Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 17:4 - ಕನ್ನಡ ಸತ್ಯವೇದವು J.V. (BSI)

4 ನಾನಂತೂ ಲೋಕವ್ಯವಹಾರಗಳಲ್ಲಿ ಬಲಾತ್ಕಾರಿಗಳಂತೆ ನಡೆಯದೆ ನಿನ್ನ ಮಾತನ್ನೇ ಅನುಸರಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನಂತೂ ಲೋಕವ್ಯವಹಾರಗಳಲ್ಲಿ ಬಲಾತ್ಕಾರಿಗಳಂತೆ ನಡೆಯದೆ ನಿನ್ನ ಮಾತನ್ನೇ ಅನುಸರಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಲೋಕವಿಚಾರಗಳಲಿ ಹಿಂಸಾತ್ಮಕ ಮಾರ್ಗ ಹಿಡಿದಿಲ್ಲ I ನಿನ್ನಧರ ವಚನವನು ನಾನೆಂದಿಗು ಮೀರಿ ನಡೆದಿಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ನನ್ನಿಂದಾದಷ್ಟು ಪ್ರಯತ್ನಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮನುಷ್ಯರು ನನಗೆ ಲಂಚ ನೀಡಲು ಪ್ರಯತ್ನಿಸಿದರೂ, ನಿಮ್ಮ ತುಟಿಗಳ ಆಜ್ಞಾನುಸಾರ ನಾನು ಹಿಂಸಕರ ಮಾರ್ಗಗಳಿಂದ ನನ್ನನ್ನು ದೂರವಾಗಿಟ್ಟುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 17:4
20 ತಿಳಿವುಗಳ ಹೋಲಿಕೆ  

ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ; ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ಯಾಕಂದರೆ ಇನ್ನೂ ಶರೀರಾಧೀನಸ್ವಭಾವವುಳ್ಳವರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು ಜಗಳಗಳು ಇರುವಲ್ಲಿ ನೀವು ಶರೀರಾಧೀನಸ್ವಭಾವವುಳ್ಳವರಾಗಿದ್ದು ಕೇವಲ ನರಪ್ರಾಣಿಗಳಂತೆ ನಡೆಯುತ್ತೀರಲ್ಲವೇ.


ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಮರಣಕ್ಕೆ ಹಿಂತೆಗೆಯದೆ ಯಜ್ಞದ ಕುರಿಯಾದಾತನ ರಕ್ತದ ಬಲದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಜಯಿಸಿದರು.


ಆತನು ತನ್ನ ಸುಚಿತ್ತದ ಪ್ರಕಾರ ಸತ್ಯಬೋಧನೆಯ ವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಆತನ ಸೃಷ್ಟಿಗಳಲ್ಲಿ ಪ್ರಥಮಫಲದಂತಾದೆವು.


ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ.


ಇವರನ್ನು ಸತ್ಯದಲ್ಲಿ ಸೇರಿಸಿ ಪ್ರತಿಷ್ಠೆ ಪಡಿಸು; ನಿನ್ನ ವಾಕ್ಯವೇ ಸತ್ಯವು.


ಯೇಸು ಅವನಿಗೆ - ಸೈತಾನನೇ, ನೀನು ತೊಲಗಿ ಹೋಗು. ನಿನ್ನ ದೇವರಾಗಿರುವ ಕರ್ತನಿಗೆ ಅಡ್ಡಬಿದ್ದು ಆತನೊಬ್ಬನನ್ನೇ ಆರಾಧಿಸಬೇಕು ಎಂಬದಾಗಿ ಬರೆದದೆ ಎಂದು ಹೇಳಿದನು.


ಅದಕ್ಕೆ ಯೇಸು - ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದು ಎಂಬದಾಗಿ ಸಹ ಬರೆದದೆ ಅಂದನು.


ಮನುಷ್ಯನು ರೊಟ್ಟಿತಿಂದ ಮಾತ್ರದಿಂದ ಬದುಕುವದಿಲ್ಲ, ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುವನು ಎಂದು ಬರೆದದೆ ಅಂದನು.


ಅಧೋಲೋಕದ ಅಧಿಕಾರಿಯಾದ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರುಂಟು.


ನಾನು ಜನಸಮುದಾಯಕ್ಕೆ ಹೆದರಿದ್ದರಿಂದಾಗಲಿ ಕುಲೀನರ ತಿರಸ್ಕಾರವು ನನಗೆ ಭಯ ಹುಟ್ಟಿಸಿದ್ದರಿಂದಾಗಲಿ


ಹೀಗಿರಲು ಅಧರ್ಮವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ ಕೆಟ್ಟವನೂ ಆದ ನರಜನ್ಮದವನು ಮತ್ತೂ ಅಶುದ್ಧನಲ್ಲವೇ!


ಭೂಲೋಕದವರು ದೇವರ ದೃಷ್ಟಿಗೆ ಕೆಟ್ಟುಹೋಗಿದ್ದರು; ಅನ್ಯಾಯವು ಲೋಕವನ್ನು ತುಂಬಿಕೊಂಡಿತ್ತು.


ಮನುಷ್ಯರ ಕೆಟ್ಟತನವು ಭೂವಿುಯ ಮೇಲೆ ಹೆಚ್ಚಾಗಿರುವದನ್ನೂ ಅವರು ಹೃದಯದಲ್ಲಿ ಯೋಚಿಸುವದೆಲ್ಲವು ಯಾವಾಗಲೂ ಬರೀ ಕೆಟ್ಟದ್ದಾಗಿರುವದನ್ನೂ


ಆದರೆ ದಾವೀದನು - ಅವನನ್ನು ಕೊಲ್ಲಬೇಡ; ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನಾದರೂ ನಿರಪರಾಧಿಯೆಂದು ಎಣಿಸಲ್ಪಡುವನೋ ಅಂದನು.


ತನ್ನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಯೆಹೋವನೇ ನನ್ನನ್ನು ತಡೆಯಲಿ. ಈಗ ಅವನ ತಲೆಯ ಬಳಿಯಲ್ಲಿರುವ ಬರ್ಜಿಯನ್ನೂ ತಂಬಿಗೆಯನ್ನೂ ತೆಗೆದುಕೊಂಡು ಹೋಗೋಣ ಎಂದು ಹೇಳಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು