಕೆ ಕೆಡವಿ ತುಳಿಯಲಿ;


ಕೊಲೆಪಾತಕನು ಮುಂಜಾನೆ ಎದ್ದು ದಿಕ್ಕಿಲ್ಲದ ಬಡವರನ್ನು ಕೊಂದು ರಾತ್ರಿಯಲ್ಲಿ ಕಳ್ಳನಂತಿರುವನು.


ಯೆಹೋವನು ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗನುಸಾರವಾದ ಫಲವನ್ನು ಕೊಡುವನು. ಆತನು ಈಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿ ಕೊಟ್ಟಿದ್ದರೂ ನೀನು ಯೆಹೋವನ ಅಭಿಷಿಕ್ತನೆಂದು ನಾನು ನಿನ್ನ ಮೇಲೆ ಕೈಹಾಕಲಿಲ್ಲ.


ಯೆಹೋವನೇ ನಮ್ಮ ಉಭಯರ ವ್ಯಾಜ್ಯವನ್ನು ತೀರಿಸಲಿ; ಆತನೇ ನನಗೋಸ್ಕರ ನಿನಗೆ ಮುಯ್ಯಿಸಲ್ಲಿಸಲಿ; ನಾನಂತೂ ನಿನಗೆ ವಿರೋಧವಾಗಿ ಕೈಯೆತ್ತುವದಿಲ್ಲ.


ಅಲ್ಲಿ ರಾತ್ರಿಕಾಲದಲ್ಲಿ ಪೌಲನಿಗೆ ಒಂದು ದರ್ಶನವಾಯಿತು, ಏನಂದರೆ - ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು - ನೀನು ಸಮುದ್ರವನ್ನು ದಾಟಿ ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕೆಂದು ಅವನನ್ನು ಬೇಡಿಕೊಳ್ಳುತ್ತಿದ್ದನು.


ಈಹೊತ್ತು ಯೆಹೋವನು ಗವಿಯಲ್ಲಿ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದನೆಂಬದು ಈಗ ನಿನಗೆ ಗೊತ್ತಾಯಿತಲ್ಲವೋ? ನಿನ್ನನ್ನು ಕೊಂದುಬಿಡಬೇಕೆಂದು ಕೆಲವರು ನನಗೆ ಹೇಳಿದರು; ಆದರೆ ನಾನು ಅವರಿಗೆ - ಯೆಹೋವನ ಅಭಿಷಿಕ್ತನಾದ ನನ್ನ ಒಡೆಯನ ಮೇಲೆ ಕೈಹಾಕುವದಿಲ್ಲ ಎಂದು ಹೇಳಿ ನಿನ್ನನ್ನು ಉಳಿಸಿದೆನು.


ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಶಿಕ್ಷಿತನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.


ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;


ನನ್ನಲ್ಲಿ ದೋಷವಿದೆಯೆಂದು ನನ್ನ ಬುದ್ಧಿಗೆ ತೋರುವದಿಲ್ಲವಾದರೂ ದೋಷವಿಲ್ಲದವನೆಂಬ ನಿರ್ಣಯವು ಇದರಿಂದಾಗುವದಿಲ್ಲ; ನನ್ನನ್ನು ವಿಚಾರಣೆಮಾಡುವವನು ಕರ್ತನೇ.


ತನ್ನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಯೆಹೋವನೇ ನನ್ನನ್ನು ತಡೆಯಲಿ. ಈಗ ಅವನ ತಲೆಯ ಬಳಿಯಲ್ಲಿರುವ ಬರ್ಜಿಯನ್ನೂ ತಂಬಿಗೆಯನ್ನೂ ತೆಗೆದುಕೊಂಡು ಹೋಗೋಣ ಎಂದು ಹೇಳಿ


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದೀ ಎಂಬದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ ಸ್ವೇಚ್ಫೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವೇಚ್ಫೆಯಿಂದಲೇ ನಿನಗೆ ಕಾಣಿಕೆಗಳನ್ನರ್ಪಿಸಿದ್ದಾರೆಂದು ನೋಡಿ ಸಂತೋಷಿಸುತ್ತೇನೆ.


ದೇವಾ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ; ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ಗೊತ್ತುಮಾಡು.


ಯೆಹೋವನೇ, ನೀನು ನನ್ನನ್ನು ತಿಳಿದಿದ್ದೀ, ನನ್ನನ್ನು ನೋಡುತ್ತಾ ನಿನ್ನೊಂದಿಗೆ ಅನ್ಯೋನ್ಯವಾಗಿರುವ ನನ್ನ ಹೃದಯವನ್ನು ಪರೀಕ್ಷಿಸುತ್ತೀ, ಅವರನ್ನು ಕುರಿಗಳನ್ನೋ ಎಂಬಂತೆ ಕೊಲೆಗೆ ಎಳೆದು ವಧೆಯ ದಿನಕ್ಕೆ ಗೊತ್ತುಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು