Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 17:5 - ಕನ್ನಡ ಸತ್ಯವೇದವು J.V. (BSI)

5 ನಿನ್ನ ಮಾರ್ಗದಲ್ಲಿ ಹೆಜ್ಜೆಯಿಟ್ಟು ನಡೆಯುತ್ತಾ ಇದ್ದೇನೆ; ನನ್ನ ಕಾಲು ಜಾರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನ ಮಾರ್ಗದಲ್ಲೇ ಹೆಜ್ಜೆಯಿಟ್ಟು ನಡೆಯುತ್ತಾ ಇದ್ದೇನೆ; ನನ್ನ ಕಾಲು ಜಾರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿನ್ನ ಮಾರ್ಗದಿಂದ ಕಾಲು ಜಾರಲು ಬಿಡದೆ I ನಿನ್ನ ಪಥದಲಿ ದಿಟ್ಟ ಹೆಜ್ಜೆಯಿಟ್ಟು ನಡೆದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿನ್ನ ಜೀವಮಾರ್ಗದಲ್ಲೇ ಹೆಜ್ಜೆಯಿಡುತ್ತಾ ನಡೆಯುತ್ತಿದ್ದೇನೆ. ನನ್ನ ಪಾದವು ತಪ್ಪು ದಾರಿಗೆ ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನನ್ನ ಹೆಜ್ಜೆಗಳು ಜಾರದ ಹಾಗೆ ನನ್ನ ನಡೆಗಳನ್ನು ನಿಮ್ಮ ದಾರಿಯಲ್ಲಿ ಸ್ಥಿರಪಡಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 17:5
12 ತಿಳಿವುಗಳ ಹೋಲಿಕೆ  

ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಕಾಲು ನಿನ್ನ ದಾರಿಯಿಂದ ಅಗಲಲಿಲ್ಲ.


ನಿನ್ನ ನುಡಿಗನುಸಾರವಾಗಿ ನನ್ನ ಹೆಜ್ಜೆಯನ್ನು ದೃಢಪಡಿಸು; ಯಾವ ಅನ್ಯಾಯವಾದರೂ ನನ್ನನ್ನು ಆಳದಂತೆ ಮಾಡು.


ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು; ನಿನ್ನ ಪ್ರಾಣವನ್ನು ಕಾಯುವನು.


ಆತನು ನಿನ್ನ ಪಾದಗಳನ್ನು ಕದಲಗೊಡಿಸದಿರಲಿ; ನಿನ್ನನ್ನು ಕಾಯುವವನು ತೂಕಡಿಸದಿರಲಿ.


ನನ್ನ ವಿಷಯದಲ್ಲಿ ಶತ್ರುಗಳಿಗೆ ಸಂತೋಷವಾಗಬಾರದು; ನಾನು ಜಾರಿಬಿದ್ದರೆ ಹಿಗ್ಗುವರಲ್ಲಾ ಅಂದುಕೊಂಡೆನು.


ನೀನು ನನ್ನ ಕಾಲುಗಳಿಗೆ ವಿಶಾಲಸ್ಥಳವನ್ನು ಕೊಟ್ಟದ್ದರಿಂದ ನನ್ನ ಹರಡುಗಳು ಕದಲುವದಿಲ್ಲ.


ಯೆಹೋವನೇ, ನನ್ನ ಕಾಲು ಜಾರಿತೆಂದು ಅಂದಾಗಲೇ ನಿನ್ನ ಕೃಪೆಯು ನನಗೆ ಆಧಾರವಾಯಿತು.


ಆತನು ತನ್ನ ಭಕ್ತರ ಹೆಜ್ಜೆಗಳನ್ನು ಕಾಯುವನು; ದುಷ್ಟರು ಅಂಧಕಾರದಲ್ಲಿ ಮುಳುಗಿ ಮೌನಹೊಂದುವರು. ಬಾಹುಬಲದಿಂದಲೇ ಯಾವನೂ ಜಯಹೊಂದಲಾರನು.


ಯೆಹೋವನೇ, ಮಾನವನ ಮಾರ್ಗವು ಅವನ ಸ್ವಾಧೀನದಲ್ಲಿಲ್ಲವೆಂದು ನನಗೆ ಗೊತ್ತು; ಮನುಷ್ಯನು ನಡೆದಾಡುತ್ತಾ ಸರಿಯಾದ ಕಡೆಗೆ ತನ್ನ ಹೆಜ್ಜೆಯನ್ನಿಡಲಾರನು.


ಆತನ ಹೆಜ್ಜೆಯ ಜಾಡಿನಲ್ಲೇ ಕಾಲಿಟ್ಟಿದ್ದೇನೆ, ಓರೆಯಾಗದೆ ಆತನ ದಾರಿಯನ್ನೇ ಹಿಡಿದಿದ್ದೇನೆ.


ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದುಕೊಳ್ಳುವೆನು; ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು